
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ನವೆಂಬರ್ 29) ಹೊಸದಾಗಿ 257 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,95,857 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,50,747 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 5 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,203 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 6,878 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಇಂದು ಒಂದೇ ದಿನ 131 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,56,267 ಕ್ಕೆ ಏರಿಕೆಯಾಗಿದೆ. 12,56,267 ಸೋಂಕಿತರ ಪೈಕಿ 12,34,627 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,331 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 5,308 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.
ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ
ಬಾಗಲಕೋಟೆ 0, ಬಳ್ಳಾರಿ 1, ಬೆಳಗಾವಿ 0, ಬೆಂಗಳೂರು ಗ್ರಾಮಾಂತರ 2, ಬೆಂಗಳೂರು ನಗರ 131, ಬೀದರ್ 0, ಚಾಮರಾಜನಗರ 8, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 1, ಚಿತ್ರದುರ್ಗ 0, ದಕ್ಷಿಣ ಕನ್ನಡ 11, ದಾವಣಗೆರೆ 1, ಧಾರವಾಡ 11, ಗದಗ 0, ಹಾಸನ 21, ಹಾವೇರಿ 0, ಕಲಬುರಗಿ 0, ಕೊಡಗು 14, ಕೋಲಾರ 2, ಕೊಪ್ಪಳ 0, ಮಂಡ್ಯ 0, ಮೈಸೂರು 15, ರಾಯಚೂರು 0, ರಾಮನಗರ 0, ಶಿವಮೊಗ್ಗ 4, ತುಮಕೂರು 23, ಉಡುಪಿ 7, ಉತ್ತರ ಕನ್ನಡ 5, ವಿಜಯಪುರ 0, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.
ಕೊರೊನಾದಿಂದ ಮೃತಪಟ್ಟವರ ವಿವರ
ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಇಬ್ಬರು ಸಾವನ್ನಪ್ಪಿದ್ದಾರೆ. ಉತ್ತರ ಕನ್ನಡ, ತುಮಕೂರು ಹಾಗೂ ಕೋಲಾರ ಜಿಲ್ಲೆಯಲ್ಲಿ ಕೊವಿಡ್19 ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಕೊರೊನಾದಿಂದ ಸಾವು ಸಂಭವಿಸಿಲ್ಲ.
ಇದನ್ನೂ ಓದಿ: ಕೊರೊನಾ 3ನೆಯ ಅಲೆ ಮುನ್ನೆಲೆ ಸರ್ಕಾರದ ಮುಂದೆ ಲಾಕ್ಡೌನ್ ಪ್ರಸ್ತಾವನೆ ಇಲ್ಲ -ಸಚಿವ ಡಾ. ಕೆ. ಸುಧಾಕರ್
ಇದನ್ನೂ ಓದಿ: ದಕ್ಷಿಣ ಆಫ್ರಿಕಾದಿಂದ ಬಂದಿದ್ದ ಒಬ್ಬರಲ್ಲಿ ಒಮಿಕ್ರಾನ್ ಲಕ್ಷಣ; ವರದಿಗಾಗಿ ಕಾಯುತ್ತಿದ್ದೇವೆ: ಬಸವರಾಜ ಬೊಮ್ಮಾಯಿ