ಬೆಂಗಳೂರು, ಮೇ.08: ಸಮುದಾಯಗಳಿಗೆ ಸಂಬಂಧಿಸಿ ಪೋಸ್ಟ್ ಆರೋಪದ ಹಿನ್ನಲೆ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ(BY Vijayendra) ವಿರುದ್ಧ ಎಫ್ಐಆರ್ (FIR) ಆಗಿತ್ತು. ಇದೀಗ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ವಿಡಿಯೋವೊಂದನ್ನು ಬಿಜೆಪಿ ಕರ್ನಾಟಕದ ಎಕ್ಸ್ ಪೇಜ್ನಲ್ಲಿ ಪೋಸ್ಟ್ ಮಾಡಲಾಗಿತ್ತು. ಅದರಲ್ಲಿ ರಾಹುಲ್ ಗಾಂಧಿ, ಸಿದ್ದರಾಮಯ್ಯರನ್ನ ಮುಸ್ಲಿಂ ಎಂಬಂತೆ ಬಿಂಬಿಸಿ ಮೊಟ್ಟೆಯಲ್ಲಿ ಬರುವ ಮರಿಗಳನ್ನುಎಸ್ಸಿ, ಎಸ್ಟಿ, ಓಬಿಸಿ ಸಮದಾಯಗಳಿಗೆ ಹೋಲಿಕೆ ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು.
ಈ ಬಗ್ಗೆ ಕೆಪಿಸಿಸಿಯ ಕಾನೂನು ಘಟಕದ ರಮೇಶ್ ಬಾಬು ಎಂಬುವವರು ‘ಜೆಪಿ ನಡ್ಡಾ, ವಿಜಯೇಂದ್ರ ಸೂಚನೆಯಂತೆ ಬಿಜೆಪಿಯ ಅಧಿಕೃತ ಖಾತೆಯಲ್ಲಿ ಅಮಿತ್ ಮಾಳವಿಯಾ ಅವರು ಪೋಸ್ಟ್ ಮಾಡಿದ್ದಾರೆ. ಈ ಹಿನ್ನಲೆ ಕ್ರಮ ಕೈಗೊಳ್ಳುವಂತೆ ದೂರು ಸಲ್ಲಿಸಲಾಗಿತ್ತು. ಈ ಹಿನ್ನಲೆ ಹೈಗ್ರೌಂಡ್ಸ್ ಠಾಣೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ಇದನ್ನೂ ಓದಿ:ಬಿಜೆಪಿ ವಿರುದ್ಧ 40 ಪರ್ಸೆಂಟ್ ಕಮಿಷನ್ ಜಾಹೀರಾತು: ಸಿಎಂ, ಡಿಸಿಎಂ, ರಾಹುಲ್ ಗಾಂಧಿಗೆ ಕೋರ್ಟ್ ಸಮನ್ಸ್
ರಾಜ್ಯ ಸರ್ಕಾರದ ಗ್ಯಾರಂಟಿ ಬಗ್ಗೆ ವಿಪಕ್ಷಗಳು ಅಪಪ್ರಚಾರ ಮಾಡುತ್ತಿವೆ. ಈ ಹಿನ್ನಲೆ ಬಿಜೆಪಿ, ಜೆಡಿಎಸ್ ನಾಯಕರಾದ ಹೆಚ್ಡಿ ಕುಮಾರಸ್ವಾಮಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಕಾಂಗ್ರೆಸ್ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಅವರು ಕಳೆದ ಏ.25 ರಂದು ದೂರು ನೀಡಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:07 pm, Wed, 8 May 24