AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಗಾದಿ ಹಬ್ಬದಂದೇ ಬಾಮೈದನಿಗೆ ಇರಿದು ಕೊಂದ ಬಾವ: ಇಸ್ಪೀಟ್​ ಎಲೆಗಳ ಮೇಲೆ ಬಿತ್ತು ಹೆಣ

ಕೌಟುಂಬಿಕ ಕಲಹ ಹಿನ್ನೆಲೆ ಭಾವನಿಂದ ಬಾಮೈದನನ್ನು ಹತ್ಯೆ ಮಾಡಿರುವಂತಹ ಘಟನೆ ವೆಂಕಟೇಶ್ವರಪುರದಲ್ಲಿ ನಡೆದಿದೆ. ಇಸ್ಪೀಟ್ ಎಲೆ ಮೇಲೆ ಬಾಮೈದ ಕಿರಣ್ ಕುಮಾರ್ ಹೆಣವಾಗಿಬಿದಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಬಾಮೈದ ಸಾವನ್ನಪ್ಪಿದ್ದಾನೆ. ಕೇಸ್ ದಾಖಲಿಸಿಕೊಂಡು ಕೆ.ಜಿ.ಹಳ್ಳಿ ಠಾಣೆ ಪೊಲೀಸರಿಂದ ತನಿಖೆ ಮಾಡಲಾಗುತ್ತಿದೆ.

ಯುಗಾದಿ ಹಬ್ಬದಂದೇ ಬಾಮೈದನಿಗೆ ಇರಿದು ಕೊಂದ ಬಾವ: ಇಸ್ಪೀಟ್​ ಎಲೆಗಳ ಮೇಲೆ ಬಿತ್ತು ಹೆಣ
ಲಕ್ಷ್ಮಣ, ಕಿರಣ್
ಜಗದೀಶ ಬಿ.
| Edited By: |

Updated on:Apr 09, 2024 | 9:54 PM

Share

ಬೆಂಗಳೂರು, ಏಪ್ರಿಲ್​ 09: ಕೌಟುಂಬಿಕ ಕಲಹ ಹಿನ್ನೆಲೆ ಭಾವನಿಂದ ಬಾಮೈದನನ್ನು ಹತ್ಯೆ (killed)  ಮಾಡಿರುವಂತಹ ಘಟನೆ ವೆಂಕಟೇಶ್ವರಪುರದಲ್ಲಿ ನಡೆದಿದೆ. ಇಸ್ಪೀಟ್ ಎಲೆ ಮೇಲೆ ಬಾಮೈದ ಕಿರಣ್ ಕುಮಾರ್ ಹೆಣವಾಗಿಬಿದಿದ್ದಾನೆ. ಆರೋಪಿ ಲಕ್ಷ್ಮಣ ಮತ್ತು ಪತ್ನಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಇದೇ ವಿಚಾರಕ್ಕೆ ಭಾವ, ಬಾಮೈದನ ನಡುವೆ ಇಂದು ಗಲಾಟೆ ನಡೆದಿದೆ. ಯುಗಾದಿ ಹಬ್ಬದ ಪ್ರಯುಕ್ತ ವೆಂಕಟೇಶ್ವರಪುರದ ಗಲ್ಲಿಯಲ್ಲಿ ಇಸ್ಪೀಟ್ ಆಡುತ್ತಿದ್ದ ವೇಳೆ ಚಾಕು ಇರಿದು ಕೊಲೆ ಮಾಡಲಾಗಿದೆ. ಕಿರಣ್ ಕುಮಾರ್ ಹತ್ಯೆಗೆ ಲಕ್ಷ್ಮಣ ಮೊದಲೇ ಸಂಚು ರೂಪಿಸಿದ್ದ. ಹಾಗಾಗಿ ಚಾಕು ಇಟ್ಟುಕೊಂಡು ಬಂದಿದ್ದ.

ಇಸ್ಪೀಟ್ ಎಲೆಗಳ ಮೇಲಿದ್ದ ಹಣ ಎತ್ತಲು ಬಗ್ಗಿದಾಗ ಕಿರಣ್ ಕುಮಾರ್ ಬೆನ್ನಿಗೆ ಭಾವ ಲಕ್ಷ್ಮಣ ಚಾಕುವಿನಿಂದ ಇರಿದಿದ್ದಾನೆ. ಗಾಯಾಳು ಕಿರಣ್ ಕುಮಾರ್​ನನ್ನು ಆಸ್ಪತ್ರೆಗೆ ದಾಖಲಿಸಲು ಯತ್ನಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಬಾಮೈದ ಸಾವನ್ನಪ್ಪಿದ್ದಾನೆ. ಕೇಸ್ ದಾಖಲಿಸಿಕೊಂಡು ಕೆ.ಜಿ.ಹಳ್ಳಿ ಠಾಣೆ ಪೊಲೀಸರಿಂದ ತನಿಖೆ ಮಾಡಲಾಗುತ್ತಿದೆ.

ಕಾರು, ಬೈಕ್ ನಡುವೆ ಡಿಕ್ಕಿ: ಹೆಡ್​ ಕಾನ್ಸ್​ಟೇಬಲ್ ಸ್ಥಳದಲ್ಲೇ ಸಾವು

ಚಿಕ್ಕಮಗಳೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಹೊಡೆದ ಪರಿಣಾಮ ಹೆಡ್​ ಕಾನ್ಸ್​ಟೇಬಲ್ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಕಡೂರು ತಾಲೂಕಿನ ತಂಗಲಿ ಅಂಡರ್ ಪಾಸ್​ನಲ್ಲಿ ನಡೆದಿದೆ. ಸ್ಥಳ ಮಹಜರ್​ಗೆ ಅಂಚೆಚೋಮನಹಳ್ಳಿ ಹೋಗುತ್ತಿದ್ದಾಗ ಘಟನೆ ಸಂಭವಿಸಿದೆ. ಮಲ್ಲಿಕಾರ್ಜುನ್(44) ಮೃತ ಕಡೂರು ಠಾಣೆ ಹೆಡ್ ಕಾನ್ಸ್ಟೇಬಲ್. ಮಲ್ಲಿಕಾರ್ಜುನ್ ಕಡೂರು ತಾಲೂಕಿನ ಚಟ್ಟನಹಳ್ಳಿ ನಿವಾಸಿ. ಸ್ಥಳಕ್ಕೆ ಕಡೂರು ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ಮಾಡಿದ್ದಾರೆ.

ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ಯುವಕ ಸಾವು

ಕೋಲಾರ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಯುವಕ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಬೀರಂಡಹಳ್ಳಿ ಗ್ರಾಮದಲ್ಲಿ ನಡೆದಿದೆ. ಬೀರಂಡಹಳ್ಳಿ ಗ್ರಾಮಕ್ಕೆ ಹಬ್ಬಕ್ಕೆಂದು ಬಂದಿದ್ದ ಇಪ್ಪತ್ತು ವರ್ಷದ ಲಿಖಿತ್ ಎಂಬಾತ ಕೃಷಿಹೊಂಡದಲ್ಲಿ ಮುಳುಗಿ ಮೃತಪಟ್ಟಿದ್ದಾನೆ.

ಇದನ್ನೂ ಓದಿ: ಮತ್ತೊಂದು ಸ್ಕ್ಯಾಮ್ ಬೆಳಕಿಗೆ: 1 ರೂ. ಕುಳುಹಿಸಿ ಸಾವಿರಾರು ರೂ. ದೋಚುತ್ತಾರೆ ವಂಚಕರು, ಹುಷಾರ್​!

ಬೆಳಿಗ್ಗೆ ಹಬ್ಬ ಎಂದು ಸ್ನಾನ ಮಾಡಿ ನಂತರ ಹನ್ನೊಂದು ಗಂಟೆ ಸುಮಾರಿಗೆ ಒಬ್ಬಟ್ಟು ತಿಂದು ಈಜಾಡಲು ಹೋದ ಯುವಕ, ಈಜಾಡಿದ ನಂತರ ಕೃಷಿ ಹೊಂಡದಿಂದ ಮೇಲೆ ಬರಲಾಗದೆ ನೀರಿನಲ್ಲೇ ಮುಳುಗಿ ಸಾವನ್ನಪ್ಪಿದ್ದಾನೆ. ಸದ್ಯ ಘಟನೆ ತಿಳಿದು ಸ್ಥಳಕ್ಕೆ ಬಂಗಾಪೇಟೆ ಪೊಲೀಸರು ಭೇಟಿ ನೀಡಿದ್ದು ಘಟನೆ ಸಂಬಂಧ ಬಂಗಾರಪೇಟೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಚಿಕಿತ್ಸೆಗೆ ದಾಖಲಾಗಿದ್ದ ಮಹಿಳೆ ಆತ್ಮಹತ್ಯೆ

ಕೋಲಾರ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಮಾಲೂರು ಮೂಲದ ರತ್ಮಮ್ಮ (೪೫) ಆತ್ಮಹತ್ಯೆಗೆ ಶರಣಾದ ಮಹಿಳೆ. ಕಿಡ್ನಿ ವೈಫಲ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ಐದು ದಿನದ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಕೋಲಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:51 pm, Tue, 9 April 24

Follow Us
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ