Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೈಜೀರಿಯಾ ಪ್ರಜೆಗಳಿಂದ ಪೊಲೀಸರ ಮೇಲೆ ಹಲ್ಲೆ ಪ್ರಕರಣ; 8 ಆರೋಪಿಗಳು ವಶಕ್ಕೆ

ನೈಜೀರಿಯಾ ಪ್ರಜೆಗಳಿಂದ ಪೊಲೀಸರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ 8 ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಕಳೆದ ರಾತ್ರಿ(ಏ.18) ಡ್ರಗ್​ ಪೆಡ್ಲರ್​ ಇರುವ ಕುರಿತು ಮಾಹಿತಿ ಬಂದ ಹಿನ್ನಲೆ ಸಿಸಿಬಿ ಪೊಲೀಸರು ರಾಜನಕುಂಟೆ ಪೊಲೀಸ್​ ಠಾಣೆಯ ಮಾವಳ್ಳಿ ಪುರದಲ್ಲಿ ಪರಿಶೀಲನೆಗೆ ತೆರಳಿದ್ದರು. ಈ ವೇಳೆ ತಪ್ಪಿಸಿಕೊಳ್ಳಲು ಮುಂದಾದ ನೈಜೀರಿಯಾ ಪ್ರಜೆಗಳು  ಸೇರಿಕೊಂಡು ಸಿಸಿಬಿ ಇನ್ಸ್ ಪೆಕ್ಟರ್ ಸುಬ್ರಹ್ಮಣ್ಯಸ್ವಾಮಿ ಸೇರಿದಂತೆ ಐದಕ್ಕೂ ಹೆಚ್ಚು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದರು.

ನೈಜೀರಿಯಾ ಪ್ರಜೆಗಳಿಂದ ಪೊಲೀಸರ ಮೇಲೆ ಹಲ್ಲೆ ಪ್ರಕರಣ; 8 ಆರೋಪಿಗಳು ವಶಕ್ಕೆ
ನೈಜೀರಿಯಾ ಆರೋಪಿಗಳ ಬಂಧನ
Follow us
Shivaprasad
| Updated By: ಕಿರಣ್ ಹನುಮಂತ್​ ಮಾದಾರ್

Updated on: Apr 19, 2024 | 9:03 PM

ಬೆಂಗಳೂರು, ಏ.19: ಸಿಸಿಬಿ ಪೊಲೀಸರ(CCB Police) ಮೇಲೆಯೇ ನೈಜೀರಿಯಾ ಪ್ರಜೆಗಳು ಹಲ್ಲೆಗೈದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬೆಂಗಳೂರಿನ ರಾಜಾನುಕುಂಟೆ ಬಳಿ 8 ನೈಜೀರಿಯಾ ಪ್ರಜೆಗಳನ್ನು ವಶಕ್ಕೆ ಪಡೆಯಲಾಗಿದೆ. ಹಲ್ಲೆ ಹಿನ್ನಲೆ ಇಂದು(ಏ.19) ನೈಜೀರಿಯಾ ಪ್ರಜೆಗಳ ಪತ್ತೆಗೆ ರಾಜ್ಯದ ಅರೆಸೇನಾ ತುಕಡಿ (ಡಿಸ್ವ್ಯಾಟ್ ಪಡೆ)ಯನ್ನು ಪೊಲೀಸರು ಕರೆದೊಯ್ದಿದಿದ್ದು, ಆರೋಪಿಗಳನ್ನು ಬಂಧಿಸಿ ಕರೆತರಲಾಗುತ್ತಿದೆ.

ಘಟನೆ ವಿವರ

ಕಳೆದ ರಾತ್ರಿ(ಏ.18) ಡ್ರಗ್​ ಪೆಡ್ಲರ್​ ಇರುವ ಕುರಿತು ಮಾಹಿತಿ ಬಂದ ಹಿನ್ನಲೆ ಸಿಸಿಬಿ ಪೊಲೀಸರು ರಾಜನಕುಂಟೆ ಪೊಲೀಸ್​ ಠಾಣೆಯ ಮಾವಳ್ಳಿ ಪುರದಲ್ಲಿ ಪರಿಶೀಲನೆಗೆ ತೆರಳಿದ್ದರು. ಈ ವೇಳೆ ತಪ್ಪಿಸಿಕೊಳ್ಳಲು ಮುಂದಾದ ನೈಜೀರಿಯಾ ಪ್ರಜೆಗಳು  ಸೇರಿಕೊಂಡು ಸಿಸಿಬಿ ಇನ್ಸ್ ಪೆಕ್ಟರ್ ಸುಬ್ರಹ್ಮಣ್ಯಸ್ವಾಮಿ ಸೇರಿದಂತೆ ಐದಕ್ಕೂ ಹೆಚ್ಚು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದರು. ತಕ್ಷಣ ಸಿಸಿಬಿ ಪೊಲೀಸರು 112 ಗೆ ಕರೆ ಮಾಡಿದ್ದರು. ಕೂಡಲೇ ಘಟನಾ ಸ್ಥಳಕ್ಕೆ ರಾಜಾನುಕುಂಟೆ ಹೊಯ್ಸಳ ಸಿಬ್ಬಂದಿಗಳು ಬಂದಿದ್ದಾರೆ. ಹೊಯ್ಸಳ ಸಿಬ್ಬಂದಿ ಮೇಲೂ ಹಲ್ಲೆ ಮಾಡಿ ಪರಾರಿಯಾಗಿದ್ದರು.

ಇದನ್ನೂ ಓದಿ:ಚುನಾವಣೆಯಲ್ಲಿ ಟೇಬಲ್ ಹಾಕದಂತೆ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ; ಕಾಂಗ್ರೆಸ್ ಮುಖಂಡ ಸೇರಿದಂತೆ 6 ಮಂದಿ ವಿರುದ್ದ FIR

ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ

ಇನ್ನು ಸಿಸಿಬಿ ಒಂದು ಜೀಪ್ ಹಾಗೂ ರಾಜಾನುಕುಂಟೆ ಪೊಲೀಸ್ ಠಾಣೆಯ ಹೊಯ್ಸಳ ಜೀಪ್​ನ ಗಾಜನ್ನು ಕಬ್ಬಿಣದ ರಾಡು, ಕಲ್ಲಿನಿಂದ ಪುಡಿ ಮಾಡಿದ್ದರು. ಘಟನೆಯಲ್ಲಿ ಗಾಯಗೊಂಡ ಸಿಬ್ಬಂದಿಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಬೆಂಗಳೂರು ಗ್ರಾಮಾಂತರ ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ ಆಸ್ಪತ್ರೆಗೆ ಆಗಮಿಸಿ ಗಾಯಾಳು ಸಿಬ್ಬಂದಿ ಆರೋಗ್ಯ ವಿಚಾರಸಿದರು. ನಂತರ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಆರೋಪಿಗಳ ಪತ್ತೆಗೆ ರಾತ್ರಿ ಇಡೀ ಕಾರ್ಯಾಚರಣೆ ನಡೆಸಿದ್ದರು. ಇದೀಗ ಎಂಟು ಆರೋಪಿಗಳನ್ನು ಬಂಧಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ