ಜೈ ಶ್ರೀರಾಮ್ ಎಂದಿದ್ದಕ್ಕೆ ಹಲ್ಲೆ: ಕಾರಿನಲ್ಲಿ ಹೋಗ್ತಿದ್ದವರನ್ನ ಅಡ್ಡಗಟ್ಟಿದ್ದ ಯುವಕರು ಅಂದರ್

ಬೆಂಗಳೂರಿನಲ್ಲಿ ರಾಮನವಮಿ ಮುಗಿಸಿಕೊಂಡು ಹೋಗುತ್ತಿದ್ದವರ ಕಾರು ಅಡ್ಡಗಟ್ಟಿ ನಿಲ್ಲಿಸಿ ಹಲ್ಲೆ ಮಾಡಿದ್ದ ಪ್ರಕರಣ ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಬೈಕ್‌ನಲ್ಲಿ ಬಂದ ಯುವಕರು, ಜೈ ಶ್ರೀ ರಾಮ್ ಇಲ್ಲಾ… ಓನ್ಲೀ ಅಲ್ಲಾ ಹು ಅಕ್ಬರ್ ಎಂದು ಪುಂಡಾಟ ಮಾಡಿದ್ದ ಅನ್ಯಕೋಮಿನ ಯುವಕರನ್ನು ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

ಜೈ ಶ್ರೀರಾಮ್ ಎಂದಿದ್ದಕ್ಕೆ ಹಲ್ಲೆ: ಕಾರಿನಲ್ಲಿ ಹೋಗ್ತಿದ್ದವರನ್ನ ಅಡ್ಡಗಟ್ಟಿದ್ದ ಯುವಕರು ಅಂದರ್
ಜೈ ಶ್ರೀರಾಮ್ ಎಂದಿದ್ದಕ್ಕೆ ಹಲ್ಲೆ: ಕಾರಿನಲ್ಲಿ ಹೋಗ್ತಿದ್ದವರನ್ನ ಅಡ್ಡಗಟ್ಟಿದವರು ಅಂದರ್
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Apr 17, 2024 | 11:08 PM

ಬೆಂಗಳೂರು, ಏ.17: ರಾಮನವಮಿ(Rama Navami) ಮುಗಿಸಿಕೊಂಡು ಕಾರಿನಲ್ಲಿ ಹೋಗುತ್ತಿದ್ದವರನ್ನ ಅಡ್ಡಗಟ್ಟಿ ಅನ್ಯಕೋಮಿನ ಯುವಕರು ಪುಂಡಾಟ ಮೆರೆದ ಘಟನೆ ಬೆಂಗಳೂರಿನ ವಿದ್ಯಾರಣ್ಯಪುರದ(Vidyaranyapura) ಬೆಟ್ಟಳ್ಳಿ ಮಸೀದಿ ಬಳಿ ಇಂದು(ಏ.17) ನಡೆದಿತ್ತು. ಈ ಘಟನೆಗೆ ಸಂಬಂಧಿಸಿದಂತೆ ವಿದ್ಯಾರಣ್ಯಪುರ ಠಾಣೆ ಪೊಲೀಸರು ಓರ್ವ ಅಪ್ರಾಪ್ತ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಫರ್ಮಾನ್, ಸಮೀರ್ ಹಾಗೂ ಓರ್ವ ಅಪ್ರಾಪ್ತ. ಈ ಮೂವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

ಘಟನೆ ವಿವರ

ಕಾರಿನಲ್ಲಿ ಹೋಗುವಾಗ ಇಬ್ಬರು ಮುಸ್ಲಿಂ ಯುವಕರು ಅಡ್ಡಹಾಕಿ ‘ಕಾರಿನ ಬಳಿ ಬಂದು ಜೈ ಶ್ರೀರಾಮ್ ಎಂದು ಹೇಳಬೇಕಾ, ಜೈ ಶ್ರೀ ರಾಮ್ ಇಲ್ಲ. ಓನ್ಲೀ ಅಲ್ಲಾ ಹು ಅಕ್ಬರ್ ಎಂದು ಹೇಳಿ, ಕಾರಿನಲ್ಲಿ ಇದ್ದವರಿಗೆ ಅವಾಚ್ಯವಾಗಿ ನಿಂದಿಸಿದ್ದರು. ಇದೇ ವೇಳೆ ಕಾರಿನಲ್ಲಿದ್ದ ಯುವಕರು, ಈ ಕುರಿತು ಪ್ರಶ್ನಿಸಿದಾಗ, ಅಲ್ಲೆ ಇದ್ದ ಮತ್ತೆ ಮೂವರು ಸೇರಿಕೊಂಡು ಹಿಂದು ಯುವಕರ ಮೇಲೆ ಹಲ್ಲೆ ಮಾಡಿದ್ದರು. ಈ ಘಟನೆ ಸಂಬಂಧ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಇದನ್ನೂ ಓದಿ:ರಾಮನವಮಿ ಮುಗಿಸಿ ಹೋಗುತ್ತಿದ್ದವರನ್ನ ಅಡ್ಡಗಟ್ಟಿ ಓನ್ಲೀ ಅಲ್ಲಾ ಹು ಅಕ್ಬರ್ ಎಂದ ಅನ್ಯಕೋಮಿನ ಯುವಕರು

ಈಶಾನ್ಯ ಡಿಸಿಪಿ ಲಕ್ಷ್ಮೀ ಪ್ರಸಾದ್ ಹೇಳಿದ್ದಿಷ್ಟು

ಈ ಘಟನೆ ಕುರಿತು ಈಶಾನ್ಯ ಡಿಸಿಪಿ ಲಕ್ಷ್ಮೀ ಪ್ರಸಾದ್ ಮಾತನಾಡಿ,  ಘಟನೆ ಕುರಿತು ಐಪಿಸಿ ಸೆಕ್ಷನ್ 295a, 298, 143, 147, 504,324, 326, 149, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಮೂವರು ಯುವಕರು ಕಾರಿನಲ್ಲಿ ಹೋಗುವಾಗ ಬಾವುಟ ಹಿಡಿದುಕೊಂಡು ಜೈ ಶ್ರೀರಾಮ್ ಅಂದಿದ್ದಾರೆ. ಈ ವೇಳೆ ಇಬ್ಬರು ಯುವಕರು ಕಾರು ಅಡ್ಡಗಟ್ಟಿದ್ದಾರೆ. ಜೈ ಶ್ರೀರಾಮ್ ಎಂದು ಯಾಕೆ ಕೂಗ್ತಿರಾ, ಅಲ್ಲಾ ಅನ್ನಿ ಎಂದು ಗಲಾಟೆ ಮಾಡಿದ್ದಾರೆ. ಗಲಾಟೆ ಮಾಡಿ ಮತ್ತಷ್ಟು ಯುವಕರನ್ನು ಕರೆತಂದಿದ್ದಾರೆ. ಈ ವೇಳೆ ಅಲ್ಲಿಗೆ ಬಂದವರು ಸೇರಿಕೊಂಡು ಕಾರಿನಲ್ಲಿದ್ದ ಮೂವರು ಯುವಕರ ಮೇಲೆ ಹಲ್ಲೆ ಮಾಡಿದ್ದಾರೆ. ಈ ಕುರಿತು ಕೇಸ್ ರಿಜಿಸ್ಟರ್ ಆಗಿದೆ ಎಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:06 pm, Wed, 17 April 24

ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ