AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News: ಕರ್ನಾಟಕದಲ್ಲಿ ಮಾಸ್ಕ್ ಕಡ್ಡಾಯ; ಆರೋಗ್ಯ ಸಚಿವ ಸುಧಾಕರ

ಮಾಸ್ಕ್ ಎಲ್ಲಾರೂ ಕಡ್ಡಾಯವಾಗಿ ಧರಿಸಬೇಕು. ಜನರು ಏನೂ ಆಗಲ್ಲ ಅಂತಾ ಉದಾಸೀನ ತೋರ್ತಿದ್ದಾರೆ. 17,18, 21 ಯುವಕರು ಸಾವಿಗೀಡಾಗಿದ್ದಾರೆ ಎಂದು ನಗರದಲ್ಲಿ ಸಚಿವ ಡಾ. ಸುಧಾಕರ್ ಹೇಳಿದರು.

Breaking News: ಕರ್ನಾಟಕದಲ್ಲಿ ಮಾಸ್ಕ್ ಕಡ್ಡಾಯ; ಆರೋಗ್ಯ ಸಚಿವ ಸುಧಾಕರ
ಆರೋಗ್ಯ ಸಚಿವ ಸುಧಾಕರ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Aug 11, 2022 | 2:05 PM

Share

ಬೆಂಗಳೂರು: ಮಾಸ್ಕ್ ಎಲ್ಲಾರೂ ಕಡ್ಡಾಯವಾಗಿ (face mask compulsory) ಧರಿಸಬೇಕು. ಜನರು ಏನೂ ಆಗಲ್ಲ ಅಂತಾ ಉದಾಸೀನ ತೋರ್ತಿದ್ದಾರೆ. 17,18, 21 ವರ್ಷದ ಯುವಕರು ಸಾವಿಗೀಡಾಗಿದ್ದಾರೆ ಎಂದು ನಗರದಲ್ಲಿ ಸಚಿವ ಡಾ. ಸುಧಾಕರ್ ಹೇಳಿದರು. ಅವರ ಡೆತ್ ಆಡಿಟ್ ನಡೀತಿದೆ. 60 ವರ್ಷ ಮೇಲ್ಪಟ್ಟವರು ಅತೀ ಜರೂರಾಗಿ ಮೂರನೇ ಡೋಸ್ ತೆಗೆದುಕೊಳ್ಳಬೇಕು. ಮಾಸ್ಕ್​ ಹಾಕದಿದ್ದರೆ ಯಾವುದೇ ದಂಡ ವಿಧಿಸುವುದಿಲ್ಲ. ಆದರೆ ಕಡ್ಡಾಯವಾಗಿ ಎಲ್ಲರೂ ಮಾಸ್ಕ್ ಧರಿಸಬೇಕು. ಈ ಬಗ್ಗೆ ಅಧಿಕಾರಿಗಳಿಗೆ ನಿರ್ದೇಶನ ಕೊಟ್ಟಿದ್ದೇನೆ. ಮುಂದಿನ ದಿನಗಳಲ್ಲಿ ಕೊವಿಡ್ ಸೋಂಕು ಏರಿಕೆ ಆದ್ರೆ ಕ್ರಮ ಕೈಗೊಳ್ಳುತ್ತೇವೆ. 15 ದಿನಗಳಲ್ಲಿ ಮತ್ತೊಮ್ಮೆ ಸಭೆ ಮಾಡ್ತೇವೆ. ಸಭೆ-ಸಮಾರಂಭ ನಿರ್ಬಂಧಿಸಬೇಕು ಎಂದು ತಜ್ಞರು ಹೇಳಿಲ್ಲ. ಆದರೆ ಜನರು ಸರ್ಕಾರದ ನಿಯಮಗಳನ್ನು ಪಾಲಿಸಬೇಕು. ಹಬ್ಬಕ್ಕೆ ಯಾವುದೇ ಪ್ರತ್ಯೇಕ ರೂಲ್ಸ್ ಜಾರಿ ಇಲ್ಲ. ವ್ಯಾಕ್ಸಿನ್ ಹಾಕಿಸಿದ್ರೆ ಸಾವು ಬರಲ್ಲ, ಸೋಂಕು ತಡೆಯಬಹುದು. ಸಿಎಂ ಬೊಮ್ಮಾಯಿ ಮೂರು ಡೋಸ್ ತೆಗೆದುಕೊಂಡಿದ್ದಾರೆ. ಅದಕ್ಕೆ ಅವರಿಗೆ ಏನೂ ಸಮಸ್ಯೆ ಆಗಿಲ್ಲ ಎಂದು ಸಚಿವ ಸುಧಾಕರ್ ಹೇಳಿದರು.

ಇದನ್ನೂ ಓದಿ: ಸ್ವಾತಂತ್ರ್ಯಕ್ಕೂ ಮುಂಚೆ ಕಾಂಗ್ರೆಸ್​ ಪಕ್ಷ ರಾಜಕೀಯ ಪಕ್ಷವೇ ಅಲ್ಲ: ಸಚಿವ ಡಾ.ಕೆ.ಸುಧಾಕರ್

ಮಂಕಿಪಾಕ್ಸ್ ಬಗ್ಗೆಯೂ ಚರ್ಚೆ ಮಾಡಿದ್ದೀವಿ. ದೇಶದಲ್ಲಿ ಒಂಬತ್ತು ಪ್ರಕರಣ ದಾಖಲಾಗಿವೆ. ಕೇರಳದಲ್ಲಿ ಐದು, ದೆಹಲಿಯಲ್ಲಿ ನಾಲ್ಕು ಕೇಸ್ ಪತ್ತೆಯಾಗಿದ್ದು, ಕರ್ನಾಟಕದಲ್ಲಿ ಮಂಕಿಪಾಕ್ಸ್ ಕೇಸ್ ಪತ್ತೆ ಆಗಿಲ್ಲ. ಗಡಿ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಮಲೇರಿಯ, ಡೆಂಘೀ, ಹೆಚ್ 1 ಎನ್ 1 ಬಗ್ಗೆಯೂ ಅಧ್ಯಯನ ಆಗಿದೆ. ಕಳೆದ ವರ್ಷಕ್ಕಿಂತ ಈ ಬಾರಿ ಹೆಚ್ಚಾಗಿದೆ. ಮಲೇರಿಯಾ 114 ಪಕ್ರರಣ ಇದೆ. ಡೆಂಘೀ 4415 ಮಂದಿಗೆ ಬಂದಿದ್ದು, 36 ಸಾವಿರ ಟೆಸ್ಟಿಂಗ್ ಮಾಡಿದ್ದೇವೆ. ಚಿಕೂನ್ ಗುನ್ಯಾ 978, ಹೆಚ್ 1ಎನ್ 1 303 ಪ್ರಕರಣ ದಾಖಲಾಗಿದೆ. ಇದರ ಬಗ್ಗೆ ಎಚ್ಚರಿಕೆ ತೆಗೆದುಕೊಳ್ಳಬೇಕು ಎಂದು ಹೇಳಿದರು.

ಸಿಎಂ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಈಗಾಗಲೇ ನಾನೂ ಸ್ಪಷ್ಟ ಪಡಿಸಿದ್ದೇನೆ. ಆಡಳಿತದ ಮೇಲೆ ಹಲವು ವರ್ಷಗಳ ಬಳಿಕ ಹಿಡಿತ ಇಟ್ಕೊಂಡು ಸಿಎಂ ಒಳ್ಳೆಯ ಆಡಳಿತ ನೀಡ್ತಿದ್ದಾರೆ. ಹೈಕಮಾಂಡ್, ಅಮಿತ್ ಷಾ ಕೂಡ ಸ್ಪಷ್ಟ ಪಡಿಸಿದ್ದಾರೆ. ಬೊಮ್ಮಾಯಿ ನಾಯಕತ್ವದಲ್ಲೇ ಚುನಾವಣೆ ಅಂತ ಹೇಳಿದ್ದಾರೆ. ಕಾಂಗ್ರೆಸ್​ನವರಿಗೆ ಕೆಲಸ ಇಲ್ಲ. ಕೆಲಸ ಹುಡಿಕೊಂಡು ಏನೇನೋ ಹೇಳುತ್ತಾರೆ. ಕಾಂಗ್ರೆಸ್ ಡಬಲ್ ದೋರ್ ಬಸ್, ಯಾರು ಎತ್ತಗೆ ತಿರುಗಿಸ್ತಾರೆ ಅಂತ ಗೊತ್ತಾಗಲ್ಲ. ಸಿಎಂ ದೆಹಲಿ ಭೇಟಿಗೆ ವಿಶೇಷ ಅರ್ಥ ಬೇಡ, ಕಾಂಗ್ರೆಸ್ ನಾಯಕರೂ ದೆಹಲಿಗೆ ಹೋಗುತ್ತಾರೆ ಎಂದು ಹೇಳಿದರು.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 1:50 pm, Thu, 11 August 22

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್