ಕಿಡ್ನಾಪ್ ಪ್ರಕರಣ: ಮೇ 14ರವರೆಗೆ ಹೆಚ್​ಡಿ ರೇವಣ್ಣಗೆ ನ್ಯಾಯಾಂಗ ಬಂಧನ

ಹೆಚ್​​ಡಿ ರೇವಣ್ಣ(HD Revanna) ವಿರುದ್ಧದ ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಹಾಗೂ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ಮೇ.08) ನ್ಯಾಯಾಂಗ ಬಂಧನಕ್ಕೆ ವಿಧಿಸಿ ಕೋರ್ಟ್​ ಆದೇಶಿಸಿದೆ. ಹೌದು, ಏಳು ದಿನದವರೆಗೆ ಅಂದರೆ ಮೇ 14ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ 17ನೇ ಎಸಿಎಂಎಂ ನ್ಯಾಯಾಲಯ ಆದೇಶ ನೀಡಿದೆ.

ಕಿಡ್ನಾಪ್ ಪ್ರಕರಣ: ಮೇ 14ರವರೆಗೆ  ಹೆಚ್​ಡಿ ರೇವಣ್ಣಗೆ ನ್ಯಾಯಾಂಗ ಬಂಧನ
ರೇವಣ್ಣಗೆ ನ್ಯಾಯಾಂಗ ಬಂಧನ
Follow us
| Updated By: ರಮೇಶ್ ಬಿ. ಜವಳಗೇರಾ

Updated on:May 08, 2024 | 8:42 PM

ಬೆಂಗಳೂರು, ಮೇ.08: ಹೆಚ್​​ಡಿ ರೇವಣ್ಣ(HD Revanna) ವಿರುದ್ಧದ ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಹಾಗೂ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ಮೇ.08) ನ್ಯಾಯಾಂಗ ಬಂಧನಕ್ಕೆ ವಿಧಿಸಿ ಕೋರ್ಟ್​ ಆದೇಶಿಸಿದೆ. ಹೌದು, ಏಳು ದಿನದವರೆಗೆ ಅಂದರೆ ಮೇ 14ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ 17ನೇ ಎಸಿಎಂಎಂ ನ್ಯಾಯಾಲಯ ಆದೇಶ ನೀಡಿದೆ. ಈ ಹಿನ್ನಲೆ ರೇವಣ್ಣರನ್ನು ಎಸ್​ಐಟಿ ಅಧಿಕಾರಿಗಳು ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ಯುತ್ತಿದ್ದಾರೆ.

ಪ್ರಕರಣ ಸಂಬಂಧ ಎಸ್​ಐಟಿ ಕಸ್ಟಡಿಯಲ್ಲಿರುವ ರೇವಣ್ಣ ಆಪ್ತನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದು, ತನಿಖೆ ಭರದಿಂದ ಸಾಗಿದೆ. ಇನ್ನು ರೇವಣ್ಣ ಪರ ಜಾಮೀನಿಗೆ ಅವರ ವಕೀಲರು ಅರ್ಜಿ ಸಲ್ಲಿಸಿದ್ದಾರೆ. ಆದರೆ, ಕಸ್ಟಡಿಯಲ್ಲಿರೋ ವ್ಯಕ್ತಿಗೆ ಜಾಮೀನು ಕೊಡುವುದು ಹೇಗೆ ಎಂದು ನ್ಯಾಯಾಧೀಶರು ರೇವಣ್ಣ ಪರ ವಕೀಲರನ್ನು ಪ್ರಶ್ನಿಸಿದ್ದಾರೆ. ಇದಕ್ಕೆ ಸುಪ್ರೀಂ ಕೋರ್ಟ್ ತೀರ್ಪು ಉಲ್ಲೇಖಿಸಿ ವಕೀಲರು ವಾದ ಮುಂದಿಟ್ಟಿದ್ದರ. ಆದರೂ ಈ ಬಗ್ಗೆ ಎಸ್‌ಐಟಿ ಪ್ರತಿಕ್ರಿಯಿಸಲಿ ಅಂತಾ ಎಸ್​ಐಟಿಗೆ ನೋಟಿಸ್ ನೀಡಿ ವಿಚಾರಣೆಯನ್ನು ಇಂದಿಗೆ ಮುಂದೂಡಲಾಗಿತ್ತು. ಅದರಂತೆ ಇಂದು ಎಸಿಎಂಎಂ ನ್ಯಾಯಾಲಯ ಆದೇಶ ನೀಡಿದೆ.

ಇದನ್ನೂ ಓದಿ:ಪ್ರಜ್ವಲ್ ರೇವಣ್ಣ ಪ್ರಕರಣ; ಎಸ್ಐಟಿ ತನಿಖೆ ಒನ್ ವೇನಲ್ಲಿ ಸಾಗುತ್ತಿರುವ ಕಾರಣ ಸಿಬಿಐಗೆ ವಹಿಸಿಕೊಡಬೇಕು: ಜಿಟಿ ದೇವೇಗೌಡ

ಕಣ್ಣೀರು ಹಾಕುತ್ತಾ ಬಂದ ರೇವಣ್ಣ

ಇನ್ನು ಕೋರ್ಟ್ ಹಾಲ್​ನಲ್ಲಿಯೇ ರೇವಣ್ಣ ಇದ್ದು, ನ್ಯಾಯಾಲಯದ ಕಟ್ಟಡದಿಂದ ರೇವಣ್ಣ ಕಣ್ಣೀರು ಹಾಕುತ್ತಾ ಬಂದಿದ್ದಾರೆ. ನ್ಯಾಯಾಧೀಶರ ಆದೇಶ ಪ್ರತಿಗಾಗಿ ಎಸ್​ಐಟಿ ಅಧಿಕಾರಿಗಳು ಕಾಯುತ್ತಿದ್ದು, ನಂತರ ಕೋರ್ಟ್ ಹಾಲ್​ನಿಂದ ಕೆಲವೇ ಕ್ಷಣಗಳಲ್ಲಿ ಹೆಚ್.ಡಿ.ರೇವಣ್ಣರನ್ನ ಪರಪ್ಪನ ಅಗ್ರಹಾರ ಜೈಲಿಗೆ ಎಸ್ಐಟಿ ಅಧಿಕಾರಿಗಳು ಕರೆದೊಯ್ಯಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:42 pm, Wed, 8 May 24