Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಪತ್ತೆಯಾಗಿದ್ದ ಕೊಳಗೇರಿ‌ ಮಂಡಳಿ ಜೂನಿಯರ್ ಇಂಜಿನಿಯರ್ ನೇಮಕಾತಿ ಆಯ್ಕೆ ಪಟ್ಟಿ ಕಡತ ಕೆಪಿಎಸ್​​ಸಿ ಕಚೇರಿಯಲ್ಲಿ ಪತ್ತೆ

ಎರಡು ತಿಂಗಳಿಂದ ನಾಪತ್ತೆಯಾಗಿದ್ದ ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಕಿರಿಯ ಎಂಜಿನಿಯರ್‌ ನೇಮಕಾತಿ ಆಯ್ಕೆ ಪಟ್ಟಿ ಕಡತ ಕರ್ನಾಟಕ ಲೋಕಸೇವಾ ಆಯೋಗ (KPSC) ಕಚೇರಿಯಲ್ಲೇ ಪತ್ತೆಯಾಗಿದೆ. ಘಟನೆ ಸಂಬಂಧ ಮಾಧ್ಯಮಗಳಲ್ಲಿ ಸುದ್ದಿಯಾದ ಬೆನ್ನಲ್ಲೇ ಕಡತ ಪತ್ತೆಯಾಗಿದೆ.

ನಾಪತ್ತೆಯಾಗಿದ್ದ ಕೊಳಗೇರಿ‌ ಮಂಡಳಿ ಜೂನಿಯರ್ ಇಂಜಿನಿಯರ್ ನೇಮಕಾತಿ ಆಯ್ಕೆ ಪಟ್ಟಿ ಕಡತ ಕೆಪಿಎಸ್​​ಸಿ ಕಚೇರಿಯಲ್ಲಿ ಪತ್ತೆ
ಕೆಪಿಎಸ್​ಸಿ ಕಚೇರಿ
Follow us
Jagadisha B
| Updated By: ವಿವೇಕ ಬಿರಾದಾರ

Updated on: Apr 10, 2024 | 7:31 AM

ಬೆಂಗಳೂರು, ಏಪ್ರಿಲ್​ 10: ಎರಡು ತಿಂಗಳಿಂದ ನಾಪತ್ತೆಯಾಗಿದ್ದ ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಕಿರಿಯ ಎಂಜಿನಿಯರ್‌ ನೇಮಕಾತಿ ಆಯ್ಕೆ ಪಟ್ಟಿ ಕಡತ ಕರ್ನಾಟಕ ಲೋಕಸೇವಾ ಆಯೋಗ (KPSC) ಕಚೇರಿಯಲ್ಲೇ ಪತ್ತೆಯಾಗಿದೆ. 2016 ರಲ್ಲಿ ಕೊಳಗೇರಿ‌ ಮಂಡಳಿ (KSDB-RTI) ಜೂನಿಯರ್ ಇಂಜಿನಿಯರ್ ನೇಮಕಾತಿ ಪರೀಕ್ಷೆ ನಡೆದಿತ್ತು. 2018ರಲ್ಲಿ ಹೆಚ್ಚುವರಿ ಆಯ್ಕೆ ಪಟ್ಟಿ ಪ್ರಕಟ ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಚ್‌.ಡಿ. ವಿವೇಕಾನಂದ ಎಂಬುವವರು ಹೈಕೋರ್ಟ್ (High Court) ಮೊರೆ ಹೋಗಿದ್ದರು. ಬಳಿಕ ಹೈಕೋರ್ಟ್ ಆದೇಶದಂತೆ ಕೆಪಿಎಸ್​ಸಿ ಗೌಪ್ಯ ಶಾಖೆ-3 ರಲ್ಲಿ ಆಯ್ಕೆ ಪಟ್ಟಿ ತಯಾರಿಸಲಾಗಿತ್ತು. ಜನವರಿ 22 ರಂದು ಕಾರ್ಯದರ್ಶಿಯವರ ಆಪ್ತ ಶಾಖೆಯಲ್ಲಿ ಕಡತ ಸ್ವೀಕಾರ ಮಾಡಲಾಯಿತು. ಆ ಬಳಿಕ ಕಡತ ನಾಪತ್ತೆಯಾಗಿತ್ತು.

ಬಳಿಕ ಕೆಪಿಎಸ್​ಸಿಯ‌ ಎಲ್ಲ ಶಾಖೆಗಳಲ್ಲೂ ಕಡತಕ್ಕಾಗಿ ಶೋಧ ನಡೆಸಲಾಯ್ತು. ಕಡತ ಪತ್ತೆಯಾದಲ್ಲಿ ಕೂಡಲೇ ಶಾಖೆ-2ಕ್ಕೆ‌ ಹಿಂದಿರುಗಿಸುವಂತೆ ಕೆಪಿಎಸ್​ಸಿ ಜ್ಞಾಪನ ಹೊರಡಿಸಿತ್ತು. ಬಳಿಕ‌ ಕೆಪಿಎಸ್​ಸಿ ಸಿಬ್ಬಂದಿಯಿಂದ ಕಡತಕ್ಕಾಗಿ ಎಲ್ಲೆಡೆ ಶೋಧ ನಡೆಸಿದೆ. ಅಧಿಕಾರಿ, ಸಿಬ್ಬಂದಿ ಸುಮಾರು ಒಂದು ತಿಂಗಳು ಕಾಲ ಶೋಧ ನಡೆಸಿದರು. ಆದರೆ ಕಡೆತ ಎಲ್ಲೂ ಸಿಕ್ಕಿರಲಿಲ್ಲ. ಹೀಗಾಗಿ ಕಡತ ನಾಪತ್ತೆ ಬಗ್ಗೆ ದೂರು ದಾಖಲಿಸಲು ಆಯೋಗ ಸಭೆ ನಡೆಸಿ ನಿರ್ಧಾರ ಕೈಗೊಂಡು, ಕಾರ್ಯದರ್ಶಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಘಟನೆ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿ, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದರು.

ಇದನ್ನೂ ಓದಿ: ಕೆಪಿಎಸ್​​ಸಿ ಸದಸ್ಯರ ಹುದ್ದೆಗೆ ಮೂವರು ಹೆಸರು ಶಿಫಾರಸು ಮಾಡಿದ ಸಿಎಂ

ಘಟನೆ ಸಂಬಂಧ ಮಾಧ್ಯಮಗಳಲ್ಲಿ ಸುದ್ದಿಯಾದ ಬೆನ್ನಲ್ಲೇ ಕಡತ ಪತ್ತೆಯಾಗಿದೆ. ಕಡತ ಪತ್ತೆಯಾದ ಬಗ್ಗೆ ಆಯೋಗದ ಹಿರಿಯ ಅಧಿಕಾರಿಗಳು ಮೌಖಿಕವಾಗಿ ವಿಧಾನಸೌಧ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಅಧಿಕೃತವಾಗಿ ಪತ್ರದ ಮೂಲಕ ಮಾಹಿತಿ ನೀಡುವಂತೆ ಹೇಳಿದ್ದಾರೆ. ಪತ್ರದಲ್ಲಿ ನೀಡುವ ಮಾಹಿತಿ ಆಧಾರದ ಮೇಲೆ ವಿಧಾನಸೌಧ ಪೊಲೀಸರು ಮುಂದಿನ ಪ್ರಕ್ರಿಯೆ ನಡೆಸಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ