ಬೆಂಗಳೂರು: ಪ್ರವೀಣ್ ಸೂದ್ ನೇತೃತ್ವದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ; ವಿವರ ಇಲ್ಲಿದೆ

ಸಭೆಯಲ್ಲಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಹೆಚ್ಚುವರಿ ಪೊಲೀಸ್ ಆಯುಕ್ತರು, ಡಿಸಿಪಿಗಳು ಭಾಗಿ ಆಗಿದ್ದಾರೆ. 56ನೇ ಡಿಜಿ ಮತ್ತು ಐಜಿಪಿಗಳ ಸಭೆಯ ಬಗ್ಗೆ ಮಾತಕುತೆ ನಡೆಸಲಾಗಿದೆ. 2 ದಿನದ ಹಿಂದೆ ಲಖನೌನಲ್ಲಿ ನಡೆದಿದ್ದ ಸಭೆ ಬಗ್ಗೆ ಚರ್ಚೆ ಮಾಡಲಾಗಿದೆ.

ಬೆಂಗಳೂರು: ಪ್ರವೀಣ್ ಸೂದ್ ನೇತೃತ್ವದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ; ವಿವರ ಇಲ್ಲಿದೆ
ಡಿಜಿ ಐಜಿಪಿ ಪ್ರವೀಣ್ ಸೂದ್
Follow us
TV9 Web
| Updated By: ganapathi bhat

Updated on:Nov 23, 2021 | 8:38 PM

ಬೆಂಗಳೂರು: ನಗರದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಲಾಗಿದ್ದು, 56ನೇ ಡಿಜಿ ಮತ್ತು ಐಜಿಪಿಗಳ ಸಭೆಯ ಬಗ್ಗೆ ಮಾತಕುತೆ ನಡೆಸಲಾಗಿದೆ. 2 ದಿನದ ಹಿಂದೆ ಲಖನೌನಲ್ಲಿ ನಡೆದಿದ್ದ ಸಭೆ ವಿಚಾರಗಳನ್ನು ಚರ್ಚೆ ಮಾಡಲಾಗಿದೆ. ಪೊಲೀಸ್ ಇಲಾಖೆಯಲ್ಲಿ ಸುಧಾರಿತ ತಂತ್ರಜ್ಞಾನ ಅಳವಡಿಕೆ, ಸಾರ್ವಜನಿಕ ವಲಯದಲ್ಲಿ ಸ್ಮಾರ್ಟ್ ತಂತ್ರಜ್ಞಾನ ಬಳಸಬೇಕು, ದೈನಂದಿನ ಸವಾಲು ಎದುರಿಸಲು ಖಾಸಗಿ ಏಜೆನ್ಸಿಗಳ ಸಹಾಯ ಪಡೆಯುವ ಬಗ್ಗೆ ಮಾತನಾಡಲಾಗಿದೆ. ಸೈಬರ್ ಪ್ರಕರಣಗಳ ತಡೆ, ತ್ವರಿತ ಪತ್ತೆಗೆ ಅಗತ್ಯಕ್ರಮಕ್ಕೆ‌ ಸೂಚನೆ ಹಾಗೂ ಸೈಬರ್ ಕ್ರೈಂ ತಡೆಗೆ ನೂತನ ತಂತ್ರಜ್ಞಾನ ಅಳವಡಿಕೆಗೆ ಸೂಚನೆ ಕೊಡಲಾಗಿದೆ.

ನಗರದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಲಾಗಿದೆ. ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ನೇತೃತ್ವದಲ್ಲಿ ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸಭೆ ನಡೆಸಲಾಗಿದೆ. ಸಭೆಯಲ್ಲಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಹೆಚ್ಚುವರಿ ಪೊಲೀಸ್ ಆಯುಕ್ತರು, ಡಿಸಿಪಿಗಳು ಭಾಗಿ ಆಗಿದ್ದಾರೆ. 56ನೇ ಡಿಜಿ ಮತ್ತು ಐಜಿಪಿಗಳ ಸಭೆಯ ಬಗ್ಗೆ ಮಾತಕುತೆ ನಡೆಸಲಾಗಿದೆ. 2 ದಿನದ ಹಿಂದೆ ಲಖನೌನಲ್ಲಿ ನಡೆದಿದ್ದ ಸಭೆ ಬಗ್ಗೆ ಚರ್ಚೆ ಮಾಡಲಾಗಿದೆ.

ಸಭೆಯ ಬಳಿಕ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಹೇಳಿಕೆ ನೀಡಿದ್ದಾರೆ. ಡಿಜಿ ಮತ್ತು ಐಜಿಪಿ ಕಾನ್ಫರೆನ್ಸ್‌ನಲ್ಲಿ ಮಹತ್ವದ ವಿಚಾರಗಳ ಚರ್ಚೆ ಮಾಡಲಾಗಿದೆ. ಅಲ್ಲಿ ಸಾಕಷ್ಟು ಮಹತ್ವದ ವಿಚಾರಗಳ ಬಗ್ಗೆ ಚರ್ಚೆಗಳಾಗಿವೆ. ಅಲ್ಲಿ ಚರ್ಚಿಸಿದ ವಿಚಾರಗಳ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಮುಖ್ಯವಾಗಿ ಡ್ರಗ್ಸ್, ವಿದೇಶಿಗರ ಅಕ್ರಮ ವಾಸ್ತವ್ಯ ಬಗ್ಗೆ, ಸೈಬರ್ ಕ್ರೈಂ ನಿಯಂತ್ರಣ, ಹೊಸ ತಂತ್ರಜ್ಞಾನಗಳ ಬಳಕೆ ಬಗ್ಗೆ ಮಾತನಾಡಲಾಗಿದೆ ಎಂದು ತಿಳಿಸಿದ್ದಾರೆ.

ಆದರೆ ಕೆಲವೊಂದು ಅಂಶಗಳ ಅಳವಡಿಕೆಗೆ ಅಡೆತಡೆಗಳಿವೆ. ಈ ಬಗ್ಗೆ ಸರ್ಕಾರದ ಜತೆ ಚರ್ಚಿಸಬೇಕು, ಚರ್ಚಿಸಲಿದ್ದೇವೆ. ಮುಂದಿನ ಹಂತದಲ್ಲಿ SPಗಳ ಮಟ್ಟದಲ್ಲಿ ಸಭೆ ಮಾಡಲಿದ್ದೇವೆ. ಇದುವರೆಗಿನ ಕೆಲಸದ ಬಗ್ಗೆ ತೃಪ್ತಿ ಇದೆ ಎನ್ನಲು ಸಾಧ್ಯವಿಲ್ಲ. ನಮ್ಮದು ಥ್ಯಾಂಕ್ ಲೆಸ್ ಜಾಬ್ ಎಂದು ಪ್ರವೀಣ್ ಸೂದ್ ಹೇಳಿದ್ದಾರೆ. ಅನೇಕ‌ ಸಂದರ್ಭಗಳಲ್ಲಿ ಸಮರ್ಥವಾಗಿ ಕೆಲಸ ನಿರ್ವಹಿಸಿದ್ದೇವೆ. ಪುನೀತ್ ನಿಧನದ ವೇಳೆ ಪೊಲೀಸರಿಂದ ಉತ್ತಮ ಕೆಲಸ ಆಗಿದೆ. ಪೊಲೀಸರು ಉತ್ತಮವಾಗಿ ಭದ್ರತೆಯನ್ನು ನೀಡಿದ್ದರು ಎಂದು ಬೆಂಗಳೂರಿನಲ್ಲಿ ಪ್ರವೀಣ್ ಸೂದ್ ತಿಳಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಗೆ ಮತ್ತೊಂದು ಗರಿಮೆ, ದೇಶದ 10 ಟಾಪ್ ಠಾಣೆಗಳಲ್ಲಿ ಮಾನ್ವಿ ಠಾಣೆಗೆ 5ನೇ ಸ್ಥಾನ

ಇದನ್ನೂ ಓದಿ: ತಕ್ಷಣವೇ, ಖಾಲಿ ಇರುವ ಪೊಲೀಸ್ ಹುದ್ದೆಗಳ ಭರ್ತಿ ಮಾಡಿಕೊಳೀ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಖಡಕ್​ ಸೂಚನೆ

Published On - 8:38 pm, Tue, 23 November 21

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ