ಬಿಟ್ ಕಾಯಿನ್ ಹಗರಣ​; ಇನ್ಸ್​ಪೆಕ್ಟರ್ ಚಂದ್ರಾಧರ್​ ಬಂಧನ

ರಾಜ್ಯಾದ್ಯಂತ ತೀವ್ರ ಸುದ್ದಿಯಾಗಿದ್ದ ಬಿಟ್​ಕಾಯಿನ್​ ಹಗರಣ ಪ್ರಕರಣದ ತನಿಖೆಯನ್ನ ಸಿಐಡಿ ಚುರುಕುಗೊಳಿಸಿದೆ. ಅದರಂತೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸೈಬರ್ ಕ್ರೈಂ ಠಾಣೆ ಇನ್ಸ್​ಪೆಕ್ಟರ್ ಆಗಿದ್ದ ಚಂದ್ರಾಧರ್, ಅವರನ್ನು ಸುಧೀರ್ಘ ವಿಚಾರಣೆ ನಡೆಸಿ, ಅರೆಸ್ಟ್​ ಮಾಡಲಾಗಿದೆ.

ಬಿಟ್ ಕಾಯಿನ್ ಹಗರಣ​; ಇನ್ಸ್​ಪೆಕ್ಟರ್ ಚಂದ್ರಾಧರ್​ ಬಂಧನ
ಪ್ರಾತಿನಿಧಿಕ ಚಿತ್ರ
Follow us
ರಾಚಪ್ಪಾಜಿ ನಾಯ್ಕ್
| Updated By: ಕಿರಣ್ ಹನುಮಂತ್​ ಮಾದಾರ್

Updated on: May 29, 2024 | 5:01 PM

ಬೆಂಗಳೂರು, ಮೇ.29: ಬಿಟ್ ಕಾಯಿನ್ ಹಗರಣ ಪ್ರಕರಣ(Bitcoin Scam Case)ಕ್ಕೆ ಸಂಬಂಧಿಸಿದಂತೆ ಇದೀಗ ಇನ್ಸ್​ಪೆಕ್ಟರ್ ಚಂದ್ರಾಧರ್(Chandradhar) ಎಂಬುವವರನ್ನು ಸಿಐಡಿ ಪೊಲೀಸರು​ ಬಂಧಿಸಿದ್ದಾರೆ. ಸೈಬರ್ ಕ್ರೈಂ ಠಾಣೆ ಇನ್ಸ್​ಪೆಕ್ಟರ್ ಆಗಿದ್ದ ಚಂದ್ರಾಧರ್, ಈ ಹಿಂದೆ ಬಿಟ್ ಕಾಯಿನ್ ಪ್ರಕರಣದ ತನಿಖೆ ನಡೆಸಿದ್ದರು. ಈ ಪ್ರಕರಣದಲ್ಲಿ ರಾಜಕಾರಣಿಗಳು, ಹಿರಿಯ ಪೊಲೀಸ್​ ಅಧಿಕಾರಿಗಳು ಭಾಗಿಯಾಗಿರುವ ಆರೋಪ ಕೇಳಿಬಂದಿತ್ತು. ಈ ಹಿನ್ನಲೆ ಚಂದ್ರಾಧರ್ ಅವರನ್ನು ಸುಧೀರ್ಘ ವಿಚಾರಣೆ ನಡೆಸಿ, ಇದೀಗ ಅರೆಸ್ಟ್​ ಮಾಡಲಾಗಿದೆ.

ಇತ್ತೀಚೆಗೆ ಶ್ರೀಕಿ ಅಂಡ್ ಟೀಮ್ ಮೇಲೆ ಕೋಕಾ ಕಾಯಿದೆ

ಬಿಟ್ ಕಾಯಿನ್​ ಹಗರಣದದಲ್ಲಿ ಸಿಐಡಿಯ ಎಸ್ಐಟಿ ಅಧಿಕಾರಿಗಳು ದಿಟ್ಟ ಹೆಜ್ಜೆಯಟ್ಟಿದ್ದು, 2017ರಲ್ಲಿ ತುಮಕೂರು ಸೆನ್ ಠಾಣೆಯಲ್ಲಿ ದಾಖಲಾಗಿದ್ದ ಬಿಟ್ ಕಾಯಿನ್ ಪ್ರಕರಣದಲ್ಲಿ ಶ್ರೀಕಿ ಅಂಡ್ ಟೀಮ್ ಮೇಲೆ ಕೋಕಾ ಕಾಯಿದೆ ಜಾರಿ ಮಾಡಲಾಗುತ್ತಿದೆ. ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆಯಡಿ ಕೇಸ್ ದಾಖಲಾಗಲಿದೆ. ಈ ಕಾಯ್ದೆಯಲ್ಲಿ ಕನಿಷ್ಠ ಒಂದು ವರ್ಷ ಅಪರಾಧಿಗಳಿಗೆ ಜಾಮೀನು ಸಿಗುವುದಿಲ್ಲ.

ಇದನ್ನೂ ಓದಿ:ಬಿಟ್ ಕಾಯಿನ್ ಪ್ರಕರಣದ ಆರೋಪಿಗಳ ವಿರುದ್ದ ಕೋಕಾ ಅಸ್ತ್ರ ಬಳಕೆ; ಏನಿದು ಕಾಯ್ದೆ?

ಇದು ಪದೇ ಪದೇ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವವರ ವಿರುದ್ಧ ಈ ಕಾಯ್ದೆ ಜಾರಿಯಾಗುತ್ತದೆ. ಇದರ ಬೆನ್ನಲ್ಲೇ ಇದೀಗ ಇನ್ಸ್​ಪೆಕ್ಟರ್ ಚಂದ್ರಾಧರ್ ಎಂಬುವವರನ್ನು ಸಿಐಡಿ ಪೊಲೀಸರು​ ಬಂಧಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು