AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Namma Yatri: ನಮ್ಮ ಯಾತ್ರಿ ಆ್ಯಪ್​ ಮೂಲಕ ಇನ್ನು ಕ್ಯಾಬ್ ಸಹ ಬುಕ್ ಮಾಡಬಹುದು

ಆಟೋ ಸೇವೆ ಮೂಲಕ ಬೆಂಗಳೂರಿನಲ್ಲಿ ಪದಾರ್ಪಣೆ ಮಾಡಿದ್ದ ನಮ್ಮ ಯಾತ್ರಿ ಆ್ಯಪ್ ಈಗ ಕ್ಯಾಬ್ ಸೇವೆ ಕೂಡ ಆರಂಭಿಸಿದೆ. ಇನ್ನು ಮುಂದೆ ಪ್ರಯಾಣಿಕರು ನಮ್ಮ ಯಾತ್ರಿ ಆ್ಯಪ್ ಮೂಲಕ ಕ್ಯಾಬ್ ಕೂಡ ಬುಕ್ ಮಾಡಬಹುದಾಗಿದೆ. ಸದ್ಯದಲ್ಲೇ ಈ ಸೇವೆ ಕರ್ನಾಟಕದಾದ್ಯಂತ ವಿಸ್ತರಣೆಯಾಗಲಿದೆ.

Namma Yatri: ನಮ್ಮ ಯಾತ್ರಿ ಆ್ಯಪ್​ ಮೂಲಕ ಇನ್ನು ಕ್ಯಾಬ್ ಸಹ ಬುಕ್ ಮಾಡಬಹುದು
ನಮ್ಮ ಯಾತ್ರಿ ಆ್ಯಪ್Image Credit source: Nammayatri.in
ಗಣಪತಿ ಶರ್ಮಾ
|

Updated on: Apr 17, 2024 | 10:03 AM

Share

ಬೆಂಗಳೂರು, ಏಪ್ರಿಲ್ 17: ಇನ್ನು ನಮ್ಮ ಯಾತ್ರಿ ಆ್ಯಪ್ (Namma Yatri App) ಮೂಲಕ ಕ್ಯಾಬ್ (Cab) ಕೂಡ ಬುಕ್ ಮಾಡಬಹುದು. ಸದ್ಯ 25,000 ಕ್ಯಾಬ್​​ಗಳೊಂದಿಗೆ ಕಾರ್ಯಾಚರಣೆ ಆರಂಭವಾಗಿದ್ದು, ಮುಂದಿನ ಆರು ತಿಂಗಳಲ್ಲಿ ಒಂದು ಲಕ್ಷ ಚಾಲಕರನ್ನು (Cab Drivers) ಸೇರಿಸುವ ಗುರಿಯನ್ನು ಆ್ಯಪ್ ಹೊಂದಿದೆ. ನಮ್ಮ ಯಾತ್ರಿಯು ಹೆಚ್ಚಿನ ಕಮಿಷನ್‌ ಮತ್ತು ಪಾರದರ್ಶಕತೆಯ ಕೊರತೆಯ ಸಮಸ್ಯೆಗಳನ್ನು ಪರಿಹರಿಸುವ ಗುರಿಯನ್ನು ಹೊಂದಿದೆ.

ನಮ್ಮ ಯಾತ್ರಿಯ ಕ್ಯಾಬ್ ಸೇವೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಂಗಳವಾರ ಚಾಲನೆ ನೀಡಿದರು. ಬಳಿಕ ಮಾತನಾಡಿ, ನಮ್ಮ ಯಾತ್ರಿ ಕರ್ನಾಟಕದ ಸ್ವದೇಶಿ ಆ್ಯಪ್ ಆಗಿದೆ. ಅದರ ಸಮುದಾಯ-ಕೇಂದ್ರಿತ ವಿಧಾನ ಮತ್ತು ಚಾಲಕರ ಕಲ್ಯಾಣಕ್ಕಾಗಿ ಕೈಗೊಂಡ ಕ್ರಮಗಳು ಶ್ಲಾಘನೀಯ. ನಾವೀನ್ಯತೆ, ಪಾರದರ್ಶಕತೆ ಮತ್ತು ಎಲ್ಲರನ್ನೂ ಒಳಗೊಳ್ಳುವಿಕೆಗೆ ಅವರ ಬದ್ಧತೆಯನ್ನು ನಾನು ಶ್ಲಾಘಿಸುತ್ತೇನೆ ಮತ್ತು ಅವರಿಗೆ ಯಶಸ್ಸನ್ನು ಬಯಸುತ್ತೇನೆ ಎಂದರು.

ನಮ್ಮ ಸಮುದಾಯವನ್ನು ಸಬಲೀಕರಣಗೊಳಿಸಲು ಮತ್ತು ನ್ಯಾಯಯುತ ವೇತನ, ಪರಸ್ಪರ ಗೌರವವನ್ನು ನೀಡುವ ರೀತಿಯಲ್ಲಿ ನೇರವಾಗಿ ಚಾಲಕರನ್ನು ಸಂಪರ್ಕಿಸಬಹುದಾದ, ಮುಕ್ತ ಚಲನಶೀಲತೆಯ ವೇದಿಕೆಯನ್ನು ಅಭಿವೃದ್ಧಿಪಡಿಸಿದ್ದಕ್ಕಾಗಿ ನಾವು ನಮ್ಮ ಯಾತ್ರಿಯನ್ನು ಅಭಿನಂದಿಸುತ್ತೇವೆ. ಇದು ಚಾಲಕರ ಕಲ್ಯಾಣ ಯೋಜನೆಗಳನ್ನು ವರ್ಧಿಸುತ್ತದೆ ಎಂದು ಇಂಡಿಯನ್ ಫೆಡರೇಶನ್ ಆಫ್ ಆಪ್ ಬೇಸ್ಡ್ ಟ್ರಾನ್ಸ್‌ಪೋರ್ಟ್ ವರ್ಕರ್ಸ್ (ಐಎಫ್‌ಎಟಿ) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶೇಕ್ ಸಲಾವುದ್ದೀನ್ ಹೇಳಿದರು.

ನಮ್ಮ ಯಾತ್ರಿ ಆ್ಯಪ್ ಆಟೋ ಸೇವೆಯಂತೆಯೇ ಕ್ಯಾಬ್‌ಗಳಲ್ಲಿಯೂ ಪಾರದರ್ಶಕತೆ ಮತ್ತು ದಕ್ಷತೆಗೆ ಆದ್ಯತೆ ನೀಡಲಿದೆ ಎಂದು ಅವರು ಹೇಳಿದರು. ಇದು ಎಸಿ ಅಲ್ಲದ ಮಿನಿ, ಎಸಿ ಮಿನಿ, ಸೆಡಾನ್ ಮತ್ತು XL ಕ್ಯಾಬ್ ಒಳಗೊಂಡಂತೆ ಗ್ರಾಹಕರ ವೈವಿಧ್ಯಮಯ ಅಗತ್ಯಗಳನ್ನು ಪೂರೈಸುತ್ತದೆ ಎಂದು ಅವರು ತಿಳಿಸಿದ್ದಾರೆ.

ಕರ್ನಾಟಕದಾದ್ಯಂತ ಆರಂಭವಾಗಲಿದೆ ಸೇವೆ

ಅಪ್ಲಿಕೇಶನ್ ಶೀಘ್ರದಲ್ಲೇ ಇಂಟರ್-ಸಿಟಿ, ಬಾಡಿಗೆಗಳು ಮತ್ತು ನಿಗದಿತ ರೈಡ್‌ಗಳನ್ನು ಕೂಡ ಒದಗಿಸಲಿವೆ. ಮುಂದಿನ ದಿನಗಳಲ್ಲಿ ಕರ್ನಾಟಕದಾದ್ಯಂತ ಆ್ಯಪ್ ಸೇವೆ ಲಭ್ಯವಾಗಲಿದೆ. ಇದು ಅಂಗವೈಕಲ್ಯ-ಸ್ನೇಹಿ ಪ್ರಯಾಣ, ಹೆಚ್ಚುವರಿ ಲಗೇಜ್ ಕೊಂಡೊಯ್ಯಲು ಅವಕಾಶ, ಸಾಕುಪ್ರಾಣಿಗಳೊಂದಿಗೆ ಪ್ರಯಾಣ ಮತ್ತು ಪ್ರವಾಸಗಳಂತಹ ವಿಶೇಷ ಸೇವೆಗಳನ್ನೂ ಸಹ ಒದಗಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಈ ರೈಲು ನಿಲ್ದಾಣದಲ್ಲಿದೆ ರೈಲ್ವೆ ಕೋಚ್​​​ ಎಸಿ ರೆಸ್ಟೋರೆಂಟ್! ಏನಿದರ ವಿಶೇಷ? ಇಲ್ಲಿದೆ ಮಾಹಿತಿ

ನಮ್ಮ ಯಾತ್ರಿ ಆ್ಯಪ್ ಆರಂಭದಲ್ಲಿ ಬೆಂಗಳೂರಿನಾದ್ಯಂತ ಆಟೊ ಸೇವೆಗಳನ್ನು ಒದದಗಿಸುತ್ತಿತ್ತು. ಇದೀಗ ಕ್ಯಾಬ್ ಸೇವಾ ಕ್ಷೇತ್ರಕ್ಕೂ ಕಾಲಿಟ್ಟಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು