CCB Raid: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ

| Updated By: ಗಣಪತಿ ಶರ್ಮ

Updated on: Apr 17, 2024 | 10:33 AM

Central Prison, Bangalore: ಲೋಕಸಭೆ ಚುನಾವಣೆಗೆ ಕೆಲವೇ ದಿನಗಳಿರುವಾಗ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜೈಲಿನಲ್ಲಿ ಇದ್ದುಕೊಂಡೇ ಮತದಾರರ ಮೇಲೆ ಪ್ರಭಾವ ಬೀರಲು ಕೈದಿಗಳ ಸಂಚು ಹೂಡಿರುವ ಖಚಿತ ಸುಳಿವಿನ ಮೇರೆಗೆ ದಾಳಿ ನಡೆದಿದ್ದು, ಕೈದಿಗಳಿಂದ ಚಾಕು ಮತ್ತು ನಗದು ವಶಪಡಿಸಿಕೊಳ್ಳಲಾಗಿದೆ.

CCB Raid: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ
ಪರಪ್ಪನ ಅಗ್ರಹಾರ ಜೈಲು
Follow us on

ಬೆಂಗಳೂರು, ಏಪ್ರಿಲ್ 17: ಲೋಕಸಭೆ ಚುನಾವಣೆಗೆ (Lok Sabha Elections) ದಿನಗಣನೆ ಆರಂಭವಾಗಿರುವ ಸಂದರ್ಭದಲ್ಲೇ ಬೆಂಗಳೂರಿನ (Bengaluru) ಪರಪ್ಪನ ಅಗ್ರಹಾರ ಜೈಲಿನ (Parappana Agrahara Jail) ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ (CCB Raid) ನಡೆಸಿದ್ದಾರೆ. ಮಂಗಳವಾರ 50ಕ್ಕೂ ಹೆಚ್ಚು ಸಿಸಿಬಿ ಅಧಿಕಾರಿಗಳು ಜೈಲಿನ ಮೇಲೆ ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರ ಮೇಲೆ ಪ್ರಭಾವ ಬೀರಲು ಜೈಲಿನಿಂದಲೇ ಸಂಚು ಹೂಡಲಾಗಿದೆ ಎಂಬ ಸುಳಿವಿನ ಮೇರೆಗೆ ಸಿಸಿಬಿ ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ.

ಜೈಲಿನಿಂದಲೇ ಕೊಲೆಗೆ ಸುಪಾರಿ ನೀಡಿರುವುದು, ಉಗ್ರ ಚಟುವಟಿಕೆಗಳ ನಂಟು ಹೊಂದಿರುವುದು ಮತ್ತು ಜೈಲಿನಿಂದಲೇ ಮತದಾರರ ಮೇಲೆ ಪ್ರಭಾವ ಬೀರಲು ಸಂಚು ಬಗ್ಗೆ ಮಾಹಿತಿ ದೊರೆತಿದೆ. ಹೀಗಾಗಿ ದಾಳಿ ನಡೆಸಲಾಗಿದೆ. ಈ ವೇಳೆ ಜೈಲಿನ ಬ್ಯಾರಕ್​​ನಲ್ಲಿದ್ದ ಕೆಲ ಖೈದಿಗಳ ಬಳಿಯಿಂದ ನಗದು ವಶಕ್ಕೆ ಪಡೆಯಲಾಗಿದೆ. ಜೈಲಿನೊಳಗೆ ಚಾಕು ಸಹ ಪತ್ತೆಯಾಗಿದೆ. ಕೈದಿಗಳ ಬಳಿ ಇದ್ದ 40 ಸಾವಿರ ರೂ. ನಗದು, 3 ಚಾಕು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾರಾಗೃಹದ ಒಳಗಿನಿಂದ ಚುನಾವಣೆ ಮೇಲೆ ಪ್ರಭಾವ ಬೀರಲು ಪಿತೂರಿ, ಅಕ್ರಮ ಚಟುವಟಿಕೆಗಳು, ಡ್ರಗ್ಸ್ ಬಳಕೆ, ಪೂರೈಕೆ ಮತ್ತು ಮೊಬೈಲ್ ಬಳಕೆಯನ್ನು ಪರಿಶೀಲಿಸಲು ಈ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಗದು, ತಂಬಾಕು ಉತ್ಪನ್ನಗಳು ಮತ್ತು ಚಾಕುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ ಎಂದೂ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ನಮ್ಮ ಯಾತ್ರಿ ಆ್ಯಪ್​ ಮೂಲಕ ಇನ್ನು ಕ್ಯಾಬ್ ಸಹ ಬುಕ್ ಮಾಡಬಹುದು

ಇನ್ನು ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೂ ಪರಪ್ಪನ ಅಗ್ರಹಾರ ಜೈಲಿಗೂ ನಂಟಿರುವ ಬಗ್ಗೆಯೂ ಅನುಮಾನ ವ್ಯಕ್ತವಾಗಿದೆ. ಈ ಬಗ್ಗೆಯೂ ಸಿಸಿಬಿ ದಾಳಿ ವೇಳೆ ಅಧಿಕಾರಿಗಳು ಪರಿಶೀಲನೆ ನಡೆಸಿರುವ ಸಾಧ್ಯತೆ ಇದೆ ಎಂದು ಕೆಲವು ಮೂಗಳು ತಿಳಿಸಿವೆ. ಶಿವಮೊಗ್ಗದಲ್ಲಿ ಐಎಸ್​ಐಎಸ್ ಉಗ್ರ ಚಟುವಟಿಕೆಗೆ ಸಂಬಂಧಿಸಿ ಶಂಕಿತ ಉಗ್ರನೊಬ್ಬನನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಎನ್​ಐಎ ಇತ್ತೀಚೆಗೆ ಬಂಧಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:23 am, Wed, 17 April 24