AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತದಾರರಿಗೆ ಆಮಿಷ ಪ್ರಕರಣ; ಡಿಕೆ ಶಿವಕುಮಾರ್​ ವಿರುದ್ಧ ಬಲವಂತದ ಕ್ರಮಕೈಗೊಳ್ಳದಂತೆ ಹೈಕೋರ್ಟ್ ಸೂಚನೆ

ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಪರ ಮತಯಾಚನೆ ಮಾಡಿದ್ದ ವೇಳೆ ಡಿಕೆ ಶಿವಕುಮಾರ್ ಮತದಾರರಿಗೆ ಬೆದರಿಕೆ ಹಾಕಿ ಅವರನ್ನು ಬ್ಲ್ಯಾಕ್​ಮೇಲ್ ಮಾಡಿದ್ದಾರೆ ಎಂದು ಬಿಜೆಪಿ ಆರೋಪಿಸಿತ್ತು. ಈ ಕುರಿತು ದೂರು ಕೂಡ ದಾಖಲಾಗಿತ್ತು. ಇದನ್ನು ಪ್ರಶ್ನಿಸಿ ಡಿಸಿಎಂ ಮಂಗಳವಾರ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ವಿಚಾರಣೆ ಬಳಿಕ ಡಿಕೆ ಶಿವಕುಮಾರ್​ ವಿರುದ್ಧ ಬಲವಂತದ ಕ್ರಮಕೈಗೊಳ್ಳದಂತೆ ಹೈಕೋರ್ಟ್ ಸೂಚನೆ ನೀಡಿದೆ.

ಮತದಾರರಿಗೆ ಆಮಿಷ ಪ್ರಕರಣ; ಡಿಕೆ ಶಿವಕುಮಾರ್​ ವಿರುದ್ಧ ಬಲವಂತದ ಕ್ರಮಕೈಗೊಳ್ಳದಂತೆ ಹೈಕೋರ್ಟ್ ಸೂಚನೆ
ಡಿಕೆ ಶಿವಕುಮಾರ್​ ವಿರುದ್ಧ ಬಲವಂತದ ಕ್ರಮಕೈಗೊಳ್ಳದಂತೆ ಹೈಕೋರ್ಟ್ ಸೂಚನೆ
Ramesha M
| Edited By: |

Updated on:Apr 25, 2024 | 4:15 PM

Share

ಬೆಂಗಳೂರು, ಏ.25: ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಆಮಿಷ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್(DK Shivakumar)​​ಗೆ ಕೊಂಚ ರಿಲೀಫ್ ದೊರೆತಿದ್ದು, ಡಿಕೆಶಿ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ (High Court)​ ಸೂಚನೆ ನೀಡಿದೆ. ‘ತಮ್ಮ ವಿರುದ್ಧ ಬೆಂಗಳೂರಿನ ಆರ್​ಎಂಸಿ ಯಾರ್ಡ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿರುವುದನ್ನು ಪ್ರಶ್ನಿಸಿ ಡಿಸಿಎಂ ಮಂಗಳವಾರ ಹೈಕೋರ್ಟ್ ಮೆಟ್ಟಿಲೇರಿದ್ದರು. ಅದರಂತೆ ಇಂದು(ಏ.25) ವಿಚಾರಣೆ ನಡೆಸಲಾಗಿ ‘ಚುನಾವಣೆ ಭಾಷಣವನ್ನು ಆಮಿಷವೆಂದು ಆರೋಪಿಸಲಾಗಿದೆ ಎಂದು ಡಿಕೆಶಿ ಪರ ಹಿರಿಯ ವಕೀಲ ಉದಯ್ ಹೊಳ್ಳ ಅವರು ವಾದ ಮಾಡಿದ್ದರು.

ಡಿಕೆಶಿ ಪರ ವಾದಕ್ಕೆ ಚುನಾವಣಾ ಆಯೋಗದ ವಕೀಲರ ಆಕ್ಷೇಪ

ಇನ್ನು ಡಿಕೆಶಿ ಪರ ವಾದಕ್ಕೆ ಚುನಾವಣಾ ಆಯೋಗದ ವಕೀಲರು ಆಕ್ಷೇಪ ವ್ಯಕ್ತಪಡಿಸಿ, ‘ಮತದಾರರಿಗೆ ಡಿಕೆ ಶಿವಕುಮಾರ್ ಆಮಿಷ ಒಡ್ಡಿದ್ದಾರೆ. ‘ನಾನು ಇಲ್ಲಿ ಬಿಸಿನೆಸ್ ಡೀಲ್​ಗೆ ಬಂದಿದ್ದೇನೆ, ‘ನಿಮಗೆ ಹೆಚ್ಚು ಕಾವೇರಿ ನೀರು ಜೊತೆಗೆ ನಿಮಗೆ ಅಪಾರ್ಟ್ ಮೆಂಟ್ ಪಕ್ಕದಲ್ಲಿ ಸಿಎ ಸೈಟ್ ಬೇಕೆಂದು ಕೇಳಿದ್ದೀರಿ. ನೀವು ನಮಗೆ ಮತ ಹಾಕಿದ 2 ರಿಂದ 3 ತಿಂಗಳಲ್ಲಿ ನಿಮಗೆ ಅದನ್ನು ಹಸ್ತಾಂತರಿಸುತ್ತೇನೆ ಎಂಬ ಡಿಕೆಶಿ ಹೇಳಿಕೆಯನ್ನ ಉಲ್ಲೇಖಿಸಿ ವಕೀಲ ಶರತ್ ದೊಡ್ಡವಾಡ್ ವಾದ ಮಂಡಿಸಿದ್ದರು.

ಇದನ್ನೂ ಓದಿ:ಮತದಾರರಿಗೆ ಆಮಿಷ, ಬೆದರಿಕೆ ಆರೋಪ: ಎಫ್​ಐಆರ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಡಿಕೆ ಶಿವಕುಮಾರ್

ಚುನಾವಣೆ ಪ್ರಚಾರದ ಗುಣಮಟ್ಟ ಕುಸಿತಕ್ಕೆ ಹೈಕೋರ್ಟ್ ಕಳವಳ

ಚುನಾವಣೆ ಪ್ರಚಾರದ ಗುಣಮಟ್ಟ ಕುಸಿತಕ್ಕೆ ಹೈಕೋರ್ಟ್ ಕಳವಳಗೊಂಡಿದ್ದು, ಭಾಷಣದ ವೇಳೆ ಇದು ಪುನರಾವರ್ತನೆ ಆಗದಂತೆ ಎಚ್ಚರಿಸಿ, ಡಿಕೆಶಿ ಪರ ಹಿರಿಯ ವಕೀಲ ಉದಯ್ ಹೊಳ್ಳ ಅವರಿಗೆ ಕೋರ್ಟ್ ಸೂಚಿಸಿದೆ. ಜೊತೆಗೆ ಮುಂದಿನ ವಿಚಾರಣೆವರೆಗೂ ಬಲವಂತದ ಕ್ರಮ ಕೈಗೊಳ್ಳದಂತೆ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಹೈಕೋರ್ಟ್ ಪೀಠ ಸೂಚನೆ ನೀಡಿದೆ.

ಘಟನೆ ವಿವರ

ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಪರ ರಾಜರಾಜೇಶ್ವರಿ ನಗರದ ಅಪಾರ್ಟ್​ಮೆಂಟೊಂದರಲ್ಲಿ ಡಿಕೆ ಶಿವಕುಮಾರ್ ಮತಯಾಚನೆ ಮಾಡಿದ್ದರು. ಈ ವೇಳೆ ಮತದಾರರಿಗೆ ಬೆದರಿಕೆ ಹಾಕಿ ಅವರಿಗೆ ಬೆದರಿಕೆ ಹಾಕಿದ್ದಾರೆ ಎಂದು ಬಿಜೆಪಿ ಆರೋಪಿಸಿತ್ತು. ಅದಕ್ಕೆ ಸಂಬಂಧಿಸಿದ ವಿಡಿಯೋವನ್ನು ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಪೋಸ್ಟ್ ಮಾಡಿತ್ತು. ನಂತರ ಆ ಕುರಿತು ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:11 pm, Thu, 25 April 24