ಬೆಂಗಳೂರು, ಮೇ.29: ಬಿಟ್ ಕಾಯಿನ್ ಹಗರಣ ಪ್ರಕರಣ(Bitcoin Scam Case)ಕ್ಕೆ ಸಂಬಂಧಿಸಿದಂತೆ ಇದೀಗ ಇನ್ಸ್ಪೆಕ್ಟರ್ ಚಂದ್ರಾಧರ್(Chandradhar) ಎಂಬುವವರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಸೈಬರ್ ಕ್ರೈಂ ಠಾಣೆ ಇನ್ಸ್ಪೆಕ್ಟರ್ ಆಗಿದ್ದ ಚಂದ್ರಾಧರ್, ಈ ಹಿಂದೆ ಬಿಟ್ ಕಾಯಿನ್ ಪ್ರಕರಣದ ತನಿಖೆ ನಡೆಸಿದ್ದರು. ಈ ಪ್ರಕರಣದಲ್ಲಿ ರಾಜಕಾರಣಿಗಳು, ಹಿರಿಯ ಪೊಲೀಸ್ ಅಧಿಕಾರಿಗಳು ಭಾಗಿಯಾಗಿರುವ ಆರೋಪ ಕೇಳಿಬಂದಿತ್ತು. ಈ ಹಿನ್ನಲೆ ಚಂದ್ರಾಧರ್ ಅವರನ್ನು ಸುಧೀರ್ಘ ವಿಚಾರಣೆ ನಡೆಸಿ, ಇದೀಗ ಅರೆಸ್ಟ್ ಮಾಡಲಾಗಿದೆ.
ಬಿಟ್ ಕಾಯಿನ್ ಹಗರಣದದಲ್ಲಿ ಸಿಐಡಿಯ ಎಸ್ಐಟಿ ಅಧಿಕಾರಿಗಳು ದಿಟ್ಟ ಹೆಜ್ಜೆಯಟ್ಟಿದ್ದು, 2017ರಲ್ಲಿ ತುಮಕೂರು ಸೆನ್ ಠಾಣೆಯಲ್ಲಿ ದಾಖಲಾಗಿದ್ದ ಬಿಟ್ ಕಾಯಿನ್ ಪ್ರಕರಣದಲ್ಲಿ ಶ್ರೀಕಿ ಅಂಡ್ ಟೀಮ್ ಮೇಲೆ ಕೋಕಾ ಕಾಯಿದೆ ಜಾರಿ ಮಾಡಲಾಗುತ್ತಿದೆ. ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆಯಡಿ ಕೇಸ್ ದಾಖಲಾಗಲಿದೆ. ಈ ಕಾಯ್ದೆಯಲ್ಲಿ ಕನಿಷ್ಠ ಒಂದು ವರ್ಷ ಅಪರಾಧಿಗಳಿಗೆ ಜಾಮೀನು ಸಿಗುವುದಿಲ್ಲ.
ಇದನ್ನೂ ಓದಿ:ಬಿಟ್ ಕಾಯಿನ್ ಪ್ರಕರಣದ ಆರೋಪಿಗಳ ವಿರುದ್ದ ಕೋಕಾ ಅಸ್ತ್ರ ಬಳಕೆ; ಏನಿದು ಕಾಯ್ದೆ?
ಇದು ಪದೇ ಪದೇ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವವರ ವಿರುದ್ಧ ಈ ಕಾಯ್ದೆ ಜಾರಿಯಾಗುತ್ತದೆ. ಇದರ ಬೆನ್ನಲ್ಲೇ ಇದೀಗ ಇನ್ಸ್ಪೆಕ್ಟರ್ ಚಂದ್ರಾಧರ್ ಎಂಬುವವರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ