ಏ.23 ರಂದು ಬೆಂಗಳೂರು ಕರಗ ಮಹೋತ್ಸವ; ಈ ನಾಲ್ಕು ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ

ಐತಿಹಾಸಿಕ ಬೆಂಗಳೂರು ಕರಗ (Bengaluru Karaga) ಮಹೋತ್ಸವ ಶುರುವಾಗಿದ್ದು, ಏ.23 ರಂದು ಕರಗ ಶಕ್ತ್ಯೋತ್ಸವ ನಡೆಯಲಿದೆ. ಈ ಬಾರಿಯೂ ಪೂಜಾರಿ ಎ.ಜ್ಞಾನೇಂದ್ರ (A Jnanendra) ಅವರು ಕರಗ ಹೊರಲಿದ್ದಾರೆ. ಈ ಮೂಲಕ ಜ್ಞಾನೇಂದ್ರ ಅವರು 14ನೇ ಬಾರಿ ಬೆಂಗಳೂರು ಕರಗ ಹೊರುತ್ತಿದ್ದಾರೆ. ಈ ಹಿನ್ನಲೆ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಕೆಲವು ಕಡೆಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಏ.23 ರಂದು ಬೆಂಗಳೂರು ಕರಗ ಮಹೋತ್ಸವ; ಈ ನಾಲ್ಕು ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ
ಬೆಂಗಳೂರು ಕರಗ
Follow us
Jagadisha B
| Updated By: ಕಿರಣ್ ಹನುಮಂತ್​ ಮಾದಾರ್

Updated on:Apr 21, 2024 | 4:52 PM

ಬೆಂಗಳೂರು, ಏ.21: ಪ್ರಸಿದ್ಧ ಐತಿಹಾಸಿಕ ಬೆಂಗಳೂರು ಕರಗ (Bengaluru Karaga) ಮಹೋತ್ಸವ ಶುರುವಾಗಿದ್ದು, ಏ.23 ರಂದು ಕರಗ ಶಕ್ತ್ಯೋತ್ಸವ ನಡೆಯಲಿದೆ. ಈ ಹಿನ್ನಲೆ  ಮುನ್ನೆಚ್ಚರಿಕೆ ಸಲುವಾಗಿ ಏಪ್ರಿಲ್​.23ರ ಬೆಳಗ್ಗೆ 6 ರಿಂದ ಏ. 24 ಬೆಳಗ್ಗೆ ‌10 ಗಂಟೆಯವರೆಗೆ ಬೆಂಗಳೂರಿನ ನಾಲ್ಕು ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಜೊತೆಗೆ ಈ ಬಾರಿಯೂ ಪೂಜಾರಿ ಎ.ಜ್ಞಾನೇಂದ್ರ (A Jnanendra) ಅವರು ಕರಗ ಹೊರಲಿದ್ದಾರೆ. ಈ ಮೂಲಕ ಜ್ಞಾನೇಂದ್ರ ಅವರು 14ನೇ ಬಾರಿ ಬೆಂಗಳೂರು ಕರಗ ಹೊರುತ್ತಿದ್ದಾರೆ.

ಮದ್ಯ ನಿಷೇಧ ಎಲ್ಲೆಲ್ಲಿ?

ಇನ್ನು ಕರಗ ಮಹೋತ್ಸವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನ ಭಾಗಿಯಾಗುತ್ತಾರೆ. ಈ ವೇಳೆ ಕೆಲವು ಕಿಡಿಗೇಡಿಗಳು ಮದ್ಯದ ಅಮಲಿನಲ್ಲಿ ಕಾನೂನು ಬಾಹಿರ ಕೃತ್ಯ ಎಸಗುವ ಸಾದ್ಯತೆಯಿದ್ದು, ಸಾರ್ವಜನಿಕರ ಶಾಂತಿಗೆ‌ ಭಂಗ ಉಂಟು ಮಾಡುವ ಸಂಭವವಿದೆ. ಈ ಹಿನ್ನಲೆ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಹಲಸೂರು ಗೇಟ್, ಎಸ್ಆರ್ ನಗರ, ವಿಲ್ಸನ್ ಗಾರ್ಡನ್, ಎಸ್ ಜೆ ಪಾರ್ಕ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ ಮಾಡುವಂತೆ ಕಮೀಷನರ್ ದಯಾನಂದ ಅವರು ಅದೇಶಿಸಿದ್ದಾರೆ.

ಇದನ್ನೂ ಓದಿ: ಐತಿಹಾಸಿಕ ಬೆಂಗಳೂರು ಕರಗ ಬಗ್ಗೆ ನಿಮಗೆಷ್ಟು ಗೊತ್ತು? ಮೆರವಣಿಗೆ ವೇಳೆ ಕರಗ ದರ್ಗಾಗೆ ಹೋಗುವುದೇಕೆ?

ಕರಗವನ್ನು ಹೊರುವವರು ಮಹಿಳೆಯಂತೆ ಅಲಂಕಾರ

ಹಿಂದೂ ಮಹಾಕಾವ್ಯವಾದ ಮಹಾಭಾರತದಲ್ಲೂ ಕರಗ ಉತ್ಸವದ ಉಲ್ಲೇಖವನ್ನು ಗಮನಿಸಬಹುದು. ಕರಗವು ದ್ರೌಪದಿಯನ್ನು ಸರ್ವೋತ್ಕೃಷ್ಟ ಮಹಿಳೆ ಎಂದು ಚಿತ್ರಿಸುತ್ತದೆ ಮತ್ತು ಅವಳನ್ನು ಶಕ್ತಿ ದೇವತೆ ಎಂದು ಗೌರವಿಸುತ್ತದೆ.  ಕರಗವನ್ನು ಹೊರುವವರು ಮಹಿಳೆಯಂತೆ ಅಲಂಕಾರ ಮಾಡಿಕೊಳ್ಳಬೇಕು. ಕಂಕಣ, ಮಂಗಳ-ಸೂತ್ರ, ಹಣೆಯ ಮೇಲೆ ಸಿಂಧೂರ ಇಟ್ಟುಕೊಂಡು ಮುತೈದೆಯಂತೆ ಕಾಣಬೇಕು. ಈ ರೀತಿ ಅಲಂಕಾರ ಮಾಡಿಕೊಂಡೇ ಕರಗವನ್ನು ಹೊರಬೇಕು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:45 pm, Sun, 21 April 24

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM