ಬೆಂಗಳೂರು, ಏ.20: ಟಿಪ್ಪರ್ ವಾಹನ ಹರಿದು 4 ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಕೆಂಗೇರಿ ಬಳಿಯ ರಾಮೋಹಳ್ಳಿಯಲ್ಲಿ(Ramohalli) ನಡೆದಿದೆ. ಅಮತ್ ಮತ್ತು ಪೂಜಾ ದಂಪತಿಯ ಮಗು ಕೊನೆಯುಸಿರೆಳೆದಿದೆ. ಮಗನಿಗೆ ತಿಂಡಿ ಕೊಡಿಸಲು ಹೋದಾಗ ಈ ದುರ್ಘಟನೆ ನಡೆದಿದೆ. ಈ ಕುರಿತು ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಹುಬ್ಬಳ್ಳಿ, ಏ.20: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಅಧಿಕಾರಿಯೊಬ್ಬ ಹೃದಯಾಘಾತದಿಂದ (Heart attack) ಸಾವನ್ನಪ್ಪಿರುವ ಧಾರುಣ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ದಾವಣಗೆರೆ ಮೂಲದ ಬಿ.ಆರ್.ಕೃಷ್ಣಮೂರ್ತಿ (52) ಮೃತ ರ್ದುದೈವಿ. ಹೆಸ್ಕಾಂ ಕೇಂದ್ರ ಕಚೇರಿಯ ಎಇಇ ಆಗಿದ್ದ ಇವರು ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಸೆಕ್ಟರ್ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.
ಇದನ್ನೂ ಓದಿ:ಕಲಬುರಗಿ: ಬಸ್ನಲ್ಲಿ ಪ್ರಯಾಣಿಸ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು
ಚಿತ್ರದುರ್ಗ: ಜಿಲ್ಲೆಯ ಹೊಳಲ್ಕೆರೆಯ ಕಣಿವೆ ಆಂಜನೇಯ ದೇಗುಲ ಬಳಿ ಕಾರು ಪಲ್ಟಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದರೆ, ಇಬ್ಬರಿಗೆ ಗಾಯವಾದ ಘಟನೆ ನಡೆದಿದೆ. ಕಾರ್ನಲ್ಲಿದ್ದ ಮಂಜುನಾಥ್(40) ಮೃತ ರ್ದುದೈವಿ. ಗಾಯವಾದ ಇಬ್ಬರನ್ನು ಹೊಳಲ್ಕೆರೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇವರು ಹೊಳಲ್ಕೆರೆ ಮಾರ್ಗವಾಗಿ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದರು. ಈ ವೇಳೆ ದುರ್ಘಟನೆ ನಡೆದಿದೆ. ಈ ಘಟನೆ ಹೊಳಲ್ಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:40 pm, Sat, 20 April 24