ಬೆಂಗಳೂರು: ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ವೈದ್ಯ ರೈಲಿಗೆ ಸಿಲುಕಿ ಆತ್ಮಹತ್ಯೆ

| Updated By: ಕಿರಣ್ ಹನುಮಂತ್​ ಮಾದಾರ್

Updated on: Apr 18, 2024 | 7:13 PM

ಬೆಂಗಳೂರಿನ ನಾರ್ಥ್ ಆಸ್ಪತ್ರೆಯಲ್ಲಿ ಮಕ್ಕಳ ತಜ್ಞರಾಗಿದ್ದ ಡಾ.ಅನಂತ್​ ಪ್ರಸಾದ್(38) ಎಂಬುವವರು ಇಂದು(ಏ.18) ಯಲಹಂಕ (Yalahanka) ಬಳಿ ರೈಲಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನೆ ಕುರಿತು ಯಶವಂತಪುರ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಿಸಿದ್ದಾರೆ.

ಬೆಂಗಳೂರು: ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ವೈದ್ಯ ರೈಲಿಗೆ ಸಿಲುಕಿ ಆತ್ಮಹತ್ಯೆ
ಮೃತ ವೈದ್ಯ
Follow us on

ಬೆಂಗಳೂರು, ಏ.18: ಯಲಹಂಕ(Yalahanka) ಬಳಿ ರೈಲಿಗೆ ಸಿಲುಕಿ ಮಕ್ಕಳ ತಜ್ಞ ವೈದ್ಯ ಆತ್ಮಹತ್ಯೆಗೆ ಶರಣಾಗಿದ್ದಾರೆ. ಡಾ.ಅನಂತ್​ ಪ್ರಸಾದ್(38) ಮೃತ ರ್ದುದೈವಿ. ಬೆಂಗಳೂರಿನ ನಾರ್ಥ್ ಆಸ್ಪತ್ರೆಯಲ್ಲಿ ಮಕ್ಕಳ ತಜ್ಞರಾಗಿದ್ದ ಇವರು, ಮೂರು ತಿಂಗಳ ಹಿಂದಷ್ಟೆ ಮದುವೆಯಾಗಿದ್ದರು. ಇನ್ನು ಘಟನೆ ಕುರಿತು ಯಶವಂತಪುರ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ರೈಲ್ವೆ ಪೊಲೀಸರು ಆತ್ಮಹತ್ಯೆಗೆ ನಿಖರ ಕಾರಣ ಏನು ಎನ್ನುವುದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾದ ಸ್ಟಾಫ್​ನರ್ಸ್​

ಬೆಂಗಳೂರು: ಮಣಿಪಾಲ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಸ್ಟಾಫ್ ನರ್ಸ್​ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ದೀಪಾಂಜಲಿನಗರ ರೈಲ್ವೆ ಹಳಿ ಬಳಿ ನಡೆದಿದೆ. ಚನ್ನಬಸು ಅಶೋಕ್(22) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಮೂಲತಃ ವಿಜಯಪುರ ಮೂಲದ ಅಶೋಕ್, ಬೆಂಗಳೂರಲ್ಲಿ ತನ್ನ ಆಂಟಿ ಮನೆಯಲ್ಲಿ ವಾಸವಿದ್ದ. ಇಂದು(ಏ.18) ಬೆಳಗ್ಗೆ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಕುರಿತು ಸಿಟಿ ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಧ್ಯ ಪೊಲೀಸರು ಮೃತದೇಹವನ್ನ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ. ಆತ್ಮಹತ್ಯೆಗೆ ಕಾರಣವೇನು ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ.

ಇದನ್ನೂ ಓದಿ:ಬೆಂಗಳೂರು ಗ್ರಾಮಾಂತರ: ಅತ್ತಿಗೆ ಕಿರುಕುಳಕ್ಕೆ ಬೇಸತ್ತ ಮೈದುನ ನೇಣುಬಿಗಿದುಕೊಂಡು ಆತ್ಮಹತ್ಯೆ

ಅಪರಿಚಿತ ವೃದ್ಧನ ಮೃತದೇಹ ಪತ್ತೆ

ಬೆಂಗಳೂರು: ನಗರದ ಕಮ್ಮನಹಳ್ಳಿ ಮುಖ್ಯರಸ್ತೆಯ ಸುಖಸಾಗರ್ ಬಳಿ ಅಪರಿಚಿತ ವೃದ್ಧನ ಶವ ಪತ್ತೆಯಾಗಿದೆ. ಶವ ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ಕೊಟ್ಟ ಬಾಣಸವಾಡಿ ಪೊಲೀಸರು ಪರಿಶೀಲನೆ ನಡೆಸಿದ್ದು, ಮೃತದೇಹವನ್ನ ಬೌರಿಂಗ್​ಗೆ ರವಾನೆ ಮಾಡಲಾಗಿದೆ. ಸಧ್ಯಕ್ಕೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 7:01 pm, Thu, 18 April 24