ಬೆಂಗಳೂರು, ಏ.17: ಶ್ರೀರಾಮ ಹುಟ್ಟಿದ ದಿನವಾದ ಇಂದು(ಏ.17) ನಾಡಿನೆಲ್ಲೆಡೆ ಅದ್ದೂರಿಯಾಗಿ ಆಚರಿಸಲಾಗುತ್ತದೆ. ಅದರಂತೆ ರಾಮನವಮಿ(Rama Navami) ಮುಗಿಸಿಕೊಂಡು ಕಾರಿನಲ್ಲಿ ಹೋಗುತ್ತಿದ್ದವರನ್ನ ಅಡ್ಡಗಟ್ಟಿ ಅನ್ಯಕೋಮಿನ ಯುವಕರು ಪುಂಡಾಟ ಮೆರೆದ ಘಟನೆ ಬೆಂಗಳೂರಿನ ವಿದ್ಯಾರಣ್ಯಪುರದ(Vidyaranyapura) ಬೆಟ್ಟಳ್ಳಿ ಮಸೀದಿ ಬಳಿ ನಡೆದಿದೆ. ಇಬ್ಬರು ಮುಸ್ಲಿಂ ಯುವಕರು ‘ಕಾರಿನ ಬಳಿ ಬಂದು ಜೈ ಶ್ರೀರಾಮ್ ಎಂದು ಹೇಳಬೇಕಾ, ಜೈ ಶ್ರೀ ರಾಮ್ ಇಲ್ಲ. ಓನ್ಲೀ ಅಲ್ಲಾ ಹು ಅಕ್ಬರ್ ಎಂದು ಹೇಳಿ, ಇದಲ್ಲದೆ ಕಾರಿನಲ್ಲಿ ಇದ್ದವರಿಗೆ ಅವಾಚ್ಯವಾಗಿ ನಿಂದಿಸಿದ್ದಾರೆ.
ಇದೇ ವೇಳೆ ಕಾರಿನಲ್ಲಿದ್ದ ಯುವಕರು, ನಾವು ನಿಮ್ಮ ಹಬ್ಬದಲ್ಲಿ ಹೀಗೆ ಮಾಡ್ತಿವಾ ಎಂದು ಪ್ರಶ್ನೆ ಮಾಡಿದ್ದಾರೆ. ಆಗ ಅಲ್ಲೆ ಇದ್ದ ಮತ್ತೆ ಇಬ್ಬರು ಸೇರಿಕೊಂಡು ಮೂವರು ಹಿಂದು ಯುವಕರ ಮೇಲೆ ಹಲ್ಲೆ ಮಾಡಿದ್ದಾರೆ. ಘಟನೆ ಸಂಬಂಧ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸಧ್ಯ ರಸ್ತೆಯಲ್ಲಿ ಅಡ್ಡಗಟ್ಟಿ ಪುಂಡಾಟ ಮಾಡಿದವರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಇದನ್ನೂ ಓದಿ:ವಿವಾದಕ್ಕೀಡಾಗಿದ್ದ ಕೆರಗೋಡುನಲ್ಲಿ ಕುಮಾರಸ್ವಾಮಿ ಮತಬೇಟೆ, ರಾಮನವಮಿ ಪ್ರಯುಕ್ತ ಹನಮ ದೇವಸ್ಥಾನಲ್ಲಿ ಪೂಜೆ
ಇನ್ನು ಘಟನೆ ಕುರಿತು ಮಾತನಾಡಿದ ಈಶಾನ್ಯ ಡಿಸಿಪಿ ಲಕ್ಷ್ಮೀ ಪ್ರಸಾದ್, ‘ ಬೆಂಗಳೂರಲ್ಲಿ ಕಾರಿನಲ್ಲಿ ತೆರಳುತ್ತಿದ್ದ ಯುವಕರನ್ನು ಅಡ್ಡಗಟ್ಟಿ ಪುಂಡಾಟ ಮೆರೆದಿದ್ದಾರೆ. ಈ ಹಿನ್ನಲೆ ಐಪಿಸಿ ಸೆಕ್ಷನ್ 295a, 298, 143, 147, 504,324, 326, 149, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಮೂವರು ಯುವಕರು ಕಾರಿನಲ್ಲಿ ಹೋಗುವಾಗ ಬಾವುಟ ಹಿಡಿದುಕೊಂಡು ಜೈ ಶ್ರೀರಾಮ್ ಅಂದಿದ್ದಾರೆ.
ಈ ವೇಳೆ ಇಬ್ಬರು ಯುವಕರು ಕಾರು ಅಡ್ಡಗಟ್ಟಿದ್ದಾರೆ. ಜೈ ಶ್ರೀರಾಮ್ ಅಂತಾ ಯಾಕೆ ಕೂಗ್ತಿರಾ, ಅಲ್ಲಾ ಅನ್ನಿ ಎಂದು ಗಲಾಟೆ ಮಾಡಿದ್ದಾರೆ. ಗಲಾಟೆ ಮಾಡಿ ಮತ್ತಷ್ಟು ಯುವಕರನ್ನು ಕರೆತಂದಿದ್ದಾರೆ. ಈ ವೇಳೆ ಅಲ್ಲಿಗೆ ಬಂದ ಇನ್ನೂ ಮೂವರು ಯುವಕರ ಮೇಲೆ ಹಲ್ಲೆ ಮಾಡಿದ್ದಾರೆ. ಈ ಕುರಿತು ಕೇಸ್ ರಿಜಿಸ್ಟರ್ ಆಗಿದೆ. ಹಲ್ಲೆ ಮಾಡಿದವರ ಪತ್ತೆ ನಡೆಯುತ್ತಿದೆ. ಆರೋಪಿಗಳ ಗುರುತು ಪತ್ತೆಯಾಗಿದೆ ಎಂದಿದ್ದಾರೆ.
ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್‌ಪೇಟೆ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ 6 ಜನ ದರೋಡೆಕೋರರನ್ನು ಬಂಧಿಸಿದ್ದಾರೆ. ಸುಹೇಲ್(23), ಆದಿ(19), ವಿಜಯ್(25), ಧನುಷ್(21), ಶಕ್ತಿವೇಲು(23), ಮೊಹಮ್ಮದ್ ಸಾದ್(23)ನನ್ನು ಬಂಧಿತ ಆರೋಪಿಗಳು. ಇವರಿಂದ 3 ಬೈಕ್, 6 ಮೊಬೈಲ್, 5 ಸಾವಿರ ನಗದನ್ನು ಜಪ್ತಿ ಮಾಡಲಾಗಿದೆ. ಮಾರ್ಚ್ 31ರಂದು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಲಾರಿ ನಿಲ್ಲಿಸಿದ್ದಾಗ ಚಾಲಕ ಸುಮಂತ್‌ಗೆ ಚಾಕು ಇರಿದು ಹಣ, ಮೊಬೈಲ್ ದೋಚಿದ್ದರು. ಜೊತೆಗೆ ಕಾಮಾಕ್ಷಿಪಾಳ್ಯ ಠಾಣೆಯ ಕಾನ್ಸ್‌ಟೇಬಲ್‌ರೊಬ್ಬರ ಬೈಕ್ ಕಳವು ಮಾಡಿ ದರೋಡೆಗೆ ಬಳಸಿದ್ದ ಎ1 ಆರೋಪಿ, ಮತ್ತೊಂದು ಕೃತ್ಯಕ್ಕೆ ಹೊಂಚು ಹಾಕುತ್ತಿದ್ದಾಗ ದಾಬಸ್‌ಪೇಟೆ ಠಾಣೆಯ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:44 pm, Wed, 17 April 24