AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓನರ್ ಮನೆಗೆ ಕನ್ನಹಾಕಿದ ಬಾಡಿಗೆದಾರ, ನಕಲಿ ಕೀ ಮಾಡಿಟ್ಟುಕೊಂಡಿದ್ದ ಖದೀಮ

ಉಂಡ ಮನೆಗೆ ದ್ರೋಹ ಎಂಬಂತೆ ಈಗಿನ ಕಾಲದಲ್ಲಿ ಯಾರನ್ನ ನಂಬುವುದು, ಬಿಡುವುದು ಗೊತ್ತಾಗುತ್ತಿಲ್ಲ. ಇತ್ತಿಚೆಗಷ್ಟೇ ಹಣಕ್ಕಾಗಿ ಮನೆಯ ಮಾಲಕಿಯನ್ನೇ ಕೊಲೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿತ್ತು. ಅದರಂತೆ ಇದೀಗ ನಗರದ ಮಹಾದೇವಪುರ ಠಾಣಾ ವ್ಯಾಪ್ತಿಯ ನಾರಾಯಣಪುರ(Narayanapura)ದಲ್ಲಿ

ಓನರ್ ಮನೆಗೆ ಕನ್ನಹಾಕಿದ ಬಾಡಿಗೆದಾರ, ನಕಲಿ ಕೀ ಮಾಡಿಟ್ಟುಕೊಂಡಿದ್ದ ಖದೀಮ
ಆರೋಪಿ ಕಳ್ಳ
ಶಿವಪ್ರಸಾದ್​ ಬಿ.
| Edited By: ಕಿರಣ್ ಹನುಮಂತ್​ ಮಾದಾರ್|

Updated on:May 21, 2024 | 5:50 PM

Share

ಬೆಂಗಳೂರು, ಮೇ.21: ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ಕಳ್ಳತನ(Theft) ಪ್ರಕರಣಗಳು ಹೆಚ್ಚುತ್ತಿದ್ದು, ಇದೀಗ ಓನರ್ ಮನೆಯ ನಕಲಿ ಕೀ ಮಾಡಿಕೊಂಡು ಬಾಡಿಗೆದಾರನೇ ಕಳ್ಳತನ ಮಾಡಿದ ಘಟನೆ ಬೆಂಗಳೂರಿನ ಮಹಾದೇವಪುರ ಠಾಣಾ ವ್ಯಾಪ್ತಿಯ ನಾರಾಯಣಪುರ(Narayanapura)ದಲ್ಲಿ ನಡೆದಿದೆ. ಹೌದು, ಮನೆಯ ಮಾಲಕಿ ಮೇ.07 ರಂದು ತಮಿಳುನಾಡಿನ ಮಳೈನೂರ್​ನ ದೇವಸ್ಥಾನಕ್ಕೆ ಹೋಗಿದ್ದರು. ಈ ವೇಳೆ ಮನೆಯ ನಕಲಿ ಕೀಯನ್ನ ಮಾಡಿಕೊಂಡಿದ್ದ ಬಾಡಿಗೆದಾರ ಸೆಲ್ವರಾಜ್ ಎಂಬಾತ ತನ್ನ ಕೈಚಳಕ ತೋರಿಸಿದ್ದಾನೆ.

ಇನ್ನು ವೃದ್ಧೆ ದೇವಸ್ಥಾನಕ್ಕೆ ಹೋಗಿ ಮೇ.09 ನೇ ತಾರೀಖು ಮನೆಗೆ ಬಂದಿದ್ದರು. ಇದಾದ ಅಂದರೆ ಮೇ.15 ರಂದು ಅಲ್ಮೇರಾ (ಬೀರು) ನೋಡಿದಾಗ ಆಭರಣ ಹಣ ಕಳವಾಗಿತ್ತು. ಗಾಬರಿಗೊಂಡ ಮನೆ ಮಾಲಕಿ, ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ. ಈ ಕುರಿತು ತನಿಖೆ ಕೈಗೊಂಡಾಗ ಬಾಡಿಗೆದಾರನೇ ಕೃತ್ಯ ಮಾಡಿರೋದು ಬೆಳಕಿಗೆ ಬಂದಿದೆ. ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ ಬಾಡಿಗೆದಾರನನ್ನ ಪೊಲೀಸರು ವಶಕ್ಕೆ ಪಡೆದಿದ್ದು, ಬಂಧಿತನಿಂದ 72 ಸಾವಿರ ನಗದು 78 ಗ್ರಾಂ ಚಿನ್ನಾಭರಣವನ್ನು ಜಪ್ತಿ ಮಾಡಿದ್ದಾರೆ. ಈ ಕುರಿತು ಮಹಾದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಕಳ್ಳತನ ಮಾಡೋಕೆ ಖದೀಮನಿಗೂ ತಿಂಗಳ ಸಂಬಳ; ಚೋರ ಗುರು ಸೇರಿ ಮೂವರು ಅರೆಸ್ಟ್

ಹಾಡಹಗಲೇ ಅಂಗಡಿ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನ

ಬಾಗಲಕೋಟೆ: ಹಾಡಹಗಲೇ ಅಂಗಡಿ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನವಾದ ಘಟನೆ ಇಂದು(ಮೇ.21) ಬೆಳಿಗ್ಗೆ 11 ಗಂಟೆಯ ಸುಮಾರಿಗೆ ಇಳಕಲ್​ ಪಟ್ಟಣದಲ್ಲಿ ನಡೆದಿದೆ. ವೀರಣ್ಣ ಆರಿ ಎಂಬುವವರು ತಮ್ಮ ಅಂಗಡಿ ಮುಂದೆ ಬೈಕ್ ನಿಲ್ಲಿಸಿದ್ದರು. ಈ ವೇಳೆ ಸೈಲೆಂಟ್​ ಆಗಿ ಬಂದ ಬೈಕ್​ ಕಳ್ಳತನ ಮಾಡಿಕೊಂಡು ಹೋಗಿದ್ದಾನೆ. ಕಳ್ಳತನದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಬೈಕ್ ಕಳ್ಳರ ಹಾವಳಿಗೆ ಹೈರಾಣದ ಜನ

ಆನೇಕಲ್: ತಾಲ್ಲೂಕಿನ ಜಿಗಣಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ರಾತ್ರಿಯಾದ್ರೆ ಎಂಟ್ರಿ ಕೊಡುವ ಬೈಕ್ ಕಳ್ಳರು,  ಮನೆಯ ಮುಂದೆ ನಿಲ್ಲಿಸಿದ್ದ ಬೈಕ್​ಗಳನ್ನ ಕಳ್ಳತನ ಮಾಡುತ್ತಿದ್ದಾರೆ. ಮಾಸ್ತೇನಹಳ್ಳಿ, ಶ್ರೀರಾಮಪುರ ಭಾಗದಲ್ಲಿ ಕಳೆದ ಹದಿನೈದು ದಿನಗಳಲ್ಲಿ ಸರಣಿ ಬೈಕ್​ಗಳ ಕಳ್ಳತನ ನಡೆದಿದೆ. ಇನ್ನು ಈ ಕಳ್ಳರು ಬೆಲೆಬಾಳುವ ರಾಯಲ್ ಎನ್ಫೀಲ್ಡ್, ಡ್ಯೂಕ್, ಆರ್.ಎಕ್ಸ್ ಬೈಕ್​ಗಳನ್ನೇ ಟಾರ್ಗೆಟ್​ ಮಾಡಿ ಕೈಚಳಕ ತೋರಿಸುತ್ತಿದ್ದಾರೆ. ಮೂವರು ಕದೀಮರು ಸೇರಿ ಬೈಕ್​ಗಳನ್ನ ಕದಿಯುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಜಿಗಣಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:45 pm, Tue, 21 May 24

Follow Us
ಶಿವಪ್ರಸಾದ್​ ಬಿ.
ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ