AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಮತ್ಕಾರಿ ಪಾತ್ರೆ ಎಂದು ನಂಬಿಸಿ ಕೋಟಿ ಕೋಟಿ ವಂಚನೆ; ಮೂವರು ಆರೋಪಿಗಳು ಅಂದರ್​

ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ವಂಚಕರ ಸಂಖ್ಯೆ ಹೆಚ್ಚುತ್ತಿದ್ದು, ಹಲವಾರು ಪ್ರಕರಣಗಳು ದಾಖಲಾಗುತ್ತಿದೆ. ಅದರಂತೆ ಚಮತ್ಕಾರಿ ಪಾತ್ರೆ ಎಂದು ನಂಬಿಸಿ ಉದ್ಯಮಿಯೊಬ್ಬರಿಗೆ ಕೋಟ್ಯಾಂತರ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜಯನಗರ ಪೊಲೀಸರು(Jayanagar Police) ಮೂವರು ವಂಚಕರನ್ನು ಬಂಧಿಸಿದ್ದಾರೆ.

ಚಮತ್ಕಾರಿ ಪಾತ್ರೆ ಎಂದು ನಂಬಿಸಿ ಕೋಟಿ ಕೋಟಿ ವಂಚನೆ; ಮೂವರು ಆರೋಪಿಗಳು ಅಂದರ್​
ಬಂಧಿತ ಆರೋಪಿಗಳು
ಪ್ರಜ್ವಲ್​ ಕುಮಾರ್ ಎನ್​ ವೈ
| Updated By: ಕಿರಣ್ ಹನುಮಂತ್​ ಮಾದಾರ್|

Updated on: Apr 19, 2024 | 4:40 PM

Share

ಬೆಂಗಳೂರು, ಏ.19: ಚಮತ್ಕಾರಿ ಪಾತ್ರೆ ಎಂದು ನಂಬಿಸಿ ಉದ್ಯಮಿಯೊಬ್ಬರಿಗೆ ಕೋಟ್ಯಾಂತರ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜಯನಗರ ಪೊಲೀಸರು(Jayanagar Police) ಮೂವರು ವಂಚಕರನ್ನು ಬಂಧಿಸಿದ್ದಾರೆ. ಶಿವಶಂಕರ್, ಅಬ್ದುಲ್ ಸುಕ್ಕುರ್ ಹಾಗೂ ಸನ್ನಿ ಗಿಲ್ ಬಂಧಿತ ಆರೋಪಿಗಳು. ಇವರಿಂದ 70 ಲಕ್ಷ ರೂ. ನಗದು ಸೇರಿದಂತೆ ಒಂದು ಪಾತ್ರೆಯನ್ನ ವಶಕ್ಕೆ ಪಡೆಯಲಾಗಿದೆ.

70 ಲಕ್ಷಕ್ಕೆ ಡೀಲ್ ಕುದುರಿಸಿದ್ದ ವಂಚಕರ ಗ್ಯಾಂಗ್

ಇನ್ನು ಆಪಾರ ಶಕ್ತಿ ಇರುವ ಅದೃಷ್ಟದ ಪಾತ್ರೆ ಇದಾಗಿದೆ. ಮಾರ್ಕೆಟ್​ನಲ್ಲಿ ಇದಕ್ಕೆ ಕೋಟ್ಯಾಂತರ ರೂ ಬೆಲೆ ಇದೆ. ನಮಗೆ ಒಂದೂವರೆ ಕೋಟಿ‌ ಹಣ ನೀಡಿದರೆ ಇದನ್ನು ಕೊಡುವುದಾಗಿ ನಂಬಿಸಿದ್ದರು. ಬಳಿಕ 70 ಲಕ್ಷಕ್ಕೆ ವಂಚಕರ ಗ್ಯಾಂಗ್ ಡೀಲ್ ಕುದುರಿಸಿದ್ದರು. ಈ ಕುರಿತ ಮಾಹಿತಿ ಸಿಕ್ಕ ಹಿನ್ನೆಲೆ ಜಯನಗರ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನ ಬಂಧಿಸಿದ್ದಾರೆ.

ಇದನ್ನೂ ಓದಿ:ಫಂಡ್​ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ; ಓರ್ವ ಮಹಿಳೆ ಸೇರಿ ನಾಲ್ವರ ಬಂಧನ

ಮುಸ್ಲಿಂ ಯುವತಿಗೆ ಡ್ರಾಪ್ ನೀಡಿದ ಯುವಕನ ಮೇಲೆ ಹಲ್ಲೆ ಕೇಸ್

ಚಿತ್ರದುರ್ಗ: ಮುಸ್ಲಿಂ ಯುವತಿಗೆ ಡ್ರಾಪ್ ನೀಡಿದ ಯುವಕನ ಮೇಲೆ ಕಿಡಿಗೇಡಿಗಳು ಸೇರಿಕೊಂಡು ಹಲ್ಲೆ ನಡೆಸಿದ ಘಟನೆ ನಿನ್ನೆ (ಏ.18) ರಾತ್ರಿ ಚಿತ್ರದುರ್ಗದಲ್ಲಿ ನಡೆದಿದೆ. ಉಮೇಶ್ ಮೇಲೆ ಹಲ್ಲೆಗೊಳಗಾದ ಯುವಕ. ಇನ್ನು ಆತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಹಿನ್ನೆಲೆ ನಗರದಲ್ಲಿ ಭಜರಂಗದಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದ್ದು, ಬಂಜಾರ ಗುರುಪೀಠದ ಸರ್ದಾರ್ ಸೇವಾಲಾಲ್ ಶ್ರೀ,  ಮಾಜಿ ಶಾಸಕ ಜಿ ಹೆಚ್ ತಿಪ್ಪಾರೆಡ್ಡಿ, ಬಿಜೆಪಿ ಜಿಲ್ಲಾದ್ಯಕ್ಷ ಎ.ಮುರುಳಿ ಸೇರಿ ಇತರರು ಭಾಗಿಯಾಗಿದ್ದಾರೆ. ಜೊತೆಗೆ ರಾಮಮಂದಿರದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ, ಆರೋಪಿಗಳ ಬಂಧನಕ್ಕೆ ಆಗ್ರಹಿಸಿದ್ದು, ಈ ಕುರಿತು ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿಗೆ ಮನವಿ ಪತ್ರ ಸಲ್ಲಿಕೆ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ