Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 291 ಜನರಿಗೆ ಕೊರೊನಾ ದೃಢ; 8 ಮಂದಿ ಸಾವು
ಬೆಂಗಳೂರಿನಲ್ಲಿ ಇಂದು ಒಂದೇ ದಿನ 185 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,56,452 ಕ್ಕೆ ಏರಿಕೆಯಾಗಿದೆ. 12,56,452 ಸೋಂಕಿತರ ಪೈಕಿ 12,35,281 ಜನರು ಗುಣಮುಖರಾಗಿದ್ದಾರೆ.
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ನವೆಂಬರ್ 30) ಹೊಸದಾಗಿ 291 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,96,148 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,51,492 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 8 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,211 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 6,416 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಇಂದು ಒಂದೇ ದಿನ 185 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,56,452 ಕ್ಕೆ ಏರಿಕೆಯಾಗಿದೆ. 12,56,452 ಸೋಂಕಿತರ ಪೈಕಿ 12,35,281 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 6 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,337 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 4,833 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.
ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ ಬಾಗಲಕೋಟೆ 1, ಬಳ್ಳಾರಿ 1, ಬೆಳಗಾವಿ 5, ಬೆಂಗಳೂರು ಗ್ರಾಮಾಂತರ 2, ಬೆಂಗಳೂರು ನಗರ 185, ಬೀದರ್ 1, ಚಾಮರಾಜನಗರ 3, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 0, ಚಿತ್ರದುರ್ಗ 2, ದಕ್ಷಿಣ ಕನ್ನಡ 19, ದಾವಣಗೆರೆ 1, ಧಾರವಾಡ 9, ಗದಗ 1, ಹಾಸನ 3, ಹಾವೇರಿ 0, ಕಲಬುರಗಿ 1, ಕೊಡಗು 4, ಕೋಲಾರ 1, ಕೊಪ್ಪಳ 2, ಮಂಡ್ಯ 1, ಮೈಸೂರು 28, ರಾಯಚೂರು 0, ರಾಮನಗರ 0, ಶಿವಮೊಗ್ಗ 8, ತುಮಕೂರು 5, ಉಡುಪಿ 7, ಉತ್ತರ ಕನ್ನಡ 1, ವಿಜಯಪುರ 0, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.
ಇಂದಿನ 30/11/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/iCiGwojoqd
@CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/C7i1vxPBLq
— K’taka Health Dept (@DHFWKA) November 30, 2021
ಕೊರೊನಾದಿಂದ ಮೃತಪಟ್ಟವರ ವಿವರ ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ 6 ಮಂದಿ ಸಾವನ್ನಪ್ಪಿದ್ದಾರೆ. ಮೈಸೂರು ಹಾಗೂ ಬೀದರ್ ಜಿಲ್ಲೆಯಲ್ಲಿ ಕೊವಿಡ್19 ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಕೊರೊನಾದಿಂದ ಸಾವು ಸಂಭವಿಸಿಲ್ಲ.
ಒಮಿಕ್ರಾನ್ ಸೋಂಕಿನ ಭೀತಿ ಹಿನ್ನೆಲೆ ಕೆಐಎಬಿಗೆ ಕೊವಿಡ್ ನೋಡಲ್ ಅಧಿಕಾರಿ ಸಿ.ಶಿಖಾ ಭೇಟಿ ರಾಜ್ಯದಲ್ಲಿ ಕೊರೊನಾ ಒಮಿಕ್ರಾನ್ ಸೋಂಕಿನ ಭೀತಿ ಹಿನ್ನೆಲೆ ಕೆಐಎಬಿಗೆ ಕೊವಿಡ್ ನೋಡಲ್ ಅಧಿಕಾರಿ ಸಿ.ಶಿಖಾ ಆಗಮಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಶ್ರೀನಿವಾಸ್ ಕೂಡ ಆಗಮಿಸಿದ್ದಾರೆ. ಏರ್ಪೋರ್ಟ್ನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಹೈರಿಸ್ಕ್ ದೇಶಗಳಿಂದ ಬರುವವರ ಮೇಲೆ ನಿಗಾ ವಹಿಸಲು ಕ್ರಮ ಕೈಗೊಳ್ಳುವ ಬಗ್ಗೆ ಏರ್ಪೋರ್ಟ್ ಟರ್ಮಿನಲ್ಲಿ ಅಧಿಕಾರಿಗಳ ಜೊತೆ ಸಿ.ಶಿಖಾ ಸಭೆ ನಡೆಸಿದ್ದಾರೆ.
ಒಮಿಕ್ರಾನ್ ತಡೆಯಲು ಕೇಂದ್ರದಿಂದ ಗೈಡ್ಲೈನ್ಸ್ ಬಂದಿದೆ. ರಾಜ್ಯ ಸರ್ಕಾರ ಯಾವ ಕ್ರಮ ಕೈಗೊಳ್ಳಬೇಕೆಂದು ಸಭೆ ನಡೆಸ್ತೇವೆ. ಪೊಲೀಸರು, ಆರೋಗ್ಯ, ಏರ್ಪೋರ್ಟ್ ಅಧಿಕಾರಿಗಳ ಜತೆ ಸಭೆ ಮಾಡುತ್ತೇವೆ. ಯಾವ ಕ್ರಮಕೈಗೊಳ್ಳಬೇಕೆಂಬ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡ್ತೇವೆ ಎಂದು ಕೆಐಎಬಿಯಲ್ಲಿ ಕೊವಿಡ್ ನೋಡಲ್ ಅಧಿಕಾರಿ ಸಿ.ಶಿಖಾ ಹೇಳಿಕೆ ನೀಡಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಕೆ.ಸುಧಾಕರ್, ಒಮಿಕ್ರಾನ್ ತಳಿ ಕುರಿತು ನಡೆಸಿದ ಸಭೆ ಬಗ್ಗೆ ಅಪ್ಡೇಟ್ ಮಾಡಿದ್ದಾರೆ. ಸಿಎಂ ಬೊಮ್ಮಾಯಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಎರಡು ಪ್ರಮುಖ ಸಭೆಗಳ ಬಗ್ಗೆ ಮಾಹಿತಿ ತಿಳಿಸಿದ್ದಾರೆ. ಆರೋಗ್ಯ ಇಲಾಖೆ ಅಧಿಕಾರಿಗಳು, ತಾಂತ್ರಿಕ ಸಮಿತಿ ತಜ್ಞರ ಜತೆ ನಡೆಸಿದ ಸಭೆಯ ಅಪ್ಡೇಟ್ ನೀಡಿದ್ದಾರೆ. ತಜ್ಞರು ನೀಡಿರುವ ಶಿಫಾರಸು ಸಿಎಂ ಗಮನಕ್ಕೆ ತಂದಿದ್ದಾರೆ. ಟ್ರೀಟ್ಮೆಂಟ್ ಪ್ರೋಟೋಕಾಲ್ ಕಮಿಟಿ ರಚನೆ ಬಗ್ಗೆ ಮಾಹಿತಿ ನೀಡಿದ್ದಾರೆ. ತಜ್ಞ ವೈದ್ಯ ರವಿ ನೇತೃತ್ವದಲ್ಲಿ ಪ್ರೋಟೋಕಾಲ್ ಕಮಿಟಿ ರಚನೆ ಮಾಡಲಾಗಿದೆ.
ಇದನ್ನೂ ಓದಿ: ಒಮಿಕ್ರಾನ್ ಆತಂಕ: ದೇಶಾದ್ಯಂತ ಕೊರೊನಾ ಕಂಟೇನ್ಮೆಂಟ್ ಕಾರ್ಯತಂತ್ರ ಡಿಸೆಂಬರ್ 31ರವರೆಗೆ ವಿಸ್ತರಣೆ
ಇದನ್ನೂ ಓದಿ: ಧಾರವಾಡ: 15 ದಿನಗಳಲ್ಲಿ ಎಸ್ಡಿಎಮ್ ಆಸ್ಪತ್ರೆಗೆ ಹೋಗಿ ಬಂದವರಿಗೆ ಕೊರೊನಾ ಪರೀಕ್ಷೆ ಮಾಡಲು ನಿರ್ಧಾರ
Published On - 8:14 pm, Tue, 30 November 21