ಹುಷಾರ್… ಭ್ರೂಣಹತ್ಯೆಗೆ ಬ್ರೇಕ್​ ಹಾಕಲು ಕಟ್ಟುನಿಟ್ಟಿನ ಕ್ರಮ ಜಾರಿಗೆ ತರಲು ಮುಂದಾದ ಪೊಲೀಸ್​ ಇಲಾಖೆ

ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ನಿಷೇಧವಿದ್ದರೂ ಭ್ರೂಣ ಹತ್ಯೆ ಪ್ರಕರಣಗಳು ರಾಜ್ಯದ ಹಲವೆಡೆ ಸುದ್ದಿ ಮಾಡುತ್ತಿವೆ. ಮೈಸೂರು,ಮಂಡ್ಯ ಭಾಗದಲ್ಲಿ ಗರ್ಭಪಾತ ಮಾಡಿಸುತ್ತಿದ್ದ ಭಾರೀ ಜಾಲವನ್ನೇ ಬೇಧಿಸಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಭ್ರೂಣ ಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ಇದಕ್ಕೆ ಬ್ರೇಕ್​ ಹಾಕಲು ಪೊಲೀಸ್ ಇಲಾಖೆ ಹೊಸ ಪ್ಲ್ಯಾನ್ ಮಾಡುತ್ತಿದೆ.

ಹುಷಾರ್... ಭ್ರೂಣಹತ್ಯೆಗೆ ಬ್ರೇಕ್​ ಹಾಕಲು ಕಟ್ಟುನಿಟ್ಟಿನ ಕ್ರಮ ಜಾರಿಗೆ ತರಲು ಮುಂದಾದ ಪೊಲೀಸ್​ ಇಲಾಖೆ
Edited By:

Updated on: Dec 06, 2023 | 10:09 AM

ಬೆಂಗಳೂರು, (ಡಿಸೆಂಬರ್ 06): ಕರ್ನಾಟಕದಲ್ಲಿ ಭ್ರೂಣ ಮತ್ತೆ ಹಾಗೂ ಹತ್ಯೆ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ಅದರಲ್ಲೂ ಬೆಂಗಳೂರು, ಮಂಡ್ಯ ಹಾಗೂ ಮೈಸೂರಿನಲ್ಲಿ ಎಗ್ಗಿಲ್ಲದೇ ಈ ದಂಧೆ ನಡೆದಿದ್ದು, ಇದೀಗ ಬೆಳಕಿಗೆ ಬಂದಿದೆ. ಈ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಆದೇಶಿಸಿದೆ. ಇನ್ನು ರಾಜ್ಯದಲ್ಲಿ ಭ್ರೂಣಹತ್ಯೆ ತಡೆಗೆ ಪೊಲೀಸ್ ಇಲಾಖೆ (Karnataka Police) ಹೊಸ ನಿಯಮ ಜಾರಿಗೆ ತರಲು ಚಿಂತನೆ ನಡೆಸಿದೆ. ಇನ್ಮುಂದೆ 6 ತಿಂಗಳು ಮತ್ತು ನಂತರದ ಭ್ರೂಣ ಹತ್ಯೆ ಮಾಡಿದರೆ ಕೊಲೆ ಕೇಸ್​ ದಾಖಲಿಸಲು ಪೊಲೀಸ್ ಇಲಾಖೆ ಪ್ಲ್ಯಾನ್ ಮಾಡುತ್ತಿದೆ ಎಂದು ತಿಳಿದುಬಂದಿದೆ.

ಭ್ರೂಣ ಹತ್ಯೆ ಮಾಡಿದ್ರೆ ಐಪಿಸಿ 302 ಅಡಿ ಕೇಸ್ ದಾಖಲಿಸಿಕೊಳ್ಳಲು ಚಿಂತನೆಗಳು ನಡೆದಿದ್ದು, ಈ ಹೊಸ ನಿಯಮ ಜಾರಿಗೆ ತರುವ ಬಗ್ಗೆ ಹಿರಿಯ ಪೊಲೀಸ್​ ಅಧಿಕಾರಿಗಳು ಗಂಭೀರ ಚಿಂತನೆ ನಡೆಸಿದ್ದಾರೆ. ಕೊಲೆ ಪ್ರಕರಣ ದಾಖಲು ಮಾಡಲು ಕರಡು ತಯಾರಿಸುವ ಬಗ್ಗೆ ಚರ್ಚೆಗಳು ನಡೆದಿದ್ದು, ಕರಡು ಸಿದ್ದಪಡಿಸಿ ಜಾರಿಗೆ ತರುವಂತೆ ಆರೋಗ್ಯ ಅಧಿಕಾರಿಗಳಿಗೆ ಸಲಹೆ ನೀಡಲಾಗಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ: ಸಿಐಡಿ ತನಿಖೆಗೆ ಒಪ್ಪಿಸಿದ ರಾಜ್ಯ ಸರ್ಕಾರ

ಒಂದು ವೇಳೆ ಇದು ಜಾರಿಗೆ ಬಂದರೆ ಆರು ತಿಂಗಳು ಮತ್ತು ನಂತರದ ಭ್ರೂಣ ಹತ್ಯೆ ಮಾಡಿದರೆ ಅಂತರವರ ವಿರುದ್ಧ ಐಪಿಸಿ 302 ಅಡಿಯಲ್ಲಿ ಕೇಸ್ ದಾಖಲಾಗಲಿದೆ. ಈ ಮೂಲಕ ಭ್ರೂಣ ಹತ್ಯೆ ತಡೆಗಟ್ಟಲು ಪೊಲೀಸ್ ಇಲಾಖೆ ಈ ರೀತಿಯಾಗಿ ಮುಂದಾಗಿದೆ. ಆದ್ರೆ, ಈ ಬಗ್ಗೆ ಗೃಹ ಸಚಿವರು ಅಥವಾ ಆರೋಗ್ಯ ಇಲಾಖೆ ಸಚಿವರು ಇದುವರೆಗೂ ಯಾವುದೇ ಪ್ರತಿಕ್ರಿಯಿಯೆ ನೀಡಿಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:59 am, Wed, 6 December 23