ಇಬ್ಬರು ವೈದ್ಯಕೀಯ ವಿದ್ಯಾರ್ಥಿನಿಯರಲ್ಲಿ ಕಾಲರಾ ಪತ್ತೆ: ಸ್ವಯಂ ಪ್ರೇರಿತ ಪ್ರಕರಣ ದಾಖಲು
ವಾಂತಿ-ಭೇದಿಯಿಂದ ತೀವ್ರ ಅಸ್ವಸ್ಥಗೊಂಡು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿರುವ 49 ವೈದ್ಯಕೀಯ ವಿದ್ಯಾರ್ಥಿನಿಯರ ಪೈಕಿ ಇಬ್ಬರಲ್ಲಿ ಕಾಲರಾ ರೋಗ ಪತ್ತೆಯಾಗಿದೆ. ವಿಕ್ಟೋರಿಯಾ ಆಸ್ಪತ್ರೆಗೆ ಇಂದು (ಏ.06) ಮಹಿಳಾ ಆಯೋಗದ ಅಧ್ಯಕ್ಷೇ ನಾಗಲಕ್ಷ್ಮೀ ಚೌಧರಿ ಭೇಟಿ ನೀಡಿ, ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದರು.
ಬೆಂಗಳೂರು, ಏಪ್ರಿಲ್ 06: ವಾಂತಿ-ಭೇದಿಯಿಂದ ತೀವ್ರ ಅಸ್ವಸ್ಥಗೊಂಡು ವಿಕ್ಟೋರಿಯಾ ಆಸ್ಪತ್ರೆಗೆ (Victoria Hospital) ದಾಖಲಾಗಿರುವ ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ (Bangalore Medical College and Research Institute-BMCRI) 49 ವೈದ್ಯಕೀಯ ವಿದ್ಯಾರ್ಥಿನಿಯರ (Medical Students) ಪೈಕಿ ಇಬ್ಬರಲ್ಲಿ ಕಾಲರಾ ಅಂಶ ಪತ್ತೆಯಾಗಿದೆ. ಇನ್ನು ವಿಕ್ಟೋರಿಯಾ ಆಸ್ಪತ್ರೆಗೆ ಇಂದು (ಏ.06) ಮಹಿಳಾ ಆಯೋಗದ ಅಧ್ಯಕ್ಷೇ ನಾಗಲಕ್ಷ್ಮೀ ಚೌಧರಿ ಭೇಟಿ ನೀಡಿ, ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದರು.
ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ನಾಗಲಕ್ಷ್ಮೀ ಚೌಧರಿ, ಐಸಿಯು ಹಾಗೂ ಜನರಲ್ ವಾರ್ಡ್ನಲ್ಲಿರುವ ವಿದ್ಯಾರ್ಥಿನಿಯರನ್ನು ಭೇಟಿಯಾದೆ. ಅನೇಕರಿಗೆ ಪ್ರಜ್ಞೆನೇ ಇರಲಿಲ್ಲ. ವಿದ್ಯಾರ್ಥಿನಿಯರ ವಸತಿ ನಿಲಯದ ವಾಟರ್ ಟ್ಯಾಂಕ್ ರಿಪೇರಿಯಲ್ಲಿದೆ. ಇದರಲ್ಲಿಯ ನೀರನ್ನು ವಿದ್ಯಾರ್ಥಿನಿಯರಿಗೆ ನೀಡಲಾಗುತ್ತಿದೆ. ಮೆಸ್ ಅನ್ನು ಬಂದ್ ಮಾಡಿಸಲಾಗಿದೆ. ವಿದ್ಯಾರ್ಥಿನಿಯರ ಬೆಡ್ನಲ್ಲಿ ತಿಗಣೆ ಇವೆ. ಇದರ ಬಗ್ಗೆ ವಿದ್ಯಾರ್ಥಿನಿಯರು ಹೇಳಿದ್ದಾರೆ ಎಂದು ತಿಳಿಸಿದರು.
ಇದನ್ನೂ ಓದಿ: ಎಚ್ಚರ, ಬೆಂಗಳೂರಿನಲ್ಲಿ ಹೆಚ್ಚುತ್ತಿದೆ ಕಾಲರಾ: ಸೋಂಕು ತಡೆಯಲು ಏನು ಮಾಡಬೇಕು? ಇಲ್ಲಿದೆ ಸಲಹೆ
ಅವರ ಆರೋಪಗಳ ಬಗ್ಗೆ ನಾನು ಡಾಕ್ಯುಮೆಂಟ್ ಕೇಳಿದ್ದೇನೆ. ಒಂದು ವಾರದಲ್ಲಿ ವರದಿಯನ್ನು ಕೊಡಬೇಕು. ಹಾಗೂ ಒಂದು ವಾರದಲ್ಲಿ ಸಮಸ್ಯೆ ಬಗೆಹರಿಸಲು ಹೇಳಿದ್ದೇನೆ. ಕೋಣೆಗಳು ಚಿಕ್ಕದಾಗಿವೆ. ಸರಿಯಾದ ವ್ಯವಸ್ಥೆ ಇಲ್ಲ. ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ವಿಕ್ಟೋರಿಯಾ ಆಸ್ಪತ್ರೆಯಿಂದ ಊಟ ಹೋಗುತ್ತದೆ. ಈ ಬಗ್ಗೆ ನಾನು ವೈದ್ಯಕೀಯ ಶಿಕ್ಷಣ ಸಚಿವರ ಗಮನಕ್ಕೆ ತರುತ್ತೇನೆ. ಪ್ರತಿಯೊಂದು ಆಸ್ಪತ್ರೆ ಹಾಗೂ ವಸತಿ ನಿಲಯಕ್ಕೆ ಭೇಟಿ ನೀಡುತ್ತೇನೆ. ಅಲ್ಲಿನ ಸಮಸ್ಯೆ ಬಗ್ಗೆ ತಿಳಿಯುತ್ತೇನೆ. ಈಗ ಸುಮೋಟೋ ಪ್ರಕರಣ ದಾಖಲಾಗಿದೆ ಎಂದು ತಿಳಿಸಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:04 pm, Sat, 6 April 24