Karnataka Night Curfew: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಆರಂಭ

Karnataka Night Curfew: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಆರಂಭ
ನೈಟ್​ ಕರ್ಫ್ಯೂ ವೇಳೆ ಪೊಲೀಸರು ರಸ್ತೆಗೆ ಬ್ಯಾರಿಕೇಡ್ ಹಾಕುತ್ತಿದ್ದಾರೆ

ಜನವರಿ 7ರವರೆಗೆ ನೈಟ್‌ ಕರ್ಫ್ಯೂ ಆದೇಶ ಜಾರಿಯಲ್ಲಿರುತ್ತದೆ. ಕರ್ಫ್ಯೂ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ನಗರಗಳಲ್ಲಿ ಪೊಲೀಸರು ನಾಕಾಬಂದಿ ಹಾಕಿ ವಾಹನಗಳ ತಪಾಸಣೆ ಆರಂಭಿಸಿದ್ದಾರೆ.

TV9kannada Web Team

| Edited By: Ghanashyam D M | ಡಿ.ಎಂ.ಘನಶ್ಯಾಮ

Dec 28, 2021 | 10:44 PM


ಬೆಂಗಳೂರು: ಒಮಿಕ್ರಾನ್ ಭೀತಿಯ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಸೇರಿದಂತೆ ಕರ್ನಾಟಕದಾದ್ಯಂತ ಮಂಗಳವಾರ ರಾತ್ರಿ 10 ಗಂಟೆಯಿಂದ ರಾತ್ರಿ ಕರ್ಫ್ಯೂ ಆರಂಭವಾಗಿದೆ. ಕರ್ಫ್ಯೂ ಹಿನ್ನೆಲೆಯಲ್ಲಿ ಬೆಳಿಗ್ಗೆ 5 ಗಂಟೆಯವರೆಗೆ ಜನ ಸಂಚಾರಕ್ಕೆ ನಿರ್ಬಂಧ ಇರಲಿದೆ. 2022ರ ಜನವರಿ 7ರವರೆಗೆ ನೈಟ್‌ ಕರ್ಫ್ಯೂ ಆದೇಶ ಜಾರಿಯಲ್ಲಿರುತ್ತದೆ. ಕರ್ಫ್ಯೂ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ನಗರಗಳಲ್ಲಿ ಪೊಲೀಸರು ನಾಕಾಬಂದಿ ಹಾಕಿ ವಾಹನಗಳ ತಪಾಸಣೆ ಆರಂಭಿಸಿದ್ದಾರೆ. ಅಗತ್ಯಸೇವೆಗಳನ್ನು ಹೊರತುಪಡಿಸಿ ಉಳಿದ ವಾಹನಗಳ ಅನಗತ್ಯ ಓಡಾಟಕ್ಕೆ ತಡೆಯೊಡ್ಡಲಾಗಿದೆ. ನೈಟ್ ​ಕರ್ಫ್ಯೂ ಆದೇಶ ಉಲ್ಲಂಘಿಸಿ ಅನಗತ್ಯವಾಗಿ ಓಡಾಡಿದರೆ ಕಠಿಣ ಕ್ರಮ ಜರುಗಿಸುವುದಾಗಿ ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಸಿದ್ದಾರೆ. ನೈಟ್ ​ಕರ್ಫ್ಯೂ ಹಿನ್ನೆಲೆ ಎಲ್ಲಾ ಅಂಗಡಿ ಮುಂಗಟ್ಟು ಬಂದ್‌ ಮಾಡಲಾಗಿದೆ.

ನೈಟ್ ಕರ್ಫ್ಯೂ ಆದೇಶ ಜಾರಿಗೆ ಬಂದ ಹಿನ್ನೆಲೆಯಲ್ಲಿ ರಾತ್ರಿ 10 ಗಂಟೆಯ ನಂತರವೂ ತೆರೆದಿದ್ದ ಅಂಗಡಿ, ಮುಂಗಟ್ಟುಗಳನ್ನು ಪೊಲೀಸರು ಮುಚ್ಚಿಸಿದರು. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮೈಕ್​ಗಳಿದ್ದ ಪೊಲೀಸ್ ವಾಹನಗಳಲ್ಲಿ ಕರ್ಫ್ಯೂ ಆದೇಶವನ್ನು ಸಾರಿ ಹೇಳಲಾಯಿತು.

ಸಾರ್ವಜನಿಕ ಸ್ಥಳಗಳಲ್ಲಿ ಡಿ.31ರ ರಾತ್ರಿ ಹೊಸ ವರ್ಷ ಆಚರಿಸುವಂತಿಲ್ಲ. ಸಭೆ ಸಮಾರಂಭಗಳಲ್ಲಿ ಶೇ.50ರಷ್ಟು ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. ಅಲ್ಲದೇ ಹಗಲಿನಲ್ಲೂ ಬಾರ್, ಪಬ್, ಕ್ಲಬ್, ರೆಸ್ಟೋರೆಂಟ್‌ಗಳಲ್ಲಿ ಶೇ.50ರಷ್ಟು ಜನರಿಗೆ ಮಾತ್ರ ಮಿತಿಗೊಳಿಸಲಾಗಿದೆ. ಪಬ್, ಬಾರ್, ರೆಸ್ಟೋರೆಂಟ್ ಗಳಲ್ಲಿ 50:50 ನಿಯಮ ಜಾರಿಗೊಳಿಸಲಾಗಿದೆ. ಸಿನಿಮಾ ಥಿಯೇಟರ್​ಗಳಿಗೆ ಸದ್ಯ ಈ ನಿಮಯ ಅನ್ವಯವಾಗುವುದಿಲ್ಲ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ರಾತ್ರಿ ಕರ್ಫ್ಯೂ ಜಾರಿ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆ ಪೊಲೀಸರು ಆಟೊಗಳ ಸಂಚಾರವನ್ನು ನಿರ್ಬಂಧಿಸಿದ್ದಾರೆ. ರಾಯುಚೂರು ಸೇರಿದಂತೆ ಹಲವೆಡೆ ಆಟೊ ಚಾಲಕರು ಪೊಲೀಸರೊಂದಿಗೆ ವಾಗ್ವಾದ ನಡೆಸಿದ ಘಟನೆಗಳು ವರದಿಯಾಗುತ್ತಿವೆ. ‘ರಾತ್ರಿ ವೇಳೆ ಪ್ರಯಾಣಿಕರು ಇರುತ್ತಾರೆ. ಆಟೊ ಸಂಚಾರಕ್ಕೆ ಅನುಮತಿ ಕೊಡಿ’ ಎಂಬ ಬೇಡಿಕೆಯನ್ನು ಪೊಲೀಸರು ತಳ್ಳಿಹಾಕಿದ್ದಾರೆ. ರಾಯಚೂರಿನ ಸದರ್ ಬಜಾರ್ ಪೊಲೀಸ್ ಠಾಣೆ ಎದುರು ಆಟೊ ಚಾಲಕರು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: Night Curfew: ಕರ್ನಾಟಕದಲ್ಲಿ ನೈಟ್ ಕರ್ಫ್ಯೂ ಜಾರಿ! ಯಾವುದಕ್ಕೆಲ್ಲ ನಿರ್ಬಂಧ?
ಇದನ್ನೂ ಓದಿ: Night Curfew In Karnataka: ಕರ್ನಾಟಕದಲ್ಲಿ ಡಿ.28ರಿಂದ 10 ದಿನ ನೈಟ್ ಕರ್ಫ್ಯೂ ಜಾರಿ! ಸಭೆ ಸಮಾರಂಭಗಳಲ್ಲಿ ಶೇ.50ರಷ್ಟು ಜನರಿಗೆ ಮಾತ್ರ ಅವಕಾಶ

 

Follow us on

Most Read Stories

Click on your DTH Provider to Add TV9 Kannada