ಬಿಪಿನ್ ರಾವತ್ ಸಾವಿನ ಬಗ್ಗೆ ಆಕ್ಷೇಪಾರ್ಹ ಪೋಸ್ಟ್; ಮೈಸೂರು ಮೂಲದ ಟಿಕೆ ವಸಂತ್ ಕುಮಾರ್ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಟಿ.ಕೆ. ವಸಂತ್ ಎಂಬವರನ್ನು ಬಂಧಿಸಲಾಗಿದೆ. ಟಿ.ಕೆ. ವಸಂತ್ ಫೇಸ್‌ಬುಕ್‌ನಲ್ಲಿ ಆಕ್ಷೇಪಾರ್ಹ ಪೋಸ್ಟ್‌ ಹಾಕಿದ್ದರು. ಇದೀಗ, ಐಪಿಸಿ ಸೆಕ್ಷನ್ 505ರಡಿಯಲ್ಲಿ ಎಫ್‌ಐಆರ್‌ ದಾಖಲಿಸಿ ಬಂಧನ ಮಾಡಲಾಗಿದೆ.

ಬಿಪಿನ್ ರಾವತ್ ಸಾವಿನ ಬಗ್ಗೆ ಆಕ್ಷೇಪಾರ್ಹ ಪೋಸ್ಟ್; ಮೈಸೂರು ಮೂಲದ ಟಿಕೆ ವಸಂತ್ ಕುಮಾರ್ ಬಂಧನ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ganapathi bhat

Updated on: Dec 12, 2021 | 3:21 PM

ಬೆಂಗಳೂರು: ಸಿಡಿಎಸ್‌ ಬಿಪಿನ್ ರಾವತ್ ಸಾವಿನ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಪೋಸ್ಟ್‌ ಹಾಕಿದ್ದ ಆರೋಪದಲ್ಲಿ ವ್ಯಕ್ತಿಯೊಬ್ಬರನ್ನು ಬೆಂಗಳೂರಿನ ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೈಸೂರು ಮೂಲದ ಟಿ.ಕೆ. ವಸಂತ್ ಕುಮಾರ್ (40) ಬಂಧನ ಮಾಡಲಾಗಿದೆ. ಬೆಂಗಳೂರಿನಲ್ಲಿ ಲ್ಯಾಬ್ ಟೆಕ್ನಿಷಯನ್‌ ಆಗಿ, ಖಾಸಗಿ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಟಿ.ಕೆ. ವಸಂತ್ ಎಂಬವರನ್ನು ಬಂಧಿಸಲಾಗಿದೆ. ಟಿ.ಕೆ. ವಸಂತ್ ಫೇಸ್‌ಬುಕ್‌ನಲ್ಲಿ ಆಕ್ಷೇಪಾರ್ಹ ಪೋಸ್ಟ್‌ ಹಾಕಿದ್ದರು. ಇದೀಗ, ಐಪಿಸಿ ಸೆಕ್ಷನ್ 505ರಡಿಯಲ್ಲಿ ಎಫ್‌ಐಆರ್‌ ದಾಖಲಿಸಿ ಬಂಧನ ಮಾಡಲಾಗಿದೆ.

ಬಿಪಿನ್ ರಾವತ್ ಮೃತಪಟ್ಟಿದ್ದಕ್ಕೆ ಸಂಭ್ರಮಾಚರಣೆ ಮಾಡಿದ ವಿಚಾರಕ್ಕೆ ಸಂಬಂಧಿಸಿ ಮಂಗಳೂರಿನಲ್ಲಿ ಪ್ರಕರಣ ದಾಖಲು ಮಾಡಲಾಗಿತ್ತು. ಸಿಎಂ ಬಸವರಾಜ ಬೊಮ್ಮಾಯಿ ಸೂಚಿಸಿದ ಬೆನ್ನಲ್ಲೇ ಪ್ರಕರಣ ದಾಖಲಾಗಿತ್ತು. ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಈ ಬಗ್ಗೆ ಹೇಳಿಕೆ ನೀಡಿದ್ದರು. ಸದ್ಯ 3 ಫೇಸ್​ಬುಕ್​ ಪೋಸ್ಟ್​ಗಳ ಮೇಲೆ ಪ್ರಕರಣ ದಾಖಲಾಗಿತ್ತು. ಇವರಲ್ಲಿ ಒಬ್ಬರು ಕಾರ್ಕಳ ಮೂಲ, ಇನ್ನೊಬ್ಬರು ಬೆಂಗಳೂರು, ಮತ್ತೊಂದು ಪೋಸ್ಟ್ ಮಾಡಿದ್ದವರ ಮಾಹಿತಿ ಸಿಕ್ಕಿಲ್ಲ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದರು.

ಫೇಸ್ ಬುಕ್​ನಲ್ಲಿ ಬಿಪಿನ್ ರಾವತ್ ಸಾವಿನ ಬಗ್ಗೆ ಪ್ರಚೋದನಕಾರಿಯಾಗಿ ಬರೆದಿದ್ದಾರೆ ಎಂದು ತಿಳಿಸಿದ ಪೊಲೀಸ್ ಕಮಿಷನರ್ ಶಶಿಕುಮಾರ್, ದೂರು ಬಂದ ಹಿನ್ನೆಲೆ ಕೇಸು ದಾಖಲಿಸಿದ್ದೇವೆ. ಮೂವರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತೇವೆ. ವಿಚಾರಣೆ ಬಳಿಕ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದರು.

ಸಿಡಿಎಸ್ ಬಿಪಿನ್ ರಾವತ್ ನಿಧನದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಕೃತ ಪೋಸ್ಟ್ ಮಾಡಿದ್ದಾರೆ. ಈ ಹಿನ್ನೆಲೆ ದೇಶ ವಿರೋಧಿಗಳನ್ನು ಪತ್ತೆ ಹಚ್ಚಿ ಕ್ರಮಕೈಗೊಳ್ಳಬೇಕೆಂದು ಡಿಜಿ ಮತ್ತು ಐಜಿಪಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಸೂಚನೆ ನೀಡಿದ್ದರು ವಿಕೃತ ಪೋಸ್ಟ್ ಮಾಡುವವರನ್ನು ಸಹಿಸುವುದಿಲ್ಲ. ದುಷ್ಕರ್ಮಿಗಳ ವಿಳಾಸ ಪತ್ತೆ ಹಚ್ಚಿ ತಕ್ಕ ಶಿಕ್ಷೆ ಆಗಬೇಕು ಅಂತ ದೂರವಾಣಿ ಮೂಲಕ ಗೃಹ ಸಚಿವ ಆರಗ ಜ್ಞಾನೇಂದ್ರ ಡಿಜಿಪಿಗೆ ಸೂಚನೆ ನೀಡಿದ್ದರು.

ಇದನ್ನೂ ಓದಿ: ನಮ್ಮ ಸೇನೆಗಳ ಬಗ್ಗೆ ಹೆಮ್ಮೆ ಇದೆ; ಸ್ವರ್ಣಿಮ್ ವಿಜಯ್ ಪರ್ವ್​​ನಲ್ಲಿ ಸಿಡಿಎಸ್ ಬಿಪಿನ್ ರಾವತ್​​ರ ರೆಕಾರ್ಡ್ ಮಾಡಿದ ಸಂದೇಶ ಪ್ರಸಾರ

ಇದನ್ನೂ ಓದಿ: Bipin Rawat: ಬಿಪಿನ್ ರಾವತ್ ಹೆಲಿಕಾಪ್ಟರ್ ಅಪಘಾತಕ್ಕೆ ಕಾರಣವೇನು? ತಜ್ಞರು ಏನಂತಾರೆ?; ಇಲ್ಲಿದೆ ಮಾಹಿತಿ

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ