AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಪಿ ನಡ್ಡಾ, ಬಿವೈ ವಿಜಯೇಂದ್ರ, ಐಟಿ ಸೆಲ್ ಮುಖ್ಯಸ್ಥನಿಗೆ ಹೈಗ್ರೌಂಡ್ಸ್ ಪೊಲೀಸ್​​ ಸಮನ್ಸ್

ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ವಿರುದ್ಧ ಸಮುದಾಯಗಳಿಗೆ ಸಂಬಂಧಿಸಿ ಪೋಸ್ಟ್ ಆರೋಪದ ಹಿನ್ನಲೆ ಎಫ್​ಐಆರ್​ (FIR) ಆಗಿತ್ತು. ಇದೀಗ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

ಜೆಪಿ ನಡ್ಡಾ, ಬಿವೈ ವಿಜಯೇಂದ್ರ, ಐಟಿ ಸೆಲ್ ಮುಖ್ಯಸ್ಥನಿಗೆ ಹೈಗ್ರೌಂಡ್ಸ್ ಪೊಲೀಸ್​​ ಸಮನ್ಸ್
ಜೆಪಿ ನಡ್ಡಾ, ಬಿವೈ ವಿಜಯೇಂದ್ರ, ಐಟಿ ಸೆಲ್ ಮುಖ್ಯಸ್ಥನಿಗೆ ಹೈಗ್ರೌಂಡ್ಸ್ ಪೊಲೀಸ್​​ ಸಮನ್ಸ್
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:May 08, 2024 | 6:11 PM

Share

ಬೆಂಗಳೂರು, ಮೇ.08: ಸಮುದಾಯಗಳಿಗೆ ಸಂಬಂಧಿಸಿ ಪೋಸ್ಟ್ ಆರೋಪದ ಹಿನ್ನಲೆ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ(BY Vijayendra) ವಿರುದ್ಧ ಎಫ್​ಐಆರ್​ (FIR) ಆಗಿತ್ತು. ಇದೀಗ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ವಿಡಿಯೋವೊಂದನ್ನು ಬಿಜೆಪಿ ಕರ್ನಾಟಕದ ಎಕ್ಸ್​ ಪೇಜ್​ನಲ್ಲಿ ಪೋಸ್ಟ್ ಮಾಡಲಾಗಿತ್ತು. ಅದರಲ್ಲಿ ರಾಹುಲ್ ಗಾಂಧಿ, ಸಿದ್ದರಾಮಯ್ಯರನ್ನ ಮುಸ್ಲಿಂ ಎಂಬಂತೆ ಬಿಂಬಿಸಿ ಮೊಟ್ಟೆಯಲ್ಲಿ ಬರುವ ಮರಿಗಳನ್ನುಎಸ್ಸಿ, ಎಸ್ಟಿ, ಓಬಿಸಿ ಸಮದಾಯಗಳಿಗೆ ಹೋಲಿಕೆ ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು.

ಈ ಬಗ್ಗೆ ಕೆಪಿಸಿಸಿಯ ಕಾನೂನು ಘಟಕದ ರಮೇಶ್ ಬಾಬು ಎಂಬುವವರು ‘ಜೆಪಿ ನಡ್ಡಾ, ವಿಜಯೇಂದ್ರ ಸೂಚನೆಯಂತೆ ಬಿಜೆಪಿಯ ಅಧಿಕೃತ ಖಾತೆಯಲ್ಲಿ ಅಮಿತ್ ಮಾಳವಿಯಾ ಅವರು ಪೋಸ್ಟ್ ಮಾಡಿದ್ದಾರೆ. ಈ ಹಿನ್ನಲೆ ಕ್ರಮ ಕೈಗೊಳ್ಳುವಂತೆ ದೂರು ಸಲ್ಲಿಸಲಾಗಿತ್ತು. ಈ ಹಿನ್ನಲೆ ಹೈಗ್ರೌಂಡ್ಸ್ ಠಾಣೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

ಇದನ್ನೂ ಓದಿ:ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಕಮಿಷನ್‌ ಜಾಹೀರಾತು: ಸಿಎಂ, ಡಿಸಿಎಂ, ರಾಹುಲ್ ಗಾಂಧಿಗೆ ಕೋರ್ಟ್ ಸಮನ್ಸ್‌

ಏ.25 ರಂದು ವಿಜಯೇಂದ್ರ ಮೇಲೆ ದಾಖಲಾಗಿತ್ತು ದೂರು

ರಾಜ್ಯ ಸರ್ಕಾರದ ಗ್ಯಾರಂಟಿ ಬಗ್ಗೆ ವಿಪಕ್ಷಗಳು ಅಪಪ್ರಚಾರ ಮಾಡುತ್ತಿವೆ. ಈ ಹಿನ್ನಲೆ ಬಿಜೆಪಿ, ಜೆಡಿಎಸ್​ ನಾಯಕರಾದ ಹೆಚ್​ಡಿ ಕುಮಾರಸ್ವಾಮಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಕಾಂಗ್ರೆಸ್ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಅವರು ಕಳೆದ ಏ.25 ರಂದು ದೂರು ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:07 pm, Wed, 8 May 24

ಬೀದಿನಾಯಿಯನ್ನು ಗುಂಡಿಕ್ಕಿ ಕೊಂದ ನ್ಯಾಯಮೂರ್ತಿ ಮನೆಯ ಭದ್ರತಾ ಸಿಬ್ಬಂದಿ
ಬೀದಿನಾಯಿಯನ್ನು ಗುಂಡಿಕ್ಕಿ ಕೊಂದ ನ್ಯಾಯಮೂರ್ತಿ ಮನೆಯ ಭದ್ರತಾ ಸಿಬ್ಬಂದಿ
ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ