ನ.25ಕ್ಕೆ ಕೋಳಿ ಸಾಕಾಣಿಕೆದಾರರಿಂದ ಮುಷ್ಕರಕ್ಕೆ ಕರೆ: ಚಿಕನ್, ಮೊಟ್ಟೆ ಪೂರೈಕೆ ವ್ಯತ್ಯಯ ಸಾಧ್ಯತೆ; ಸಾಕಾಣಿಕೆ ಶುಲ್ಕ ಪಾವತಿಗೆ ಪಟ್ಟು

ಕೋಳಿ ಸಾಕಾಣಿಕೆದಾರರು ನವೆಂಬರ್ 25 ರಿಂದ ಚಿಕನ್ ಮತ್ತು ಮೊಟ್ಟೆ ಪೂರೈಕೆ ಸ್ಥಗಿತಗೊಳಿಸುವ ಎಚ್ಚರಿಕೆ ನೀಡಿದ್ದಾರೆ. ಕನಿಷ್ಠ ಸಾಕಾಣಿಕೆ ವೆಚ್ಚ ಪಾವತಿಗೆ ಆಗ್ರಹಿಸಿ ಮುಷ್ಕರಕ್ಕೆ ಮುಂದಾಗಿದ್ದಾರೆ. ಈ ಮಧ್ಯೆ, ಬೆಂಗಳೂರಿನಲ್ಲಿ ಮೊಟ್ಟೆಯ ದರ 7.50 ರೂಪಾಯಿಗೆ ಏರಿಕೆಯಾಗಿ ಗ್ರಾಹಕರಿಗೆ ಆಘಾತ ನೀಡಿದೆ. ಮುಂಬರುವ ದಿನಗಳಲ್ಲಿ ಚಿಕನ್ ಮತ್ತು ಮೊಟ್ಟೆ ಪೂರೈಕೆಯಲ್ಲಿ ಭಾರಿ ವ್ಯತ್ಯಯ ಸಾಧ್ಯತೆ ಇದೆ.

ನ.25ಕ್ಕೆ ಕೋಳಿ ಸಾಕಾಣಿಕೆದಾರರಿಂದ ಮುಷ್ಕರಕ್ಕೆ ಕರೆ: ಚಿಕನ್, ಮೊಟ್ಟೆ ಪೂರೈಕೆ ವ್ಯತ್ಯಯ ಸಾಧ್ಯತೆ; ಸಾಕಾಣಿಕೆ ಶುಲ್ಕ ಪಾವತಿಗೆ ಪಟ್ಟು
ಮೊಟ್ಟೆ
Edited By:

Updated on: Nov 09, 2026 | 10:10 PM

ಬೆಂಗಳೂರು, ನವೆಂಬರ್​​ 09: ಕೋಳಿ ಸಾಕಾಣಿಕೆದಾರರು ನವೆಂಬರ್ 25ರಿಂದ ಚಿಕನ್ ಹಾಗೂ ಮೊಟ್ಟೆ ಪೂರೈಕೆ ಬಂದ್ ಮಾಡುವ ಸುಳಿವು ನೀಡಿದ್ದಾರೆ. ಮತ್ತೊಂದೆಡೆ ಮೊಟ್ಟೆಯ ದರ ಏಕಾಏಕಿ 7.5 ರೂ ಏರಿಕೆಯಾಗಿದ್ದು, ಮೊಟ್ಟೆ ಪ್ರಿಯರಿಗೆ ಶಾಕ್ ಎದುರಾಗಿದೆ. ಕನಿಷ್ಠ ಸಾಕಾಣಿಕೆ ವೆಚ್ಚವನ್ನು ಪಾವತಿಸುವಂತೆ ಒತ್ತಾಯಿಸಲಾಗಿದೆ.

ಕನಿಷ್ಠ ಸಾಕಾಣಿಕೆ ವೆಚ್ಚ ಪಾವತಿಸುವಂತೆ ಆಗ್ರಹ 

ಕನಿಷ್ಠ ಸಾಕಾಣಿಕೆ ವೆಚ್ಚವನ್ನು ಪಾವತಿಸುವಂತೆ ಇಂಟಿಗ್ರೇಷನ್ ಕಂಪನಿಗಳಿಗೆ ರಾಜ್ಯ ಸರ್ಕಾರ ನಿರ್ದೇಶನ ನೀಡಬೇಕು ಅಂತಾ ಕರ್ನಾಟಕ ರಾಜ್ಯ ಕೋಳಿ ಸಾಕಾಣಿಕೆ ರೈತರ ಕ್ಷೇಮಾಭಿವೃದ್ಧಿ ಸಂಘ ಆಗ್ರಹಿಸಿದೆ. ಇಲ್ಲವಾದಲ್ಲಿ ನವೆಂಬರ್ 25ರಂದು ಬೃಹತ್ ವಿಧಾನಸೌಧ ಚಲೋಗೆ ತೀರ್ಮಾನಿಸಲಾಗಿದೆ.

Loading...

ಚಿಕನ್ ಹಾಗೂ ಮೊಟ್ಟೆ ಪೂರೈಕೆಯ ವ್ಯತ್ಯಯ: ವ್ಯಾಪಾರಿಗಳು ಆತಂಕ

ಅಷ್ಟೇ ಅಲ್ಲದೆ ಅದೇ ದಿನ ಸಂಜೆಯಿಂದ ರಾಜ್ಯಾದ್ಯಂತ ಕೋಳಿ ಮರಿ ಸ್ವೀಕಾರ ಹಾಗೂ ಕೋಳಿ ಪೂರೈಕೆಯನ್ನು ಸಂಪೂರ್ಣ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ನಿರ್ಧರಿಸಲಾಗಿದೆ. ಹೀಗಾಗಿ ನಗರದಲ್ಲಿ ಚಿಕನ್ ಹಾಗೂ ಮೊಟ್ಟೆ ಪೂರೈಕೆಯ ವ್ಯತ್ಯಯದ ಬಗ್ಗೆ ವ್ಯಾಪಾರಿಗಳು ಆತಂಕ ಹೊರಹಾಕಿದ್ದಾರೆ.

ಇದನ್ನೂ ಓದಿ: ಪೆಟ್ರೋಲ್​ಗೆ ಶೇ.30ಕ್ಕೂ ಹೆಚ್ಚು ಎಥೆನಾಲ್ ಮಿಶ್ರಣ ಆರೋಪ: ಕೇಂದ್ರದ ಮೌನ ಪ್ರಶ್ನಿಸಿದ ಸಚಿವ ರಿಜ್ವಾನ್​ ಅರ್ಷದ್​​

ಇನ್ನು ನಿತ್ಯ ಒಂದು ಮೊಟ್ಟೆ ತಿಂದರೆ ಆರೋಗ್ಯಕ್ಕೆ ಉತ್ತಮ ಅಂತಾ ಮೊಟ್ಟೆ ತಿನ್ನುವವರಿಗೆ ಶಾಕ್ ಎದುರಾಗಿದೆ. ಒಂದು ಮೊಟ್ಟೆಯ ಬೆಲೆ ಬೆಂಗಳೂರಿನಲ್ಲಿ 7.50 ರೂ ತಲುಪಿರುವುದು ನಾಗರಿಕರಿಗೆ ಸಂಕಷ್ಟ ತಂದೊಡ್ಡಿದೆ. ಈ ರೀತಿ ಅಗತ್ಯ ಆಹಾರ ಉತ್ಪನ್ನಗಳ ಬೆಲೆ ಏರಿಕೆ ನಿಜಕ್ಕೂ ಬಡ ಹಾಗೂ ಮಧ್ಯಮ ವರ್ಗದ ಬರಸಿಡಿಲು ಅಂತಾ ಆಕ್ರೋಶ ವ್ಯಕ್ತವಾಗಿದೆ.

ಮೊಟ್ಟೆ ಬೆಲೆ ಏರಿಕೆಯನ್ನ ಸಮರ್ಥಿಸಿಕೊಂಡ ವರ್ತಕರು 

ಇನ್ನು ವರ್ತಕರು ಕೂಡ ಮೊಟ್ಟೆ ಬೆಲೆ ಏರಿಕೆಯನ್ನ ಸಮರ್ಥಿಸಿಕೊಂಡಿದ್ದಾರೆ. ಕೋಳಿ ಹಾಗೂ ಮೊಟ್ಟೆ ಉತ್ದಾದನಾ ವೆಚ್ಚ ಕೂಡ ಹೆಚ್ಚಳವಾಗಿರುವುದರಿಂದ ಬೆಲೆ ಏರಿಕೆ ಅನಿವಾರ್ಯ ಅಂತಿದ್ದಾರೆ. ಒಟ್ಟಿನಲ್ಲಿ ಸಾಲು ಸಾಲು ಬೆಲೆ ಏರಿಕೆಗಳಿಂದ ಎಲ್ಲವೂ ದುಬಾರಿಯಾಗುತ್ತಿದ್ದು, ಜನರು ಕಂಗಾಲಾಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.

ಲಕ್ಷ್ಮಿ ನರಸಿಂಹ ಸ್ವಾಮಿ. ಎಲ್ ಆದ ನಾನು ಮೂಲತಃ ಬೆಂಗಳೂರಿನವಾಗಿದ್ದು, ಪೂರ್ವ ತಾಲೂಕಿನ ದೊಡ್ಡಗುಬ್ಬಿ ಎಂಬ ಗ್ರಾಮದಲ್ಲಿ ವಾಸವಿದ್ದೇನೆ. ಕಳೆದ 6 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ವರದಿಗಾರನಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಐತಿಹಾಸಿಕ ಸರ್ಕಾರಿ ಕಲಾ ಕಾಲೇಜಿನಲ್ಲಿ ಸ್ನಾತಕ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಜ್ಞಾನಭಾರತಿ) ದಲ್ಲಿ M.A (ಪತ್ರಿಕೋದ್ಯಮ ಮತ್ತು ಸಂವಹನ) ಸ್ನಾತಕೋತ್ತರ ಪದವಿ ಪೂರೈಸಿದ್ದೇನೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಡಿಯ ನಗರ ಪಾಲಿಕೆಗಳು, ಬೆಸ್ಕಾಂ, ಜಲಮಂಡಳಿ, ಆಹಾರ, ಆರೋಗ್ಯ, ಶಿಕ್ಷಣ ಸೇರಿ ವಿವಿಧ ಕ್ಷೇತ್ರಗಳಲ್ಲಿ ನಾಗರಿಕರಿಗೆ ಎದುರಾಗುವ ಸಮಸ್ಯೆಗಳಿಗೆ, ಸಂಕಷ್ಟಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಈವರೆಗೂ ಶ್ರಮವಹಿಸಿದ್ದು, ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದೇನೆ..

Read More
Loading...
Unable to load recommendations.
Follow Us