ಕರ್ನಾಟಕ ಪೊಲೀಸರ ವಾಹನಕ್ಕೆ ಮಹಾರಾಷ್ಟ್ರ ಪೊಲೀಸರ ಭದ್ರತೆ; ಕೊಲ್ಹಾಪುರದಲ್ಲಿ ಘಟನೆ

ಅಧಿವೇಶನದ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಕರ್ನಾಟಕ ಪೊಲೀಸ್​ ಸಿಬ್ಬಂದಿ ಕೊಲ್ಹಾಪುರ ಲಕ್ಷ್ಮೀದೇವಿ ದರ್ಶನಕ್ಕೆ ತೆರಳಿದ್ದರು. ಈ ವೇಳೆ, ಲಕ್ಷ್ಮೀದೇವಿ ದರ್ಶನ ಪಡೆದು ಬೆಳಗಾವಿಗೆ ಬರುತ್ತಿರುವ ಪೊಲೀಸರಿಗೆ ಮಹಾರಾಷ್ಟ್ರ ಪೊಲೀಸರು ಭದ್ರತೆ ನೀಡುವಂತಾಗಿದೆ.

ಕರ್ನಾಟಕ ಪೊಲೀಸರ ವಾಹನಕ್ಕೆ ಮಹಾರಾಷ್ಟ್ರ ಪೊಲೀಸರ ಭದ್ರತೆ; ಕೊಲ್ಹಾಪುರದಲ್ಲಿ ಘಟನೆ
ಪೊಲೀಸ್ (ಪ್ರಾತಿನಿಧಿಕ ಚಿತ್ರ)
Follow us
TV9 Web
| Updated By: ganapathi bhat

Updated on: Dec 18, 2021 | 6:00 PM

ಬೆಂಗಳೂರು: ಕರ್ನಾಟಕ ಪೊಲೀಸರ ವಾಹನಕ್ಕೆ ಮಹಾರಾಷ್ಟ್ರ ಪೊಲೀಸರು ಭದ್ರತೆ ನೀಡಿದ್ದಾರೆ. ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಕರ್ನಾಟಕ ಪೊಲೀಸರಿಗೆ ಮಹಾರಾಷ್ಟ್ರ ಪೊಲೀಸರು ಭದ್ರತೆ ನೀಡುವಂತಾಗಿದೆ. ಅಧಿವೇಶನದ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಕರ್ನಾಟಕ ಪೊಲೀಸ್​ ಸಿಬ್ಬಂದಿ ಕೊಲ್ಹಾಪುರ ಲಕ್ಷ್ಮೀದೇವಿ ದರ್ಶನಕ್ಕೆ ತೆರಳಿದ್ದರು. ಈ ವೇಳೆ, ಲಕ್ಷ್ಮೀದೇವಿ ದರ್ಶನ ಪಡೆದು ಬೆಳಗಾವಿಗೆ ಬರುತ್ತಿರುವ ಪೊಲೀಸರಿಗೆ ಮಹಾರಾಷ್ಟ್ರ ಪೊಲೀಸರು ಭದ್ರತೆ ನೀಡುವಂತಾಗಿದೆ.

ಕರ್ನಾಟಕ ಹಾಗೂ ಮಹಾರಾಷ್ಟ್ರ ಗಡಿಭಾಗ ಬೆಳಗಾವಿಯಲ್ಲಿ ಪರಿಸ್ಥಿತಿ ಬಿಗು ಆಗಿರುವ ಹಿನ್ನೆಲೆಯಲ್ಲಿ ಹೀಗೆ ಕ್ರಮ ತೆಗೆದುಕೊಳ್ಳಲಾಗಿದೆ. ಶುಕ್ರವಾರ ಕರ್ನಾಟಕದ ಸರ್ಕಾರಿ ವಾಹನಗಳ ಮೇಲೆ ಮರಾಠ ಹೋರಾಟಗಾರರು ಕಲ್ಲು ತೂರಾಟ ನಡೆಸಿದ್ದರು. ಇಂದು ಕೂಡ ಕರ್ನಾಟಕದ ವಾಹನಗಳ ಮೇಲೆ ಶಿವಸೇನೆ ಕಾರ್ಯಕರ್ತರು ದಾಳಿ ಮಾಡುತ್ತಿದ್ದಾರೆ. ಹೀಗಾಗಿ ಕೆಎಸ್​ಆರ್​ಪಿ ವಾಹನಕ್ಕೆ ಮಹಾರಾಷ್ಟ್ರ ಪೊಲೀಸರು ಭದ್ರತೆ ನೀಡಿದ್ದಾರೆ.

ಬೆಂಗಳೂರು: ಟೌನ್​ಹಾಲ್ ಮುಂಭಾಗ ಕನ್ನಡಪರ ಸಂಘಟನೆಗಳ ಭಾರಿ ಪ್ರತಿಭಟನೆ ಕರ್ನಾಟಕ ರಾಜಧಾನಿ ಬೆಂಗಳೂರಿನ ಟೌನ್​ಹಾಲ್​ನಲ್ಲಿ ಸಾವರ್ಕರ್ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ಸಾವರ್ಕರ್ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗಿ ಆಗಲಿರುವ ಹಿನ್ನೆಲೆ ಪೊಲೀಸ್​ ಬಿಗಿ ಬಂದೋಬಸ್ತ್ ನೀಡಲಾಗಿದೆ. ಕಾರ್ಯಕ್ರಮ ವಿರೋಧಿಸಿ ಕನ್ನಡ ಪರ ಸಂಘಟನೆ ಧರಣಿ ಹಿನ್ನೆಲೆ ಟೌನ್​ಹಾಲ್ ಬಳಿ​ 100ಕ್ಕೂ ಅಧಿಕ ಪೊಲೀಸರಿಂದ ಭದ್ರತೆ ಒದಗಿಸಲಾಗಿದೆ.

ಸ್ಥಳದಲ್ಲಿ ಕಾರ್ಯಕ್ರಮ ವಿರೋಧಿಸಿ ಕನ್ನಡ ಪರ ಸಂಘಟನೆಗಳ ಪ್ರತಿಭಟನೆ ನಡೆಯುತ್ತಿದೆ. ಕನ್ನಡ ಪರ ಸಂಘಟನೆಗಳು ಟೌನ್​ಹಾಲ್​ಗೆ ನುಗ್ಗಲು ಯತ್ನಿಸಿವೆ. ಮತ್ತೊಂದೆಡೆ ಹಿಂದೂಪರ ಸಂಘಟನೆ ಕಾರ್ಯಕರ್ತರ ಆಕ್ರೋಶ ವ್ಯಕ್ತವಾಗಿದೆ. ಒಂದೆಡೆ ಹಿಂದೂಪರ ಸಂಘಟನೆಗಳು ಸಾವರ್ಕರ್​ಗೆ ಜೈಕಾರ ಕೂಗಿದರೆ ಮತ್ತೊಂದೆಡೆ ಕನ್ನಡ ಪರ ಸಂಘಟನೆಗಳು ಸಾವರ್ಕರ್​ಗೆ ಧಿಕ್ಕಾರ ಕೂಗಿವೆ. ಕನ್ನಡ ಪರ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೋರಾಟಗಾರರು ಟೌನ್​ಹಾಲ್​ ಪ್ರವೇಶಿಸಿರುವ ಸಾಧ್ಯತೆ ಇರುವುದರಿಂದ ಟೌನ್​ಹಾಲ್​ನ​ ಸಭಾಂಗಣದ ಒಳಗೆ ಪೊಲೀಸರಿಂದ ಶೋಧಕಾರ್ಯ ನಡೆಯುತ್ತಿದೆ. ಟೌನ್​ಹಾಲ್​ ಒಳಗಿದ್ದ ಮತ್ತಿಬ್ಬರು ಹೋರಾಟಗಾರರು ವಶಕ್ಕೆ ಪಡೆಯಲಾಗಿದೆ.

ಬಾಗಲಕೋಟೆ: ಸಂಗೊಳ್ಳಿ ರಾಯಣ್ಣ ಮೂರ್ತಿ ಧ್ವಂಸ ಘಟನೆ ಖಂಡಿಸಿ ಬೈಕ್ ಮೆರವಣಿಗೆ ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಧ್ವಂಸ ಪ್ರಕರಣ ಖಂಡಿಸಿ ಕರವೇ ಕಾರ್ಯಕರ್ತರು ಬೈಕ್​ ರಾಲಿ ನಡೆಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದಲ್ಲಿ ಬೈಕ್​ ಮೆರವಣಿಗೆ ಮಾಡಿದ್ದಾರೆ. ಶಿವಾಜಿ ವೃತ್ತದಿಂದ ತಹಶೀಲ್ದಾರ್​ ಕಚೇರಿಯವರೆಗೆ ರಾಲಿ ಮಾಡಿದ್ದು ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಕೆ ಮಾಡಿದ್ದಾರೆ.

ಇದನ್ನೂ ಓದಿ: ಕನ್ನಡಿಗರು ಮರಾಠಿಗರ ಗುದ್ದಾಟ, ಗಡಿ ವಿವಾದ; ಡಿಸೆಂಬರ್ 13 ರಿಂದ ಏನೇನಾಯ್ತು? ಇಲ್ಲಿದೆ ಸಂಪೂರ್ಣ ವಿವರ

ಇದನ್ನೂ ಓದಿ: ಬೆಳಗಾವಿಯಲ್ಲಿ ಪುಂಡಾಟಿಕೆ ಪ್ರಕರಣ: ಘಟನೆಗೆ ಪೊಲೀಸರ ವೈಫಲ್ಯವೇ ನೇರ ಕಾರಣ- ಶಾಸಕ ಅಭಯ್ ಪಾಟೀಲ್ ಆರೋಪ

ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ