ಪಿಸ್ತೂಲ್ ಇಟ್ಕೊಂಡು ಸಿಎಂ ಸಿದ್ದರಾಮಯ್ಯಗೆ ಹಾರ ಹಾಕಿದ ಪ್ರಕರಣ; ಪಿಎಸ್​ಐ ಸೇರಿ ನಾಲ್ವರು ಸಸ್ಪೆಂಡ್

ಇದೇ ತಿಂಗಳ 8ರಂದು ಸಿಎಂ ಸಿದ್ದರಾಮಯ್ಯ ಪ್ರಚಾರದ ವೇಳೆ ರಿಯಾಜ್ ಎಂಬಾತ ಪಿಸ್ತೂಲ್ ಇಟ್ಕೊಂಡು ಬಂದು ಹಾರ ಹಾಕಿದ್ದ. ಈ ಘಟನೆ ಸಾಕಷ್ಟು ಟೀಕೆಗೆ ಗುರಿಯಾಗಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಭದ್ರತಾ ಲೋಪ ಸಂಬಂಧ ಪಿಎಸ್​ಐ, ಎಎಸ್​ಐ ಸೇರಿ ಒಟ್ಟು ನಾಲ್ವರನ್ನು ಅಮಾನತುಗೊಳಿಸಿ ಪೊಲೀಸ್ ಕಮಿಷನರ್ ದಯಾನಂದ್ ಬಿ‌. ಆದೇಶಿಸಿದ್ದಾರೆ.

ಪಿಸ್ತೂಲ್ ಇಟ್ಕೊಂಡು ಸಿಎಂ ಸಿದ್ದರಾಮಯ್ಯಗೆ ಹಾರ ಹಾಕಿದ ಪ್ರಕರಣ; ಪಿಎಸ್​ಐ ಸೇರಿ ನಾಲ್ವರು ಸಸ್ಪೆಂಡ್
ಪಿಎಸ್​ಐ ಸೇರಿ ನಾಲ್ವರು ಸಸ್ಪೆಂಡ್
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on:Apr 20, 2024 | 9:22 PM

ಬೆಂಗಳೂರು, ಏ.20: ಗನ್ ಇಟ್ಕೊಂಡು ಸಿಎಂ ಸಿದ್ದರಾಮಯ್ಯ(Siddaramaiah)ಗೆ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭದ್ರತಾ ಲೋಪ ಸಂಬಂಧ ಪಿಎಸ್​ಐ, ಎಎಸ್​ಐ ಸೇರಿ ಒಟ್ಟು ನಾಲ್ವರನ್ನು ಅಮಾನತುಗೊಳಿಸಿ ಪೊಲೀಸ್ ಕಮಿಷನರ್ ದಯಾನಂದ್ ಬಿ‌. ಆದೇಶಿಸಿದ್ದಾರೆ. ಇದೇ ತಿಂಗಳ 8ರಂದು ಸಿಎಂ ಸಿದ್ದರಾಮಯ್ಯ ಪ್ರಚಾರದ ವೇಳೆ ರಿಯಾಜ್ ಎಂಬಾತ ಪಿಸ್ತೂಲ್ ಇಟ್ಕೊಂಡು ಬಂದು ಹಾರ ಹಾಕಿದ್ದ. ಈ ಘಟನೆ ಸಾಕಷ್ಟು ಟೀಕೆಗೆ ಗುರಿಯಾಗಿತ್ತು. ಬಳಿಕ ಆತನನ್ನು ಸಿದ್ದಾಪುರ ಪೊಲೀಸ್ರು ವಿಚಾರಣೆ ನಡೆಸಿ ಕಳುಹಿಸಿದ್ದರು. ಘಟನೆಯಾದ ಎರಡು ವಾರಗಳ ನಂತರ ಸಿಎಂ ಭದ್ರತಾ ಕರ್ತವ್ಯದಲ್ಲಿದ್ದ ಸಿದ್ದಾಪುರ ಸಬ್ ಇನ್ಸ್ಪೆಕ್ಟರ್ ಮೆಹಬೂಬ,  ASI ನಾಗರಾಜು ಹಾಗೂ ಇಬ್ಬರು ಸಿಬ್ಬಂದಿ ಅಮಾನತು ಮಾಡಲಾಗಿದೆ.

ಘಟನೆ ವಿವರ

ಏಪ್ರಿಲ್ 08 ರಂದು ಬೆಂಗಳೂರು ದಕ್ಷಿಣ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಪರ ಸಿಎಂ ಸಿದ್ದರಾಮಯ್ಯ ಪ್ರಚಾರದಲ್ಲಿ ತೊಡಗಿದ್ದರು. ಈ ವೇಳೆ ವ್ಯಕ್ತಿಯೋರ್ವ ಸೊಂಟದಲ್ಲಿ ಗನ್​ ಇಟ್ಟುಕೊಂಡು ಬಂದು ಸಿದ್ದರಾಮಯ್ಯಗೆ ಹೂವಿನ ಹಾರ ಹಾಕಿ ತೆರಳಿದ್ದ. ಇದರಿಂದ ಪೊಲೀಸರ ಭದ್ರತಾ ಲೋಪ ಕಂಡುಬಂದಿತ್ತು. ಬಳಿಕ ಆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿದ್ದು, ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಬಳಿಕ ಆತನನ್ನು ತೀವ್ರ ವಿಚಾರಣೆ ಮಾಡಿದಾಗ, ‘ಜೀವಭಯವಿದೆ ಎಂದು ರಿಯಾಜ್​ ಅರ್ಜಿ ನೀಡಿ ಗನ್ ಪಡೆದುಕೊಂಡಿದ್ದ.

ಇದನ್ನೂ ಓದಿ:ಸೊಂಟದಲ್ಲಿ ಪಿಸ್ತೂಲ್​ ಇಟ್ಕೊಂಡು ಬಂದು ಸಿಎಂಗೆ ಹಾರ ಹಾಕಿದ ವ್ಯಕ್ತಿ ಯಾರು? ಪತ್ತೆ ಹಚ್ಚಿದ ಪೊಲೀಸ್ರು ಹೇಳಿದ್ದೇನು?

ಗನ್ ಇಟ್ಟುಕೊಂಡು ಸಿಎಂ ಬಳಿ ಹೋದ ಬಗ್ಗೆ ತನಿಖೆ ಎಂದಿದ್ದ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ

ರಿಯಾಜ್​ ಗನ್ ಪ್ರಕರಣದ ಮಾಹಿತಿ ಪಡೆದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ್, ‘ಘಟನೆ ಸಂಬಂಧ ರಿಯಾಜ್ ಎಂಬಾತನನ್ನು ವಿಚಾರಣೆ ನಡೆಸುತ್ತಿದ್ದೇವೆ. ಈ ಹಿಂದೆ ತನ್ನ ಮೇಲೆ ಅಟ್ಯಾಕ್ ಆಗಿದೆ ಎಂದು ದೂರು ನೀಡಿದ್ದ. ಅಲ್ಲದೇ ತನಗೆ ಜೀವಬೆದರಿಕೆ ಇರುವ ಹಿನ್ನಲೆ ಗನ್ ಇಟ್ಟುಕೊಳ್ಳಲು ಮನವಿ ಮಾಡಿದ್ದ. ಚುನಾವಣೆ ಸಂದರ್ಭದಲ್ಲೂ ಜೀವಭಯವಿದೆ ಎಂದು ಉಲ್ಲೇಖಿಸಿ ಪೊಲೀಸರ ಬಳಿ ಅನುಮತಿ ಪಡೆದುಕೊಂಡಿದ್ದಾನೆ. ಆದ್ರೆ, ಈಗ ಗನ್ ಇಟ್ಟುಕೊಂಡು ಸಿಎಂ ಬಳಿ ಹೋದ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಸ್ಪಷ್ಟಪಡಿಸಿದ್ದರು. ಇದೀಗ ನಾಲ್ವರನ್ನು ಅಮಾನತುಗೊಳಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:13 pm, Sat, 20 April 24

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ