ಕರ್ನಾಟಕ ದೇವಸ್ಥಾನಗಳಲ್ಲಿ ಮೊಬೈಲ್ ಬ್ಯಾನ್ಗೆ ಹೆಚ್ಚಿದ ಒತ್ತಡ: ಸಚಿವೆ ಶಶಿಕಲಾ ಜೊಲ್ಲೆ ಭೇಟಿಯಾದ ಅರ್ಚಕರ ಒಕ್ಕೂಟ
ಕರ್ನಾಟಕ ದೇವಸ್ಥಾನಗಳಲ್ಲಿ ಮೊಬೈಲ್ ಬ್ಯಾನ್ ಮಾಡಬೇಕೆಂಬ ಕೂಗು ಜೋರಾಗಿದ್ದು, ಈ ಬಗ್ಗೆ ಅರ್ಚಕರ ಸಂಘ ಸಚಿವೆ ಶಶಿಕಲಾ ಜೊಲ್ಲೆ ಅವರನ್ನು ಭೇಟಿ ಮಾಡಿ ಮನವಿ ಮಾಡಿದೆ.
ಬೆಂಗಳೂರು: ದೇವಸ್ಥಾನಗಳ(Temples) ಪಾವಿತ್ರ್ಯವನ್ನು ಕಾಪಾಡಲು ತಮಿಳುನಾಡಿನಲ್ಲಿ ಮೊಬೈಲ್ ಫೋನ್ ಬ್ಯಾನ್ ಮಾಡಿದ ರೀತಿಯಲ್ಲಿ ಕರ್ನಾಟಕದಲ್ಲೂ (karnataka) ಸಹ ದೇಗುಲಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸಬೇಕೆಂಬ ಕೂಗು ಜೋರಾಗಿದೆ. ಈ ಬಗ್ಗೆ ಇಂದು(ಡಿಸೆಂಬರ್ 17) ಅಖಿಲ ಕರ್ನಾಟಕ ಅರ್ಚಕರ(priest) ಒಕ್ಕೂಟ ಸಚಿವೆ ಶಶಿಕಲಾ ಜೊಲ್ಲೆ (Shashikala jolle) ಅವರನ್ನು ಭೇಟಿ ಮಾಡಿದ್ದು, ಮುಜರಾಯಿ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಮೊಬೈಲ್ ಬ್ಯಾನ್ಗೆ ಮನವಿ ಮಾಡಿದೆ.
ಬೆಂಗಳೂರಿನ ಮುಜರಾಯಿ ಇಲಾಖೆ ಕಚೇರಿಯಲ್ಲಿ ಸಚಿವೆ ಶಶಿಕಲಾ ಜೊಲ್ಲೆ ಅವರನ್ನು ಭೇಟಿ ಮಾಡಿದ ಕರ್ನಾಟಕ ಅರ್ಚಕರ ಒಕ್ಕೂಟ, ದೇವರ ಆಭರಣ ಫೋಟೋ, ಹೆಣ್ಣು ಮಕ್ಕಳ ಫೋಟೋ ತೆಗೆಯೋದು ದೇವಾಲಯಗಳ ಆವರಣದಲ್ಲಿ ಸೆಲ್ಫಿ ತೆಗೆದುಕೊಳ್ಳುವವರ ಹಾವಳಿ ಇದೆ. ಭಕ್ತರ ಏಕಾಗ್ರತೆ ಧಕ್ಕೆಯಾಗುತ್ತಿರುವುದರಿಂದ ಮೊಬೈಲ್ ನಿಷೇಧಿಸಿದೆ ಎಂದು ಮನವಿ ಮಾಡಿದೆ. ಇದಕ್ಕೆ ಅಧಿಕಾರಿಗಳ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳುವುದು ಸಚಿವೆ ಜೊಲ್ಲೆ ಭರವಸೆ ನೀಡಿದ್ದಾರೆ.
ತಮಿಳುನಾಡಿನಲ್ಲಿ ದೇವಾಲಯಗಳ ಪಾವಿತ್ರ್ಯ ಮತ್ತು ಪರಿಶುದ್ಧತೆಯನ್ನು ಕಾಪಾಡುವುದಕ್ಕಾಗಿ ರಾಜ್ಯದ ಉದ್ದಗಲಕ್ಕೂ ದೇವಾಲಯಗಳಲ್ಲಿ ಮೊಬೈಲ್ ಫೋನ್ ಬಳಸದಂತೆ ನಿರ್ಬಂಧಿಸಲು ರಾಜ್ಯ ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಇತ್ತೀಚೆಗೆ ಸೂಚನೆ ನೀಡಿದೆ. ನ್ಯಾಯಮೂರ್ತಿಗಳಾದ ಆರ್. ಮಹದೇವನ್, ಜೆ ಸತ್ಯನಾರಾಯಣ ಪ್ರಸಾದ ಅವರಿದ್ದ ನ್ಯಾಯಪೀಠ ಈ ನಿರ್ದೇಶನ ನೀಡಿತ್ತು. ಎಂ. ಸೀತಾರಾಮನ್ ಎಂಬುವವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಲೇವಾರಿ ಮಾಡುವ ಸಂದರ್ಭದಲ್ಲಿ ಈ ತೀರ್ಪು ನೀಡಿದೆ.
ತಮಿಳುನಾಡಿನ ಆರು ಪ್ರಮುಖ ಮುರುಗಾ ದೇವಾಲಯಗಳ ಪೈಕಿ ತೂತುಕುಡಿಯ ತಿರುಚೆಂಡೂರಿನ ಅರುಲ್‌ಮಿಗು ಸುಬ್ರಮಣಿಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಆಂಡ್ರಾಯ್ಡ್ ಫೋನ್ ಕೊಂಡೊಯ್ಯುವುದು ಮತ್ತು ಬಳಸುವುದನ್ನು ನಿಷೇಧಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಎಂ.ಸೀತಾರಾಮನ್ ಆಗ್ರಹಿಸಿದ್ದರು. ಈ ವಿದ್ಯಮಾನದ ಬೆನ್ನಲ್ಲೇ ಕರ್ನಾಟಕದಲ್ಲೂ ಸಹ ಕೂಡ ಇದೇ ಬೇಡಿಕೆ ಹೆಚ್ಚಾಗಿದೆ.
ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ