ಕರ್ನಾಟಕದ ಅತಿದೊಡ್ಡ ಡಿಜಿಟಲ್ ಅರೆಸ್ಟ್ ಕೇಸ್​​​ ಭೇದಿಸಿದ ಖಾಕಿ​​​: 6 ಆರೋಪಿಗಳ ಬಂಧನ

ಬೆಂಗಳೂರಿನ ವೃದ್ಧೆಗೆ 24 ಕೋಟಿ ರೂ ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಬರ್ ಕಮಾಂಡ್ ಪೊಲೀಸರು 6 ಆರೋಪಿಗಳನ್ನು ಬಂಧಿಸಿದ್ದಾರೆ. ಸದ್ಯ ಆರೋಪಿಗಳ ಅಕೌಂಟ್​ನಲ್ಲಿದ್ದ 60 ಲಕ್ಷ ರೂ ಹಣವನ್ನು ಪೊಲೀಸರು ಫ್ರೀಜ್ ಮಾಡಿದ್ದಾರೆ. ಇನ್ನು ವಿಚಾರಣೆ ವೇಳೆ ಆರೋಪಿಗಳ ಹಿನ್ನೆಲೆ ಕೇಳಿ ಪೊಲೀಸರೇ ಶಾಕ್ ಆಗಿದ್ದಾರೆ.

ಕರ್ನಾಟಕದ ಅತಿದೊಡ್ಡ ಡಿಜಿಟಲ್ ಅರೆಸ್ಟ್ ಕೇಸ್​​​ ಭೇದಿಸಿದ ಖಾಕಿ​​​: 6 ಆರೋಪಿಗಳ ಬಂಧನ
ಬಂಧಿತರು
Image Credit source: tv9 kannada

Updated on: May 25, 2026 | 3:06 PM

ಬೆಂಗಳೂರು, ಮೇ 25: ನಿನ್ನೆ ನಗರದಲ್ಲಿ ಕರ್ನಾಟಕದ ಅತಿದೊಡ್ಡ ಡಿಜಿಟಲ್ ಅರೆಸ್ಟ್​​​ ಪ್ರಕರಣವೊಂದು (Digital Arrest Fraud) ಬೆಳಕಿಗೆ ಬಂದಿತ್ತು. ವೃದ್ಧೆಯನ್ನು ಡಿಜಿಟಲ್​ ಅರೆಸ್ಟ್ ಮಾಡಿ ಬರೋಬ್ಬರಿ 24 ಕೋಟಿ ರೂ ವಂಚಿಸಿದ್ದ ಖದೀಮರ ಹೆಡೆಮುರಿ ಕಟ್ಟುವಲ್ಲಿ ಸೈಬರ್ ಕಮಾಂಡ್ ಪೊಲೀಸರು ಯಶಸ್ವಿಯಾಗಿದ್ದಾರೆ. ಒಟ್ಟು ಆರು ಆರೋಪಿಗಳನ್ನು ಬಂಧಿಸಿದ್ದಾರೆ (Arrest). ವಿಚಾರಣೆ ವೇಳೆ ಆರೋಪಿಗಳ ಹಿನ್ನೆಲೆ ಕಂಡು ಪೊಲೀಸರೇ ಶಾಕ್ ಆಗಿದ್ದಾರೆ. ಕರ್ನಾಟಕದಲ್ಲೂ ತನ್ನ ಗ್ಯಾಂಗ್​ನ್ನು​ ವಿಸ್ತರಿಸಿಕೊಂಡಿದ್ದ ಆರೋಪಿಗಳು ರಾಜ್ಯದಲ್ಲಿ ಹುಡುಗರನ್ನು ಇಟ್ಟುಕೊಂಡು ಮಾಹಿತಿ ಪಡೆಯುತ್ತಿದ್ದರು ಎಂಬ ಮಾಹಿತಿ ಬಯಲಾಗಿದೆ.

ಮುಖ್ಯಾಂಶಗಳು

  • ಕರ್ನಾಟಕದ ಅತಿದೊಡ್ಡ ಡಿಜಿಟಲ್ ಅರೆಸ್ಟ್​​​ ಪ್ರಕರಣ ಭೇದಿಸಿದ ಪೊಲೀಸರು
  • 6 ಆರೋಪಿಗಳನ್ನು ಬಂಧಿಸಿರುವ ಸೈಬರ್ ಕಮಾಂಡ್ ಪೊಲೀಸರು
  • ಆರೋಪಿಗಳ ಅಕೌಂಟ್​ನಲ್ಲಿದ್ದ 60 ಲಕ್ಷ ರೂ ಹಣ ಫ್ರೀಜ್

ಹರಿಯಾಣದ ಗುರುಗ್ರಾಮದಲ್ಲಿ ಕಚೇರಿ ಮಾಡಿಕೊಂಡಿದ್ದ ಗ್ಯಾಂಗ್,​ ಈ ಕೇಸ್​ಗೂ ಮುನ್ನ ಹಲವು ಸೈಬರ್ ಅರೆಸ್ಟ್ ಪ್ರಕರಣದಲ್ಲಿ ಭಾಗಿಯಾಗಿದ್ದರು. ಬ್ಯಾಂಕ್​ಗಳ ಮೂಲಕ ಮಾಹಿತಿ ಪಡೆದುಕೊಂಡು ದೊಡ್ಡ ಉದ್ಯೋಗದಲ್ಲಿದ್ದು ನಿವೃತ್ತರಾದವರನ್ನೇ ಟಾರ್ಗೆಟ್ ಮಾಡುತ್ತಿದ್ದರು. ಹಣ ಬಂದ ನಂತರ ಹಲವು ಮ್ಯೂಲ್ ಖಾತೆ​ಗಳಿಗೆ ಹಣ ವರ್ಗಾವಣೆ ಮಾಡುತ್ತಿದ್ದರು. ಕರ್ನಾಟಕದಲ್ಲಿ ಮಾತ್ರವಲ್ಲದೆ ಹಲವು ರಾಜ್ಯಗಳಲ್ಲಿ ಈ ಸೈಬರ್ ವಂಚಕರ ಗ್ಯಾಂಗ್ ವಿಸ್ತರಿಸಿಕೊಂಡಿದೆ. ಸದ್ಯ ಆರೋಪಿಗಳ ಅಕೌಂಟ್​ನಲ್ಲಿದ್ದ 60 ಲಕ್ಷ ರೂ ಹಣವನ್ನು ಪೊಲೀಸರು ಫ್ರೀಜ್ ಮಾಡಿದ್ದಾರೆ.

ಘಟನೆ ಹಿನ್ನೆಲೆ

ಬೆಂಗಳೂರಿನ ಶಿವಾಜಿನಗರ ನಿವಾಸಿ ಲಕ್ಷ್ಮೀ ರಾಮಮೂರ್ತಿಗೆ (74) ಖದೀಮರು ವಂಚಿಸಿದ್ದಾರೆ. ಮನಿ ಲ್ಯಾಂಡರಿಂಗ್ ಕೇಸ್ ಹೆಸರಿನಲ್ಲಿ ತಿಂಗಳಗಟ್ಟಲೆ ಡಿಜಿಟಲ್ ಅರೆಸ್ಟ್ ಮಾಡಿ ಬರೋಬ್ಬರಿ 24 ಕೋಟಿ ರೂ ವಂಚನೆ ಮಾಡಿದ್ದಾರೆ. ಲಕ್ಷ್ಮೀ ರಾಮಮೂರ್ತಿ ಅವರು ಈ ಹಿಂದೆ ದುಬೈನಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡಿ ನಿವೃತ್ತಿಯಾಗಿದ್ದರು.

ಇದನ್ನೂ ಓದಿ: ಡಿಜಿಟಲ್​​ ಅರೆಸ್ಟ್​​ ಹೆಸರಲ್ಲಿ ವೃದ್ಧೆಯಿಂದ 24 ಕೋಟಿ ರೂ. ಸುಲಿಗೆ: ಬ್ಯಾಂಕ್​​ ಮ್ಯಾನೇಜರ್​​ ಸಮಯಪ್ರಜ್ಞೆಯಿಂದ ಪ್ರಕರಣ ಬೆಳಕಿಗೆ

ಬೆಂಗಳೂರು ಮತ್ತು ಮುಂಬೈನಲ್ಲಿ ಇದ್ದ ಆಸ್ತಿಗಳನ್ನು ಮಾರಾಟ ಮಾಡಿ ಅಮೆರಿಕಾದಲ್ಲಿರುವ ಮಕ್ಕಳ ಜೊತೆ ನೆಲೆಸಲು ಮುಂದ್ದಾಗಿದ್ದರು. ಆದರೆ ಇದೇ ಹಣದ ಮೇಲೆ ಕಣ್ಣು ಹಾಕಿದ್ದ ಸೈಬರ್ ಖದೀಮರು ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ವಿಡಿಯೋ ಕರೆ ಮಾಡಿದ್ದಾರೆ. ಅಕ್ರಮ ಹಣ ವರ್ಗಾವಣೆ ಮಾಡಿದ್ದೀರಾ, ನಿಮ್ಮ ಬ್ಯಾಂಕ್ ಖಾತೆಯಲ್ಲಿನ ಹಣ ಮತ್ತು ಅಕೌಂಟ್ ಮನಿ ಲ್ಯಾಂಡರಿಂಗ್‌ಗೆ ಬಳಕೆಯಾಗಿದೆ. ನೀವು ಯಾರ ಜೊತೆಯೂ ಮಾತನಾಡಬಾರದು. ಎಲ್ಲಾ ಹಣವನ್ನು ಪರಿಶೀಲನೆಗೆ ಕಳುಹಿಸಿ ಎಂದು ಆರ್​ಟಿಜಿಎಸ್ ಮೂಲಕ ಹಣ ವರ್ಗಾವಣೆ ಮಾಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ಉಂಡ ಮನೆಗೆ ಕನ್ನ ಹಾಕಿದ ಆಸಾಮಿ: ಕರ್ನಾಟಕ ಬ್ಯಾಂಕ್​ಗೆ 16 ಲಕ್ಷ ರೂ ವಂಚನೆ

ಕಳೆದ ಜನವರಿಯಿಂದ ಮೇ ತಿಂಗಳವರೆಗೆ ನಿರಂತರವಾಗಿ ವೃದ್ದೆಯನ್ನು ಬೆದರಿಸಿದ್ದ ವಂಚಕರು, ಹಂತ ಹಂತವಾಗಿ ಬರೋಬ್ಬರಿ 24 ಕೋಟಿ ರೂ ಹಣವನ್ನು ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಲಕ್ಷ್ಮೀ ಅವರಿಂದ ಬಂದ ಹಣವನ್ನು 20ಕ್ಕೂ ಹೆಚ್ಚು ಅಕೌಂಟ್​ಗಳಿಗೆ ಹಣ ವರ್ಗಾವಣೆ ಮಾಡಿದ್ದರು.

ವರದಿ: ವಿಕಾಸ್ ಕ್ರೈಂ 

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us