ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಎಫ್​ಐಆರ್ ದಾಖಲು

ಲೋಕಸಭಾ ಚುನಾವಣೆ ಕಣ ರಂಗೇರಿದ್ದು, ಈ ಮಧ್ಯೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್​ ವಿರುದ್ದ ಎಫ್​ಐಆರ್​ ದಾಖಲಾಗಿದೆ. ಆರ್​ಆರ್​ ನಗರ ಅಪಾರ್ಟ್ಮೆಂಟ್ ವೊಂದರಲ್ಲಿ ಮತಯಾಚನೆ ವೇಳೆ ಡಿಕೆಶಿ ಬೆದರಿಕೆ ಹಾಕಿದ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಚುನಾವಣಾ ಆಯೋಗಕ್ಕೆ ಬಿಜೆಪಿ ಮಾಹಿತಿ ನೀಡಿತ್ತು. ಇದರ ಬೆನ್ನಲ್ಲೇ ಮಾಹಿತಿ ಪಡೆದು ಪೊಲೀಸರು ಎಫ್ಐಆರ್ ದಾಖಲು  ಮಾಡಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಎಫ್​ಐಆರ್ ದಾಖಲು
ಡಿಕೆ ಶಿವಕುಮಾರ್​ ವಿರುದ್ದ ಎಫ್​ಐಆರ್​ ದಾಖಲು
Follow us
Shivaprasad
| Updated By: ಕಿರಣ್ ಹನುಮಂತ್​ ಮಾದಾರ್

Updated on:Apr 20, 2024 | 5:04 PM

ಬೆಂಗಳೂರು, ಏ.20: ಮತಯಾಚನೆ ವೇಳೆ ಬೆದರಿಕೆ ಆರೋಪದ ಹಿನ್ನಲೆ ಡಿಸಿಎಂ ಡಿಕೆ ಶಿವಕುಮಾರ್(DK Shivakumar) ವಿರುದ್ಧ ಬೆಂಗಳೂರಿನ ಆರ್​ಎಂಸಿ ಯಾರ್ಡ್ ಠಾಣೆಯಲ್ಲಿ ಎಫ್​ಐಆರ್(FIR) ದಾಖಲಾಗಿದೆ. ಆರ್​ಆರ್​ ನಗರ ಅಪಾರ್ಟ್ಮೆಂಟ್ ವೊಂದರಲ್ಲಿ ಮತಯಾಚನೆ ವೇಳೆ ಡಿಕೆಶಿ ಬೆದರಿಕೆ ಹಾಕಿದ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಚುನಾವಣಾ ಆಯೋಗಕ್ಕೆ ಬಿಜೆಪಿ ಮಾಹಿತಿ ನೀಡಿತ್ತು. ಇದರ ಬೆನ್ನಲ್ಲೇ ಮಾಹಿತಿ ಪಡೆದು ಪೊಲೀಸರು ಎಫ್ಐಆರ್ ದಾಖಲು  ಮಾಡಿದ್ದಾರೆ.

ಲಂಚ, ಚುನಾವಣೆಯಲ್ಲಿ ಅನಗತ್ಯ ಪ್ರಭಾವ ಬಳಸಿರೋ ಆರೋಪ

ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್​ ಅಭ್ಯರ್ಥಿ ಡಿಕೆ ಸುರೇಶ್ ಪರ ಡಿಕೆ ಶಿವಕುಮಾರ್ ಮತಯಾಚನೆ ಮಾಡಿದ್ದರು. ಈ ವೇಳೆ ಬೆದರಿಕೆ ಹಾಕಿದ್ದ ಆರೋಪ ಕೇಳಿ ಬಂದಿತ್ತು. ಈ ಹಿನ್ನಲೆ ಲಂಚ ಮತ್ತು ಚುನಾವಣೆಯಲ್ಲಿ ಅನಗತ್ಯ ಪ್ರಭಾವ ಬಳಸಿರೋ ಆರೋಪದಡಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ:ಮತದಾರರಿಗೆ ಬೆದರಿಕೆ ಆರೋಪ: ಡಿಕೆ ಶಿವಕುಮಾರ್ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಚುನಾವಣಾ ಆಯೋಗಕ್ಕೆ ದೂರು ನೀಡಿದ್ದ ಬಿಜೆಪಿ

ಡಿಕೆ ಶಿವಕುಮಾರ್ ಮತದಾರರನ್ನು ಬ್ಲ್ಯಾಕ್​ಮೇಲ್ ಮಾಡಿದ್ದಾರೆ ಎಂದು ಬಿಜೆಪಿ ಕೆಲವು ದಿನಗಳ ಹಿಂದೆ ಟ್ವೀಟ್ ಮಾಡಿತ್ತು. ಅದರಲ್ಲಿ ಡಿಕೆಶಿ ಮಾತನಾಡುತ್ತಿರುವ ವಿಡಿಯೋವನ್ನೂ ಕೂಡ ಹಂಚಿಕೊಂಡಿತ್ತು. ‘ನಾನು ಇಲ್ಲಿಗೆ ವ್ಯವಹಾರಕ್ಕಾಗಿ ಬಂದಿದ್ದೇನೆ. ಈ ಅಪಾರ್ಟ್ಮೆಂಟ್​​ನಲ್ಲಿ 2510 ಮನೆಗಳಿವೆ. 6424 ಮತಗಳಿವೆ. ನಿಮ್ಮ ಎರಡು ಸಮಸ್ಯೆಗಳೆಂದರೆ ಹಕ್ಕುಪತ್ರ ನಿಮಗೆ ಹಸ್ತಾಂತರವಾಗದಿರುವುದು. ಎರಡನೇಯದ್ದು ಕಾವೇರಿ ನೀರು ಸಂಪರ್ಕ ದೊರೆಯದೇ ಇರುವುದು. ಒಂದು ವೇಳೆ ಈ ಎರಡನ್ನೂ ನಾನು ನಿಮಗೆ ನೀಡಿದರೆ ನೀವು ನನಗೆ ಏನು ಕೊಡುತ್ತೀರಿ?, ನಿಮ್ಮ ಬೂತ್​ ಆರ್​ಆರ್​ ನಗರದಲ್ಲಿದೆ. 2 ರಿಂದ 3 ಬೂತ್​ನಲ್ಲಿ ನಮ್ಮ ಪರವಾದ ಮತಗಳಿವೆ. ಪ್ರಶ್ನಾರ್ಥಕವಾಗಿ ಉಳಿದಿರುವುದು ನಿಮ್ಮ ಬೂತ್​ ಮಾತ್ರ. ಈಗ ಹೇಳಿ ಏನು ಮಾಡುತ್ತೀರಿ’ ಎಂದು ಡಿಕೆಶಿ ಕೇಳುತ್ತಿರುವುದು ಬಿಜೆಪಿ ಟ್ವೀಟ್ ಮಾಡಿದ ವಿಡಿಯೋದಲ್ಲಿತ್ತು. ಈ ಹಿನ್ನಲೆ ದೂರು ನೀಡಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:53 pm, Sat, 20 April 24