ಬೆಂಗಳೂರಿನಲ್ಲಿ ಕೆಲಸ ಸಿಗದಿದ್ದಕ್ಕೆ ಪಿ.ಜಿ ಮೇಲಿಂದ ಬಿದ್ದು ಯುವಕ ಆತ್ಮಹತ್ಯೆ

ಸಿಲಿಕಾನ್​ ಸಿಟಿ ಬೆಂಗಳೂರಿಗೆ ರಾಜ್ಯ ಅಷ್ಟೇ ಅಲ್ಲದೆ ಹೊರರಾಜ್ಯಗಳಿಂದಲೂ ಉದ್ಯೋಗ ಅರಿಸಿ ಬರುತ್ತಾರೆ. ಅದರಂತೆ ಕಲಬುರಗಿ ಮೂಲದ ಸುಮಾರು 28 ವರ್ಷದ ಯುವಕನೊಬ್ಬ ಕೆಲಸ ಹುಡುಕಿಕೊಂಡು ರಾಜ್ಯ ರಾಜಧಾನಿ ಬೆಂಗಳೂರಿಗೆ ಬಂದಿದ್ದ. ಆದರೆ, ಎಲ್ಲೂ ಕೂಡ ಕೆಲಸ ಸಿಕ್ಕಿರಲಿಲ್ಲ.  ಇದರಿಂದ ಮನನೊಂದು ಇಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಬೆಂಗಳೂರಿನಲ್ಲಿ ಕೆಲಸ ಸಿಗದಿದ್ದಕ್ಕೆ ಪಿ.ಜಿ ಮೇಲಿಂದ ಬಿದ್ದು ಯುವಕ ಆತ್ಮಹತ್ಯೆ
ಮೃತ ವ್ಯಕ್ತಿ
Follow us
Shivaprasad
| Updated By: ಕಿರಣ್ ಹನುಮಂತ್​ ಮಾದಾರ್

Updated on:May 09, 2024 | 9:50 PM

ಬೆಂಗಳೂರು, ಮೇ.09: ಕೆಲಸ ಸಿಗದಿದ್ದಕ್ಕೆ ಪಿ.ಜಿ ಕಟ್ಟಡದ ಮೇಲಿಂದ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ವೈಟ್‌ಫೀಲ್ಡ್‌ ಠಾಣಾ ವ್ಯಾಪ್ತಿಯ ಅಂಬೇಡ್ಕರ್ ನಗರದಲ್ಲಿ ನಡೆದಿದೆ. ಕಲಬುರಗಿ ಮೂಲದ ಸುಮಾರು 28 ವರ್ಷದ ಯುವಕನೊಬ್ಬ ಕೆಲಸ ಹುಡುಕಿಕೊಂಡು ರಾಜ್ಯ ರಾಜಧಾನಿ ಬೆಂಗಳೂರಿಗೆ ಬಂದಿದ್ದ. ಆದರೆ, ಎಲ್ಲೂ ಕೂಡ ಕೆಲಸ ಸಿಕ್ಕಿರಲಿಲ್ಲ.  ಇದರಿಂದ ಮನನೊಂದು ಇಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಕುರಿತು ಪ್ರಕರಣ ದಾಖಲಿಸಿ ವೈಟ್‌ಫೀಲ್ಡ್‌ ಠಾಣೆ ಪೊಲೀಸರು ತನಿಖೆ ಶುರುಮಾಡಿದ್ದಾರೆ.

ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ, ಕೊಲೆ ಶಂಕೆ

ಚಿತ್ರದುರ್ಗ: ಜಿಲ್ಲೆಯ ಹೊಸದುರ್ಗ ತಾಲೂಕಿನ ಗೊರವನಕಲ್ಲು ಗ್ರಾಮದ ಮನೆಯಲ್ಲಿ ಗೀತಶ್ರೀ(32) ಎಂಬ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಈ ಹಿನ್ನಲೆ ಪತಿ ಪ್ರಭುಕುಮಾರ್ ಮತ್ತು ಕುಟುಂಬದ ವಿರುದ್ಧ ಮೃತ ಮಹಿಳೆಯ ಸಂಬಂಧಿಕರು ಕೊಲೆ ಆರೋಪ ಮಾಡಿದ್ದಾರೆ. ಆರೋಪಿ ಪತಿ ಪ್ರಭುಕುಮಾರ್ ಖಾಸಗಿ ಬ್ಯಾಂಕ್ ಉದ್ಯೋಗಿಯಾಗಿದ್ದು, ಮೃತ ಗೀತಶ್ರೀ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿದ್ದರು. ಇನ್ನು ವರದಕ್ಷಿಣೆ ಕಿರುಕುಳ ಹಾಗೂ ಮಾನಸಿಕ ಹಿಂಸೆಯಿಂದ ಗೀತಶ್ರೀಯನ್ನು ಕೊಲೆ ಮಾಡಿ, ನೇಣುಹಾಕಿದ್ದಾರೆ ಎಂದು ಮೃತಳ ಸಹೋದರ ಆರೋಪಿಸಿದ್ದು, ಈ ಕುರಿತು ಹೊಸದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸಿಡಿಲು ಬಡೆದು ಎರಡು ಎತ್ತುಗಳು ಸಾವು

ಬಳ್ಳಾರಿ: ತಾಲೂಕಿನ ಕಪ್ಪಗಲ್ ಗ್ರಾಮದಲ್ಲಿ ಸಿಡಿಲು ಬಡಿದು ದೊಡ್ಡಬಸಯ್ಯ ಎಂಬ ರೈತನಿಗೆ ಸೇರಿದ ಎರಡು ಎತ್ತುಗಳು ಸಾವನ್ನಪ್ಪಿದ್ದಾನೆ. ಮನೆ ಮುಂದೆ ಕಟ್ಟಿದ್ದಾಗ ಈ ದುರ್ಘಟನೆ ನಡೆದಿದೆ. ಒಂದು ಲಕ್ಷ ರೂ. ಬೆಲೆ ಬಾಳುವ ಎತ್ತುಗಳು ಇದಾಗಿದ್ದು, ಭೂಮಿ ಹಸನ ಮಾಡಲು ಹೊಸ ಎತ್ತುಗಳನ್ನ ರೈತ ತಂದಿದ್ದ. ಇದೀಗ ಸೂಕ್ತ ಪರಿಹಾರ ನೀಡುವಂತೆ ರೈತ ದೊಡ್ಡಬಸಯ್ಯ ಆಗ್ರಹಿಸಿದ್ದಾರೆ. ಸ್ಥಳಕ್ಕೆ ಪಶುವೈದ್ಯರ ತಂಡ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ದಾವಣಗೆರೆ: ಪತ್ನಿ ಕೊಂದು ಆತ್ಮಹತ್ಯೆ ಕಥೆ ಕಟ್ಟಿದ ಪತಿ; ವಿಷಯ ತಿಳಿದ ಮಗನಿಂದ ತಂದೆಯ ಬರ್ಬರ ಹತ್ಯೆ

ಅರಣ್ಯ ಪ್ರದೇಶದಲ್ಲಿ ಕಿಡಿಗೇಡಿಗಳಿಂದ ಬೆಂಕಿ! ಹೊತ್ತಿ ಉರಿದ ಹತ್ತಾರು ಎಕರೆಯ ಅರಣ್ಯ ಪ್ರದೇಶ

ಯಾದಗಿರಿ: ಜಿಲ್ಲೆಯ ಗುರಮಠಕಲ್ ತಾಲೂಕಿನ ಕಾಳೆಬೆಳಗುಂದಿ ಅರಣ್ಯ ಪ್ರದೇಶದಲ್ಲಿ ಬೆಂಕಿ ಬಿದ್ದಿರುವ ಘಟನೆ ನಿನ್ನೆ ನಡೆದಿದ್ದು, ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಒಂದು ಗಂಟೆಗೂ ಅಧಿಕ ಕಾಲ ಅರಣ್ಯ ಪ್ರದೇಶ ಹೊತ್ತಿ ಉರಿದಿದ್ದು, 3 ಸಾವಿರಕ್ಕೂ ಅಧಿಕ ಮರ-ಗಿಡಗಳು ನಾಶವಾಗಿದೆ. ಹೊತ್ತಿ ಉರಿಯುತ್ತಿರುವ ಬೆಂಕಿ ಆರಿಸಲು ನೀಲಗಿರಿ ತಪ್ಪಲಿನಿಂದ ನಂದಿಸಲು ವನ ಪಾಲಕರು ಹರಸಾಹಸ ನಡೆಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:34 pm, Thu, 9 May 24

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್