AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Independence Day 2026: ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ

80ನೇ ಸ್ವಾತಂತ್ರ್ಯ ದಿನೋತ್ಸವದ ಅಂಗವಾಗಿ, ಕೇಂದ್ರ ಗೃಹ ಸಚಿವಾಲಯವು ಕರ್ನಾಟಕ ಪೊಲೀಸ್ ಇಲಾಖೆಯ 17 ಅಧಿಕಾರಿಗಳು ಮತ್ತು ಸಿಬ್ಬಂದಿಗೆ ರಾಷ್ಟ್ರಪತಿ ಪದಕಗಳನ್ನು ಘೋಷಿಸಿದೆ. ಸಿಸಿಬಿಯ ಎಸಿಪಿ ಹೆಚ್.ಎನ್. ಧರ್ಮೇಂದ್ರ ಅವರಿಗೆ 'ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ' ಲಭಿಸಿದೆ. ಉಳಿದ 16 ಮಂದಿಗೆ ಶ್ಲಾಘನೀಯ ಸೇವಾ ಪದಕ ಪುರಸ್ಕಾರ ದೊರೆತಿದ್ದು, ಇವರ ಸೇವೆಗೆ ಸಾರ್ವಜನಿಕ ವಲಯದಿಂದ ವ್ಯಾಪಕ ಅಭಿನಂದನೆಗಳು ವ್ಯಕ್ತವಾಗಿವೆ.

Independence Day 2026: ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ
ಸಾಂದರ್ಭಿಕ ಚಿತ್ರ
ವಿಕಾಸ್​ ಬಿಎಂ
| Edited By: |

Updated on: Aug 14, 2026 | 12:46 PM

Share

ಬೆಂಗಳೂರು, ಆ.14: ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ (ಆಗಸ್ಟ್ 15) ಶುಭಸಂದರ್ಭದಲ್ಲಿ ಕೇಂದ್ರ ಗೃಹ ಸಚಿವಾಲಯವು ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಹಾಗೂ ಶ್ಲಾಘನೀಯ ಸೇವೆ ಸಲ್ಲಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ ‘ರಾಷ್ಟ್ರಪತಿ ಪದಕ-2026’ ಪ್ರಶಸ್ತಿಯನ್ನು ಘೋಷಿಸಿದೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಒಟ್ಟು 17 ಮಂದಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಈ ಬಾರಿಯ ರಾಷ್ಟ್ರಪತಿ ಪದಕ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.

ವಿಶಿಷ್ಟ ಸೇವಾ ಪದಕ

ಪೊಲೀಸ್ ಪಡೆಯಲ್ಲಿ ಅತ್ಯಂತ ವಿಶಿಷ್ಟ ಹಾಗೂ ಸುದೀರ್ಘ ಸೇವೆ ಸಲ್ಲಿಸಿದ ಸಿಸಿಬಿಯ (CCB) ಸಹಾಯಕ ಪೊಲೀಸ್ ಕಮಿಷನರ್ (ACP) ಹೆಚ್.ಎನ್. ಧರ್ಮೇಂದ್ರ ಅವರಿಗೆ ಪ್ರತಿಷ್ಠಿತ ‘ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ’ ಗೌರವ ಒಲಿದುಬಂದಿದೆ.

ಇದನ್ನೂ ಓದಿ: ತ್ರಿವರ್ಣ ಧ್ವಜದ ಮಧ್ಯದಲ್ಲಿ “ಅಶೋಕ ಚಕ್ರ”ದ ಕುತೂಹಲಕಾರಿ ಸಂಗತಿಗಳು

ಶ್ಲಾಘನೀಯ ಸೇವಾ ಪದಕ ಪುರಸ್ಕೃತರು :

ರಾಜ್ಯದ ವಿವಿಧ ವಿಭಾಗಗಳು, ಕಮಿಷನರೇಟ್ ಹಾಗೂ ಜಿಲ್ಲೆಗಳಲ್ಲಿ ಶ್ಲಾಘನೀಯ ಸೇವೆ ಸಲ್ಲಿಸಿದ 16 ಅಧಿಕಾರಿ ಮತ್ತು ಸಿಬ್ಬಂದಿಗೆ ಪದಕ ಘೋಷಣೆಯಾಗಿದೆ.

ಸಾರಾ ಫಾತಿಮಾ – ಎಸ್ಪಿ (SP), ರೈಲ್ವೇಸ್, ಬೆಂಗಳೂರು

ಥಾಮಸ್ ಮ್ಯಾಥ್ಯೂ – ಕಮಾಂಡೆಂಟ್, ಕೆ.ಎಸ್.ಆರ್.ಪಿ (KSRP)

ಮಹಾದೇವ್ – ಎಸಿಪಿ (ACP), ಆಗ್ನೇಯ ಸಂಚಾರ ವಿಭಾಗ, ಬೆಂಗಳೂರು

ಪರಮಾನಂದ್ – ಡಿವೈಎಸ್ಪಿ (DySP), ಡಿ.ಎ.ಆರ್ (DAR), ರಾಯಚೂರು

ಷಣ್ಮುಗವರ್ಮಾ – ಪೊಲೀಸ್ ಇನ್ಸ್‌ಪೆಕ್ಟರ್, ಪೊಲೀಸ್ ತರಬೇತಿ ಶಾಲೆ, ಮೈಸೂರು

ಭಾವುದ್ದೀನ್ ರುಕ್ಮುದ್ದೀನ್ – ಪೊಲೀಸ್ ಇನ್ಸ್‌ಪೆಕ್ಟರ್, ಮಾಳಮಾರುತಿ ಠಾಣೆ, ಬೆಳಗಾವಿ

ಗುರುಪ್ರಸಾದ್ ಗೋಪಾಲ್ ನಾಯಕ್ – ಇನ್ಸ್‌ಪೆಕ್ಟರ್, ಸಿಐಡಿ (CID)

ನಯೀಂ – ರಿಸರ್ವ್ ಪೊಲೀಸ್ ಇನ್ಸ್‌ಪೆಕ್ಟರ್ (RPI), ರಾಜಭವನ

ಶ್ರೀನಿವಾಸ – ಪಿ.ಎಸ್.ಐ (PSI), ಕೆ.ಪಿ. ಅಗ್ರಹಾರ ಠಾಣೆ, ಬೆಂಗಳೂರು

ಜ್ಞಾನದೇವ್ ನವಲ ತರಾಸೆ – ಎ.ಆರ್.ಎಸ್.ಐ (ARSI), ಕೆ.ಎಸ್.ಆರ್.ಪಿ

ಮಹದೇವಸ್ವಾಮಿ – ಹೆಡ್ ಕಾನ್ಸ್‌ಟೇಬಲ್, ವಿಧಾನಸೌಧ ಭದ್ರತೆ

ಮಾರಿಯಾ ಜೋಸೆಫ್ ದಿನೇಶ್ ಕುಮಾರ್ – ಹೆಡ್ ಕಾನ್ಸ್‌ಟೇಬಲ್, ಡಿ.ಸಿ.ಆರ್.ಇ (DCRE), ಕೆಜಿಎಫ್

ಚಂದ್ರಶೇಖರ ಚಿಕ್ಕಣ್ಣನವರ್ – ಹೆಡ್ ಕಾನ್ಸ್‌ಟೇಬಲ್, ಕೆ.ಎಸ್.ಆರ್.ಪಿ

ಅಬ್ದುಲ್ ಕಮಾಲ್ – ಹೆಡ್ ಕಾನ್ಸ್‌ಟೇಬಲ್, ತರೀಕೆರೆ ಠಾಣೆ

ನಾಗೇಶ್ ಮಚ್ಚಯ್ಯ – ಹೆಡ್ ಕಾನ್ಸ್‌ಟೇಬಲ್, ಸಿಐಡಿ (CID)

ಮನೋಹರ್ – ಪೊಲೀಸ್ ಕಾನ್ಸ್‌ಟೇಬಲ್, ಹುಣಸೂರು ಠಾಣೆ

ಸಾಧಕ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಈ ಅಪರೂಪದ ಸಾಧನೆಗೆ ರಾಜ್ಯ ಪೊಲೀಸ್ ಇಲಾಖೆ ಹಾಗೂ ಸಾರ್ವಜನಿಕ ವಲಯದಿಂದ ಹಾರ್ದಿಕ ಅಭಿನಂದನೆಗಳು ಹರಿದುಬರುತ್ತಿವೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ