ಎಚ್ಚರ, ಬೆಂಗಳೂರಿನಲ್ಲಿ ಹೆಚ್ಚುತ್ತಿದೆ ಕಾಲರಾ: ಸೋಂಕು ತಡೆಯಲು ಏನು ಮಾಡಬೇಕು? ಇಲ್ಲಿದೆ ಸಲಹೆ

Bengaluru Cholera Outbreak: ಬೆಂಗಳೂರು ನಗರದಲ್ಲಿ ನೀರಿನ ಬಿಕ್ಕಟ್ಟಿನ ನಡುವೆಯೇ ಇದೀಗ ಕಾಲರಾ ಪ್ರಕರಣಗಳು ಹೆಚ್ಚಾಗತೊಡಗಿವೆ. ಕಲುಷಿತ ನೀರು ಮತ್ತು ಅನಾರೋಗ್ಯಕರ ಆಹಾರ ಸೇವನೆಯಿಂದ ಪ್ರಕರಣಗಳು ಹೆಚ್ಚಾಗುತ್ತಿವೆ ಎನ್ನಲಾಗಿದೆ. ಇತ್ತೀಚಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಕಾಲರಾ ಪ್ರಕರಣಗಳು ಶೇ 50 ರಷ್ಟು ಏರಿಕೆಯಾಗಿವೆ.

ಎಚ್ಚರ, ಬೆಂಗಳೂರಿನಲ್ಲಿ ಹೆಚ್ಚುತ್ತಿದೆ ಕಾಲರಾ: ಸೋಂಕು ತಡೆಯಲು ಏನು ಮಾಡಬೇಕು? ಇಲ್ಲಿದೆ ಸಲಹೆ
ಸಾಂದರ್ಭಿಕ ಚಿತ್ರ
Follow us
Ganapathi Sharma
| Updated By: ಗಂಗಾಧರ​ ಬ. ಸಾಬೋಜಿ

Updated on:Apr 05, 2024 | 3:43 PM

ಬೆಂಗಳೂರು, ಏಪ್ರಿಲ್ 4: ನೀರಿನ ಬಿಕ್ಕಟ್ಟಿನ (Water Crisis) ನಡುವೆಯೇ ಬೆಂಗಳೂರು ನಗರದಲ್ಲಿ (Bengaluru) ಮತ್ತೊಂದು ಸಮಸ್ಯೆ ಸೃಷ್ಟಿಯಾಗಿದ್ದು, ನಗರದಾದ್ಯಂತ ಕಾಲರಾ (Cholera) (ವಾಂತಿ ಭೇದಿ) ಪ್ರಕರಣಗಳು ಹೆಚ್ಚು ವರದಿಯಾಗುತ್ತಿವೆ. ಮಲ್ಲೇಶ್ವರಂ ಪ್ರದೇಶದಲ್ಲಿ ಒಂದು ಪ್ರಕರಣ ದೃಢಪಟ್ಟಿದ್ದು, ಅದೇ ಪ್ರದೇಶದಲ್ಲಿ ಎರಡು ಶಂಕಿತ ಪ್ರಕರಣಗಳ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ನಗರದಲ್ಲಿ ಹಲವಾರು ಖಾಸಗಿ ಆಸ್ಪತ್ರೆಗಳು ಸಾಮಾನ್ಯವಾಗಿ ತಿಂಗಳಿಗೆ ಒಂದು ಅಥವಾ ಎರಡು ಕಾಲರಾ ಪ್ರಕರಣಗಳನ್ನು ವರದಿ ಮಾಡುತ್ತವೆ. ಮಾರ್ಚ್‌ನಲ್ಲಿ ಹದಿನೈದು ದಿನಗಳಿಗಿಂತ ಕಡಿಮೆ ಅವಧಿಯಲ್ಲಿ ಆರು ಅಥವಾ ಏಳು ಪ್ರಕರಣಗಳು ದೃಢಪಟ್ಟಿದ್ದವು.

ಈ ಮಧ್ಯೆ, ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಕಾಲರಾ ಪ್ರಕರಣಗಳು ಶೇ 50 ರಷ್ಟು ಏರಿಕೆಯಾಗಿದ್ದು, ಇತ್ತೀಚೆಗೆ  20 ಪ್ರಕರಣಗಳು ವರದಿಯಾಗಿವೆ. ಕಳಪೆ ನೈರ್ಮಲ್ಯ ಮತ್ತು ಕಲುಷಿತ ನೀರಿನ ಮೂಲಗಳು ನಗರದಲ್ಲಿ ಕಾಲರಾ ಪ್ರಕರಣಗಳ ಉಲ್ಬಣಕ್ಕೆ ಮುಖ್ಯ ಕಾರಣಗಳಾಗಿವೆ ಎಂದು ಬೆಂಗಳೂರಿನ ಸ್ಪರ್ಶ ಆಸ್ಪತ್ರೆಯ ಕನ್ಸಲ್ಟೆಂಟ್ ಮೆಡಿಕಲ್ ಗ್ಯಾಸ್ಟ್ರೋಎಂಟರಾಲಜಿಸ್ಟ್ ಶ್ರೀಹರಿ ಡಿ ತಿಳಿಸಿರುವುದಾಗಿ ಪತ್ರಿಕೆಯೊಂದು ವರದಿ ಮಾಡಿದೆ.

ನೀರಿನ ಬಿಕ್ಕಟ್ಟು ಕೂಡ ಕಾರಣ!

ಸಣ್ಣಪುಟ್ಟ ದರ್ಶಿನಿಗಳು, ರಸ್ತೆ ಬದಿಯ ತಳ್ಳುಗಾಡಿಗಳಲ್ಲಿ ಆಹಾರ ಸೇವಿಸಿದವರಲ್ಲಿ ಕಾಲರಾ ಪ್ರಕರಣಗಳು ಪತ್ತೆಯಾಗುತ್ತಿವೆ. ತೀವ್ರವಾದ ನೀರಿನ ಕೊರತೆಯಿಂದ ಈ ಸಣ್ಣಪುಟ್ಟ ವ್ಯಾಪಾರಿಗಳು ಕಲುಷಿತ ನೀರನ್ನು ಅಡುಗೆಗೆ ಬಳಸಿರುವ ಸಾಧ್ಯತೆ ಇದೆ. ಹೀಗಾಗಿ ಸೋಕು ಹರಡುವಿಕೆ ಉಲ್ಬಣಗೊಳ್ಳುತ್ತಿರಬಹುದು ಎಂದು ಆರೋಗ್ಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಬಿಬಿಎಂಪಿ ಹೇಳಿದ್ದೇನು?

ಮಲ್ಲೇಶ್ವರಂ ಪ್ರದೇಶದಲ್ಲಿ ಕಾಲರಾ ಪ್ರಕರಣ ದೃಢಪಟ್ಟಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತ ತುಷಾರ ಗಿರಿನಾಥ್ ‘ಬ್ಯುಸಿನೆಸ್ ಸ್ಟಾಂಡರ್ಡ್‌’ಗೆ ಮಾಹಿತಿ ನೀಡಿದ್ದಾರೆ. ಮಲ್ಲೇಶ್ವರಂನ ಪಿಜಿಯಲ್ಲಿ ಒಂದು ಪ್ರಕರಣದಲ್ಲಿ ಕಾಲರಾ ಪಾಸಿಟಿವ್ ಬಂದಿದ್ದು, ಇತರ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ನಾವು ಮಾಲಿನ್ಯದ ಮೂಲವನ್ನು ಮತ್ತು ಎಲ್ಲವನ್ನು ಗುರುತಿಸುತ್ತಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ಕಾಲರಾ ಎಂದರೇನು?

ಕಾಲರಾವು ವಿಷಕಾರಿ ಬ್ಯಾಕ್ಟೀರಿಯ ವಿಬ್ರಿಯೊ ಕಾಲರಾದಿಂದ ಹರಡುವ ಸೋಂಕಾಗಿದೆ. ಈ ಬ್ಯಾಕ್ಟೀರಿಯಾದಿಂದ ಕರುಳಿನ ಸೋಂಕು ಉಂಟಾಗುತ್ತದೆ. ಪರಿಣಾಮವಾಗಿ ತೀವ್ರವಾದ ವಾಂತಿ ಭೇದಿ ಕಾಯಿಲೆಗೆ ವ್ಯಕ್ತಿ ತುತ್ತಾಗುತ್ತಾನೆ. ‘ಯುಎಸ್ ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್’ ಪ್ರಕಾರ, ಪ್ರಪಂಚದಾದ್ಯಂತ ಪ್ರತಿ ವರ್ಷ 1.3 ರಿಂದ 4 ದಶಲಕ್ಷ ಜನರು ಕಾಲರಾದಿಂದ ಬಳಲುತ್ತಾರೆ.

ಕಾಲರಾ ತಡೆಗಟ್ಟಲು ಏನು ಮಾಡಬಹುದು?

  • ಕಾಲರಾ ಬಾರದಂತೆ ತಡೆಯಲು ಮೊದಲನೆಯದಾಗಿ, ಕುಡಿಯುವ ನೀರಿನ ನೈರ್ಮಲ್ಯದ ಬಗ್ಗೆ ಎಚ್ಚರಿಕೆ ವಹಿಸಬೇಕು. ಶುದ್ಧೀಕರಿಸಿದ ಅಥವಾ ಚೆನ್ನಾಗಿ ಕುದಿಸಿದ ನೀರನ್ನೇ ಕುಡಿಯಬೇಕು.
  • ಸಾಬೂನು ಮತ್ತು ನೀರಿನಿಂದ ಕೈ ತೊಳೆಯುವುದು, ವಿಶೇಷವಾಗಿ ಊಟ ಅಥವಾ ಅಡುಗೆ ಮಾಡುವ ಮೊದಲು ಎಲ್ಲರೂ ನೈರ್ಮಲ್ಯದ ಅಭ್ಯಾಸಗಳನ್ನು ಅನುಸರಿಸಬೇಕು.
  • ಚೆನ್ನಾಗಿ ಬೆಂದಿರದ ಆಹಾರ ಸೇವನೆಯಿಂದ ದೂರವಿರಬೇಕು.

ಇದನ್ನೂ ಓದಿ: ಮಂಗಳೂರಿಗೂ ತಟ್ಟಿದ ನೀರಿನ ಬಿಕ್ಕಟ್ಟಿನ ಬಿಸಿ: ಶಾಲೆ, ಕಾಲೇಜುಗಳಿಗೆ ರಜೆ ನೀಡಬೇಕಾದ ಅನಿವಾರ್ಯತೆ

ಕಲುಷಿತ ನೀರು ಮತ್ತು ಅನಾರೋಗ್ಯಕರ ಆಹಾರ ಸೇವನೆಯಿಂದ ಕಾಲರಾ ಉಂಟಾಗುತ್ತದೆ. ಒಂದುವೇಳೆ, ಇದಕ್ಕೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ದೊರೆಯದಿದ್ದಲ್ಲಿ ರೋಗಿಯು ಮೃತಪಡುವ ಸಾಧ್ಯತೆಯೂ ಇದೆ. ಈ ರೋಗವನ್ನು ತಡೆಗಟ್ಟಲು ಲಸಿಕೆ ಸಹ ಈಗ ಲಭ್ಯವಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:44 am, Thu, 4 April 24

14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಪತ್ನಿ ಗರ್ಭಿಣಿಯಾಗಿದ್ದಾಗ ಪತಿ ಈ ತಪ್ಪುಗಳನ್ನು ಮಾಡಬಾರದು
ಪತ್ನಿ ಗರ್ಭಿಣಿಯಾಗಿದ್ದಾಗ ಪತಿ ಈ ತಪ್ಪುಗಳನ್ನು ಮಾಡಬಾರದು
Daily horoscope: ಈ ರಾಶಿಯವರು ಇಂದು ಕೆಲಸಗಳಲ್ಲಿ ಯಶಸ್ಸು ಕಾಣುವರು
Daily horoscope: ಈ ರಾಶಿಯವರು ಇಂದು ಕೆಲಸಗಳಲ್ಲಿ ಯಶಸ್ಸು ಕಾಣುವರು