ಕೇಂದ್ರ 2 ವರ್ಷದಿಂದ ರಾಜ್ಯಕ್ಕೆ ಅನ್ಯಾಯ ಮಾಡ್ತಿದೆ; ಅದರ ವಿರುದ್ಧ ಸೊಲ್ಲೆತ್ತುವ ಧೈರ್ಯ ತೋರಿ -ಸಿಎಂ ಬೊಮ್ಮಾಯಿಗೆ ಸಿದ್ದರಾಮಯ್ಯ ಪತ್ರ

basavaraj bommai: ‘ಕಳೆದ ಎರಡು ವರ್ಷಗಳಿಂದ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯ ಎಸಗಿರುವುದು ಕೇಂದ್ರದಲ್ಲಿರುವ ನಿಮ್ಮದೇ ಪಕ್ಷದ ಸರ್ಕಾರ. ಅಧಿಕಾರದ ಆಸೆಯೋ, ತಿಳಿವಳಿಕೆಯ ಕೊರತೆಯೋ, ಇಲ್ಲವೇ ಅವ್ಯಕ್ತ ಭೀತಿಯೋ, ಹಿಂದಿನ ಮುಖ್ಯಮಂತ್ರಿಗಳು ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಸೊಲ್ಲೆತ್ತಲಿಲ್ಲ. ಆ ಧೈರ್ಯವನ್ನು ನೀವು ತೋರಿಸುತ್ತೀರಿ ಎಂದು ನಂಬಿದ್ದೇನೆ ಎಂದು ಸಿದ್ದರಾಮಯ್ಯ​ ನೂತನ ಮುಖ್ಯಮಂತ್ರಿಗೆ ಅವರ ಜವಾಬ್ದಾರಿಯನ್ನು ಮನನ ಮಾಡಿಕೊಟ್ಟಿದ್ದಾರೆ.

ಕೇಂದ್ರ 2 ವರ್ಷದಿಂದ ರಾಜ್ಯಕ್ಕೆ ಅನ್ಯಾಯ ಮಾಡ್ತಿದೆ; ಅದರ ವಿರುದ್ಧ ಸೊಲ್ಲೆತ್ತುವ ಧೈರ್ಯ ತೋರಿ -ಸಿಎಂ ಬೊಮ್ಮಾಯಿಗೆ ಸಿದ್ದರಾಮಯ್ಯ ಪತ್ರ
ಕೇಂದ್ರ 2 ವರ್ಷದಿಂದ ರಾಜ್ಯಕ್ಕೆ ಅನ್ಯಾಯ ಮಾಡ್ತಿದೆ; ಅದರ ವಿರುದ್ಧ ಸೊಲ್ಲೆತ್ತುವ ಧೈರ್ಯ ತೋರಿ -ಸಿಎಂ ಬೊಮ್ಮಾಯಿಗೆ ಸಿದ್ದರಾಮಯ್ಯ ಪತ್ರ
Follow us
TV9 Web
| Updated By: ಸಾಧು ಶ್ರೀನಾಥ್​

Updated on: Jul 28, 2021 | 3:19 PM

ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಟ್ವೀಟ್​ ಹೇಳಿಕೆ ಬಿಡುಗಡೆ ಮಾಡಿದ್ದು, ‘ಪ್ರಮಾಣ ವಚನ ಸ್ವೀಕಾರದ ಮೂಲಕ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುವ ಅವಕಾಶವನ್ನು ಸಂವಿಧಾನಬದ್ದವಾಗಿ ಪಡೆದಿರುವ ಬಸವರಾಜ ಬೊಮ್ಮಾಯಿಯವರೇ ನಿಮಗೆ ಹಾರ್ದಿಕ ಅಭಿನಂದನೆಗಳು ಮತ್ತು ಶುಭಾಶಯಗಳು. ಜವಾಬ್ದಾರಿಯುತ ವಿರೋಧಪಕ್ಷವಾಗಿ ನಿಮಗೆ ನಮ್ಮ ರಚನಾತ್ಮಕ ಸಹಕಾರದ ಭರವಸೆಯನ್ನು ನೀಡಬಯಸುತ್ತೇನೆ. ಇದೇ ರೀತಿಯ ಸಹಕಾರ ನಿಮ್ಮ ಪಕ್ಷದಿಂದಲೂ ನಿಮಗೆ ಸಿಗಲಿ’ ಎಂದು ಇಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ಅವರಿಗೆ ಹಾರೈಸಿದ್ದಾರೆ.

‘ಕಳೆದ ಎರಡು ವರ್ಷಗಳಿಂದ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯ ಎಸಗಿರುವುದು ಕೇಂದ್ರದಲ್ಲಿರುವ ನಿಮ್ಮದೇ ಪಕ್ಷದ ಸರ್ಕಾರ. ಅಧಿಕಾರದ ಆಸೆಯೋ, ತಿಳಿವಳಿಕೆಯ ಕೊರತೆಯೋ, ಇಲ್ಲವೇ ಅವ್ಯಕ್ತ ಭೀತಿಯೋ, ಹಿಂದಿನ ಮುಖ್ಯಮಂತ್ರಿಗಳು ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಸೊಲ್ಲೆತ್ತಲಿಲ್ಲ. ಆ ಧೈರ್ಯವನ್ನು ನೀವು ತೋರಿಸುತ್ತೀರಿ ಎಂದು ನಂಬಿದ್ದೇನೆ ಎಂದು ಹಿಂದಿನ ಸರ್ಕಾರವನ್ನು ಲೇವಡಿ ಮಾಡುತ್ತಾ, ಹಿರಿಯ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ​ ನೂತನ ಮುಖ್ಯಮಂತ್ರಿಗೆ ಅವರ ಜವಾಬ್ದಾರಿಯನ್ನು ಮನನ ಮಾಡಿಕೊಟ್ಟಿದ್ದಾರೆ.

ಬರ ಪರಿಹಾರ, ಜಿಎಸ್​ಟಿ ಪಾಲು, ತೆರಿಗೆ ಹಂಚಿಕೆ, ಕೊರೊನಾ ನಿಯಂತ್ರಣಕ್ಕೆ ನೆರವು- ಈ ಎಲ್ಲ ವಿಚಾರಗಳಲ್ಲಿ ಕೇಂದ್ರ ಸರ್ಕಾರ ಕರ್ನಾಟಕದ ಬಗ್ಗೆ ತೋರಿರುವ ಮಲತಾಯಿ ಧೋರಣೆ ನಿಮಗೆ ತಿಳಿದಿದೆ. ಇದನ್ನು ಪ್ರಧಾನಿ ಮೋದಿ ಮತ್ತು ಸಂಬಂಧಿತ ಸಚಿವರ ಗಮನಕ್ಕೆ ತಂದು ರಾಜ್ಯಕ್ಕೆ ನ್ಯಾಯ ಒದಗಿಸುವ ಕೆಲಸವನ್ನು ನೀವು ಆದ್ಯತೆಯಿಂದ ಮಾಡಬೇಕೆಂದು ಸಲಹೆ ನೀಡಿದ್ದಾರೆ.

ರಾಜ್ಯಕ್ಕೆ ಅನ್ಯಾಯವಾದ ಸಂದರ್ಭದಲ್ಲಿ ಸರ್ವಪಕ್ಷಗಳ ಸಭೆ ಮತ್ತು ನಿಯೋಗದ ಮೂಲಕ ನ್ಯಾಯ ಪಡೆಯುವ ಪ್ರಯತ್ನದ ಪರಂಪರೆಯೊಂದು ನಮ್ಮಲ್ಲಿದೆ. ಕಳೆದ ಎರಡು ವರ್ಷಗಳ ಅವಧಿಯಲ್ಲಿ ಸಂಸದೀಯ ಪ್ರಜಾಪ್ರಭುತ್ವದ ಬುನಾದಿಯಾದ ಈ ರೀತಿಯ ಮುಕ್ತ ಚರ್ಚೆ-ಸಂವಾದಗಳೇ ನಿಂತುಬಿಟ್ಟಿವೆ. ನೀವು ಇದಕ್ಕೆ ಮರುಚಾಲನೆ ನೀಡುವಿರೆಂಬ ನಿರೀಕ್ಷೆ ನನ್ನದು ಎಂದು ಸಿದ್ದರಾಮಯ್ಯ​ ಆಶಿಸಿದ್ದಾರೆ.

ಪ್ರಧಾನಮಂತ್ರಿ ಇಲ್ಲವೇ ಮುಖ್ಯಮಂತ್ರಿ ಸ್ಥಾನ ಪಕ್ಷಕ್ಕೆ ಸೀಮಿತವಾದುದಲ್ಲ, ಅದು ಇಡೀ ದೇಶ ಮತ್ತು ರಾಜ್ಯಕ್ಕೆ ಸಂಬಂಧಿಸಿದ್ದು. ವಿರೋಧ ಪಕ್ಷವಾಗಿ ನಮ್ಮ ನಡುವಿನ ಸೈದ್ಧಾಂತಿಕ ಸಂಘರ್ಷ ಜಾರಿಯಲ್ಲಿದ್ದರೂ ರಾಜ್ಯದ ಅಭಿವೃದ್ಧಿಯ ವಿಚಾರದಲ್ಲಿ ನಾವೆಲ್ಲ ಒಂದು ತಂಡವಾಗಿ ಕೆಲಸ ಮಾಡಬೇಕೆಂದು ನಿಮಗಿಂತ ವಯಸ್ಸು ಮತ್ತು ಅನುಭವದಲ್ಲಿ ಹಿರಿಯನಾದ ನನ್ನ ಸಲಹೆಯಾಗಿದೆ ಎಂದು ಸಿಎಂ ಬೊಮ್ಮಾಯಿಗೆ ಸಿದ್ದರಾಮಯ್ಯ ಅವರು ತಮ್ಮ ಹೊಣೆಗಾರಿಕೆಯನ್ನು ಮನನ ಮಾಡಿಕೊಟ್ಟಿದ್ದಾರೆ.

ಸಾರ್ವಜನಿಕ ವಿಷಯಕ್ಕೆ ಸಂಬಂಧಿಸಿದ ಹಾಗೆ ಹಿಂದಿನ ಮುಖ್ಯಮಂತ್ರಿಗಳಿಗೆ ಹತ್ತಾರು ಪತ್ರಗಳನ್ನು ಬರೆದರೂ ಅದಕ್ಕೆ ಪ್ರತಿಕ್ರಿಯಿಸುವ ಕನಿಷ್ಠ ಸೌಜನ್ಯವನ್ನೂ ಅವರು ತೋರಿಲ್ಲ ಎನ್ನುವುದನ್ನು ವಿಷಾದದಿಂದ ಹೇಳಬೇಕಾಗಿದೆ. ಪಾರದರ್ಶಕತೆ ಪ್ರಜಾಪ್ರಭುತ್ವದ ಆತ್ಮವಾಗಿದೆ. ನಿಮ್ಮ ಕಾಲದಲ್ಲಿಯಾದರೂ ಮಾಹಿತಿಯ ವಿನಿಮಯ ಸುಗಮವಾಗಿ ನಡೆಯುವಂತೆ ಮಾಡುವಿರೆಂದು ನಂಬಿದ್ದೇನೆ ಎಂದಿದ್ದಾರೆ.

ಯಡಿಯೂರಪ್ಪಗೆ ಇನ್ನೂ 15 ದಿನ ಸಮಯ ಕೊಡಬೇಕಿತ್ತು: ನೆರೆ ಮಧ್ಯೆ ಸಿಎಂ ಬದಲಿಸಿದ ಬಿಜೆಪಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

(karnataka opposition leader siddaramaiah wish to new cm basavaraj bommai)

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ