AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಧಿತರಿಗೆ ಜೈಲಿನಲ್ಲೇ ಉಗ್ರ ತರಬೇತಿ ನೀಡಿದ್ದು ಹೇಗೆ ನಜೀರ್? ತನಿಖೆಗೆ ಆದೇಶಿಸಿದ ಎಡಿಜಿಪಿ

ನಜೀರ್‌ನನ್ನು ಹೆಚ್ಚಿನ ಭದ್ರತೆಯ ಜೈಲಿನಲ್ಲಿ ಇರಿಸಲಾಗಿತ್ತು. ಆದಾಗ್ಯೂ ಇತರ ವಿಚಾರಣಾಧೀನ ಕೈದಿಗಳೊಂದಿಗೆ ಸಂವಹನ ನಡೆಸಲು ಅವನಿಗೆ ಹೇಗೆ ಅವಕಾಶ ನೀಡಲಾಯಿತು ಎಂಬುದು ಇನ್ನಷ್ಟೇ ಬಹಿರಂಗವಾಗಬೇಕಿದೆ.

ಬಂಧಿತರಿಗೆ ಜೈಲಿನಲ್ಲೇ ಉಗ್ರ ತರಬೇತಿ ನೀಡಿದ್ದು ಹೇಗೆ ನಜೀರ್? ತನಿಖೆಗೆ ಆದೇಶಿಸಿದ ಎಡಿಜಿಪಿ
ಲಷ್ಕರ್-ಎ-ತೊಯ್ಬಾ ಉಗ್ರ ಟಿ ನಜೀರ್‌ Image Credit source: News9
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Jul 21, 2023 | 6:20 PM

Share

ಬೆಂಗಳೂರು, ಜುಲೈ 21: ಹೆಬ್ಬಾಳದಿಂದ ಸಿಸಿಬಿ ಪೊಲೀಸರು (CCB Police) ಬಂಧಿಸಿರುವ ಐವರು ಶಂಕಿತ ಉಗ್ರರಿಗೆ 2008ರ ಸರಣಿ ಸ್ಫೋಟದ ಪ್ರಮುಖ ಆರೋಪಿ ಟಿ ನಜೀರ್‌ (T Nazir) ಕಾರಾಗೃಹದಲ್ಲೇ ಭಯೋತ್ಪಾದನೆ ತರಬೇತಿ ನೀಡಿದ್ದು ಹೇಗೆ? ಕೊಲೆ ಪ್ರಕರಣದ ಆರೋಪಿಗಳನ್ನು ಬಂಧಿತ ಉಗ್ರ ನಜೀರ್‌, ಪರಪ್ಪನ ಅಗ್ರಹಾರ ಜೈಲಿನಲ್ಲೇ ಭಯೋತ್ಪಾದನೆಗೆ ಸೆಳೆದದ್ದು ಹೇಗೆ ಎಂಬ ಬಗ್ಗೆ ತನಿಖೆ ನಡೆಸುವಂತೆ ಎಡಿಜಿಪಿ (ಕಾರಾಗೃಹ) ಮಾಲಿನಿ ಕೃಷ್ಣಮೂರ್ತಿ ಶುಕ್ರವಾರ ಆದೇಶಿಸಿದ್ದಾರೆ. ಬಂಧಿತ ವ್ಯಕ್ತಿಗಳು ಲಷ್ಕರ್-ಎ-ತೊಯ್ಬಾ (LeT) ಉಗ್ರನ ಸಂಪರ್ಕಕ್ಕೆ ಬಂದಿದ್ದು ಹೇಗೆ? ಅವರಿಗೆ ಹೇಗೆ ಭಯೋತ್ಪಾದನೆ ತರಬೇತಿ ನೀಡಲಾಯಿತು ಎಂಬುದನ್ನು ಆಮೂಲಾಗ್ರ ತನಿಖೆ ನಡೆಸುವಂತೆ ಅವರು ಸೂಚಿಸಿದ್ದಾರೆ.

2017 ರಲ್ಲಿ ನಡೆದ ಕೊಲೆ ಪ್ರಕರಣದ ಆರು ಆರೋಪಿಗಳನ್ನು ಪರಪ್ಪನ ಅಗ್ರಹಾರಕ್ಕೆ ಕಳುಹಿಸಲಾಗಿತ್ತು. ಅವರನ್ನು ಜೈಲಿನಲ್ಲೇ ನಜೀರ್ ಅವರನ್ನು ಉಗ್ರ ಕೃತ್ಯಗಳಲ್ಲಿ ಶಾಮೀಲಾಗುವಂತ ಪ್ರಚೋದನೆ ನೀಡಿದ್ದ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ ಬುಧವಾರ ಹೇಳಿದ್ದರು.

ನಜೀರ್‌ನನ್ನು ಹೆಚ್ಚಿನ ಭದ್ರತೆಯ ಜೈಲಿನಲ್ಲಿ ಇರಿಸಲಾಗಿತ್ತು. ಆದಾಗ್ಯೂ ಇತರ ವಿಚಾರಣಾಧೀನ ಕೈದಿಗಳೊಂದಿಗೆ ಸಂವಹನ ನಡೆಸಲು ಅವನಿಗೆ ಹೇಗೆ ಅವಕಾಶ ನೀಡಲಾಯಿತು ಎಂಬುದು ಇನ್ನಷ್ಟೇ ಬಹಿರಂಗವಾಗಬೇಕಿದೆ.

ಇದನ್ನೂ ಓದಿ: ಬೆಂಗಳೂರಲ್ಲಿ ಬಂಧಿತ ಶಂಕಿತ ಉಗ್ರರ ಬಳಿ ಸಿಕ್ಕಿದ್ದು ವಾಕಿಟಾಕಿ ಅಲ್ಲವೇ ಅಲ್ಲಾ! ಇಲ್ಲಿದೆ ಅಸಲಿ ಕಹಾನಿ

ಪೊಲೀಸರ ಪ್ರಕಾರ, 2017 ರ ಕೊಲೆ ಪ್ರಕರಣದ ಪ್ರಮುಖ ಶಂಕಿತನಾಗಿದ್ದ ಜುನೈದ್, ನಜೀರ್ ಜೊತೆ ನಿಕಟ ಸಂಪರ್ಕ ಹೊಂದಿದ್ದ. ನಂತರ, ಜಾವೇದ್ ಉಗ್ರ ಚಟುವಟಿಕೆಯನ್ನು ಸಕ್ರಿಯಗೊಳಿಸಿದ.

ಈ ಮಧ್ಯೆ, ನಜೀರ್​​ ಅನ್ನು ಇತರ ಕೈದಿಗಳು ತರಾಟೆಗೆ ತೆಗೆದುಕೊಂಡ ಘಟನೆಯೂ ಪರಪ್ಪನ ಅಗ್ರಹಾರ ಜೈಲಿನಲ್ಲಿ ಶುಕ್ರವಾರ ನಡೆದಿದೆ. ವಿಡಿಯೋ ಕಾನ್ಫರೆನ್ಸ್​ ಮೂಲಕ ವಿಚಾರಣೆಗೆ ಹೊರಟಿದ್ದ ನಜೀರ್​​​ನನ್ನು ತಡೆದ ಇತರ ಕೈದಿಗಳು, ‘ನೀನು ದೇಶದ್ರೋಹಿ, ನಿನ್ನಿಂದಲೇ ಜೈಲಿನ ವಾತಾವರಣ ಹದಗೆಟ್ಟಿದೆ’ ಎಂದು ಹಿಗ್ಗಾಮುಗ್ಗ ಬೈದಿದ್ದಲ್ಲೆ, ಹಲ್ಲೆಗೂ ಮುಂದಾಗಿದ್ದರು ಎನ್ನಲಾಗಿದೆ. ನಂತರ ಜೈಲು ಸಿಬ್ಬಂದಿ ಆತನನ್ನು ರಕ್ಷಿಸಿ ವಿಚಾರಣೆಗೆ ಕರೆದೊಯ್ದಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:02 pm, Fri, 21 July 23

Follow Us
ಪ್ರಜ್ವಲ್​ ಕುಮಾರ್ ಎನ್​ ವೈ
ಪ್ರಜ್ವಲ್​ ಕುಮಾರ್ ಎನ್​ ವೈ

2017 ಜೂನ್​ನಿಂದ ಟಿವಿ9 ಕನ್ನಡ ವಾಹಿನಿಯಲ್ಲಿ ಕ್ರೈಮ್ ವರದಿಗಾರನಾಗಿ ವೃತ್ತಿ. ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿ ಮಾಡುತಿದ್ದೇನೆ. ಮೂಲತಃ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನವನಾಗಿದ್ದು ಹಾಸನ ಮತ್ತು ತುಮಕೂರಿನಲ್ಲಿ ವಿದ್ಯಾಭ್ಯಾಸ ಮುಗಿಸಿದ ನಂತರ ಒಂದು ವರ್ಷ ಜನಶ್ರೀ ಸುದ್ದಿ ವಾಹಿನಿಯಲ್ಲಿ ಕ್ರೈಮ್ ರಿಪೋರ್ಟರ್ ಆಗಿ ಕೆಲಸ ಮಾಡಿ ನಂತರ 2017 ರಿಂದ ಇಲ್ಲಿಯವರೆಗೆ ಟಿವಿ9 ನಲ್ಲಿ ಕೆಲಸ ಮಾಡುತಿದ್ದೇನೆ.

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ