ಬರ ಪರಿಹಾರ: ಸುಪ್ರೀಂಕೋರ್ಟ್​ ಬೆನ್ನಲ್ಲೇ ಈಗ ಚುನಾವಣೆ ಆಯೋಗದ ಮೆಟ್ಟಿಲೇರಿದ ಕಾಂಗ್ರೆಸ್

ಕೇಂದ್ರ ಸರ್ಕಾರದ ವಿರುದ್ಧ ಬರ ಪರಿಹಾರಕ್ಕಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದು, ಮೊದಲ ಹೆಜ್ಜೆ ಎನ್ನುವಂತೆ ರಾಜ್ಯ ಸರ್ಕಾರದ ಒಂದು ಕೈ ಮೇಲಾಗಿದೆ. ಇದರ ಬೆನ್ನಲ್ಲೇ ಇದೀಗ ಇದೇ ಬರ ಪರಿಹಾರದ ಸಂಬಂಧ ರಾಜ್ಯ ಸರ್ಕಾರ, ಚುನಾವಣಾ ಆಯೋಗದ ಮೆಟ್ಟಿಲೇರಿದೆ. ಹಾಗಾದ್ರೆ, ಚುನಾವಣಾ ಆಯೋಗಕ್ಕೆ ನೀಡಿರುವ ದೂರಿನಲ್ಲಿ ಏನಿದೆ? ಇಲ್ಲಿದೆ ವಿವರ.

ಬರ ಪರಿಹಾರ: ಸುಪ್ರೀಂಕೋರ್ಟ್​ ಬೆನ್ನಲ್ಲೇ ಈಗ ಚುನಾವಣೆ ಆಯೋಗದ ಮೆಟ್ಟಿಲೇರಿದ ಕಾಂಗ್ರೆಸ್
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Apr 09, 2024 | 4:59 PM

ಬೆಂಗಳೂರು, (ಏಪ್ರಿಲ್ 09): ಬರ ಪರಿಹಾರ ಸಂಬಂಧ (Karnataka drought Fund)  ಕೇಂದ್ರ ಸರ್ಕಾರದ ವಿರುದ್ಧ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್ (Supreme court)  ಮೆಟ್ಟಿಲೇರಿದ್ದು, ಅಲ್ಲಿ ಒಂದು ಕೈ ಮೇಲಾಗಿದೆ. ಇದರ ಬೆನ್ನಲ್ಲೇ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರ ಹೇಳಿಕೆಯನ್ನು ಇಟ್ಟುಕೊಂಡು ಕಾಂಗ್ರೆಸ್​ ಈಗ  ಚುನಾವಣೆ ಆಯೋಗದ ಮೆಟ್ಟಿಲೇರಿದೆ. ಹೌದು… ಬರ ಪರಿಹಾರ ಬಿಡುಗಡೆಗೆ ಲೋಕಸಭೆ ಚುನಾವಣೆ ನೀತಿ ಸಂಹಿತೆ ಅಡ್ಡಿಯಾಗಿದೆ ಎಂದು ಕೇಂದ್ರ ಸಚಿವರಾದ ಅಮಿತ್ ಶಾ ಹಾಗೂ ನಿರ್ಮಲಾ ಸೀತಾರಾಮನ್ ಹೇಳಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್​ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಮಾಜಿ ಸಂಸದ ಉಗ್ರಪ್ಪ ನೇತೃತ್ವದ ನಿಯೋಗ ಇಂದು(ಏಪ್ರಿಲ್ 09) ಬೆಂಗಳೂರಿನ ಶೇಷಾದ್ರಿ ರಸ್ತೆಯಲ್ಲಿರುವ ಚುನಾವಣಾ ಆಯೋಗದ ಕಚೇರಿಗೆ ತೆರಳಿ ದೂರು ನೀಡಿದ್ದು, ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಎಂದು ಕಾಂಗ್ರೆಸ್ ಆಯೋಗಕ್ಕೆ ದೂರು ನೀಡಿದೆ.

ಕಾಂಗ್ರೆಸ್ ದೂರಿನಲ್ಲೇನಿದೆ?

ಬರ ಪರಿಹಾರ ಕೊಡುವ ವಿಚಾರದಲ್ಲಿ ಚುನಾವಣಾ ಆಯೋಗದ ನೀತಿ ಸಂಹಿತೆ ಅಡ್ಡಿಯಾಗಿದೆ. ಬರ ಪರಿಹಾರ ನೀಡಲು ಹೈಪವರ್ ಕಮಿಟಿ ಸಭೆ ನಡೆಯಬೇಕು. ಸಭೆ ನಡೆಸಲು ಚುನಾವಣಾ ಆಯೋಗ ಅನುಮತಿ ನೀಡಿಲ್ಲ. ಈ ಬಗ್ಗೆ ನಾವು ಪತ್ರ ಬರೆದಿದ್ದೇವೆ. ಆದರೆ ಚುನಾವಣಾ ಆಯೋಗ ಅನುಮತಿ ನೀಡಿಲ್ಲ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಆದ್ರೆ, ರಾಜ್ಯದಲ್ಲಿ ಕುಡಿಯುವ ನೀರು ಹಾಗೂ ಮೇವಿನ ಸಮಸ್ಯೆ ಇದೆ. ಕಾನೂನಿನಲ್ಲಿ ಬರ ಪರಿಹಾರ ಕೊಡುವ ಅವಕಾಶ ಇದ್ದರೂ ಸಹ ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೇಲೆ ಹೇಳುತ್ತಿದೆ. ಹೀಗಾಗಿ ಹೈಪವರ್ ಕಮಿಟಿ ಮೀಟಿಂಗ್ ಮಾಡಲು ಚುನಾವಣಾ ಆಯೋಗ ನಿರ್ದೇಶನ ನೀಡಬೇಕು. ಅಲ್ಲದೇ ತಕ್ಷಣವೇ ಬರ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕಾಂಗ್ರೆಸ್​ ತನ್ನ ದೂರಿನಲ್ಲಿ ಮನವಿ ಮಾಡಿದೆ.

ಇದನ್ನೂ ಓದಿ: ಬರ ಪರಿಹಾರ: 2 ವಾರದಲ್ಲಿ ಸಮಸ್ಯೆ ಬಗೆಹರಿಸುತ್ತೇವೆ: ಸುಪ್ರೀಂಗೆ ಕೇಂದ್ರ ಸರ್ಕಾರ ಭರವಸೆ

ಉಗ್ರಪ್ಪ ಹೇಳಿದ್ದೇನು?

ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಮಾಜಿ ಸಂಸದ ವಿಎಸ್​ ಉಗ್ರಪ್ಪ, ಈಗಾಗಲೇ ೨೨೩ ತಾಲ್ಲೂಕು ಬರ ಅಂತ ಘೋಷಣೆ ‌ಮಾಡಲಾಗಿದೆ. ನೀತಿ ಸಂಹಿತೆ ಕಾರಣ ಬರ ಪರಿಹಾರ ಕೊಟ್ಟಿಲ್ಲ ಎಂದು ಕೇಂದ್ರ ಸಚಿವರು ಹೇಳಿದ್ದಾರೆ. ರಾಜ್ಯದಲ್ಲಿ ತೀವ್ರವಾದ ಬರವಿದೆ. ಕೇಂದ್ರ ಸಮಿತಿ ಕಳೆದ ಅಕ್ಟೋಬರ್ ನಲ್ಲಿ‌ ಭೇಟಿ ನೀಡಿದ್ದರು. ಇಲ್ಲಿಯವರೆಗೆ ಕೇಂದ್ರ ಹೇಳಿಕೆ ಬಿಟ್ರೆ ಪರಿಹಾರ ಕೊಟ್ಟಿಲ್ಲ. ಕಾನೂನುಬದ್ಧವಾಗಿ ಸಿಗಬೇಕಾದ ಪರಿಹಾರ ಕೊಟ್ಟಿಲ್ಲ. ಸುಪ್ರೀಂ ಕೋರ್ಟ್ ಮುಂದೆ ರಾಜ್ಯ ಸರ್ಕಾರ ದಾವೆ ಹೂಡಿದೆ. ಈಗಾಗಲೇ ಸುಪ್ರೀಂ ಕೋರ್ಟ್ ಕೂಡ ಕಪಾಳ ಮೋಕ್ಷ ಮಾಡುವ ಕೆಲಸ ಮಾಡಿದೆ. ಇನ್ನು ಬರಪರಿಹಾರ, ಕುಡಿಯುವ ನೀರು, ಮೇವಿಗೆ ಯಾವುದೇ ನಿರ್ಬಂಧ ಇಲ್ಲ ಎಂದು ಚುನಾವಣೆ ಆಯೋಗ ಸ್ಪಷ್ಟನೆ ನೀಡಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು