AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಗ್ನಿದುರಂತಗಳ ಬಳಿಕ ಬಸ್ ಮಾಲೀಕರಿಗೆ ಸರ್ಕಾರದ ಖಡಕ್ ಎಚ್ಚರಿಕೆ, 11 ರೂಲ್ಸ್ ಪಾಲನೆಗೆ ಡೆಡ್​ಲೈನ್ ಫಿಕ್ಸ್

ಚಿತ್ರದುರ್ಗ ದುರಂತದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸೂಚನೆಯಂತೆ ಕರ್ನಾಟಕ ಸಾರಿಗೆ ಇಲಾಖೆ ಖಾಸಗಿ ಬಸ್‌ಗಳಿಗೆ ಹೊಸ ಸುರಕ್ಷತಾ ನಿಯಮಗಳನ್ನು ಜಾರಿಗೊಳಿಸಿದೆ. ಫೆಬ್ರವರಿ 28ರೊಳಗೆ ಸ್ಲೀಪರ್ ಕೋಚ್ ಮತ್ತು ಅಖಿಲ ಭಾರತ ಪ್ರವಾಸಿ ಬಸ್‌ಗಳಲ್ಲಿ ತುರ್ತು ನಿರ್ಗಮನ ದ್ವಾರ, ಅಗ್ನಿಶಾಮಕ ಸಾಧನ, ಹ್ಯಾಮರ್ ಸೇರಿದಂತೆ 11 ಕಡ್ಡಾಯ ಕ್ರಮಗಳನ್ನು ಅಳವಡಿಸಲು ಸೂಚಿಸಲಾಗಿದೆ.

ಅಗ್ನಿದುರಂತಗಳ ಬಳಿಕ ಬಸ್ ಮಾಲೀಕರಿಗೆ ಸರ್ಕಾರದ ಖಡಕ್ ಎಚ್ಚರಿಕೆ, 11 ರೂಲ್ಸ್ ಪಾಲನೆಗೆ ಡೆಡ್​ಲೈನ್ ಫಿಕ್ಸ್
ಅಗ್ನಿದುರಂತಗಳ ಬಳಿಕ ಬಸ್ ಮಾಲೀಕರಿಗೆ ಸರ್ಕಾರದ ಖಡಕ್ ಎಚ್ಚರಿಕೆ
ಕಿರಣ್​ ಸೂರ್ಯ
| Edited By: |

Updated on:Feb 13, 2026 | 8:49 AM

Share

ಬೆಂಗಳೂರು, ಫೆಬ್ರವರಿ 13: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಹಾಗೂ ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ರೋಡ್ ಟ್ರಾನ್ಸ್‌ಪೋರ್ಟ್ ಸಂಸ್ಥೆಗಳ ಸೂಚನೆ ಹಿನ್ನೆಲೆ ರಾಜ್ಯ ಸಾರಿಗೆ ಇಲಾಖೆ ಖಾಸಗಿ ಬಸ್ (Private bus)ಮಾಲೀಕರಿಗೆ ಖಡಕ್ ನಿರ್ದೇಶನ ನೀಡಿದೆ. ಎಲ್ಲಾ ಸ್ಲೀಪರ್ ಕೋಚ್ ಮತ್ತು ಅಖಿಲ ಭಾರತ ಪ್ರವಾಸಿ ಬಸ್‌ಗಳಲ್ಲಿ ಪ್ರಯಾಣಿಕರ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಜಾರಿಗೆ ತರಲು ಫೆಬ್ರವರಿ 28ರವ ಗಡುವು ನೀಡಲಾಗಿದೆ.

ಖಾಸಗಿ ಬಸ್  ಮಾಲೀಕರಿಗೆ ಸಾರಿಗೆ ಸಚಿವ ಖಡಕ್ ವಾರ್ನಿಂಗ್

ಚಿತ್ರದುರ್ಗ ಖಾಸಗಿ ಬಸ್ ಅಗ್ನಿದುರಂತದ ನಂತರ ಸುರಕ್ಷತಾ ಮಾನದಂಡಗಳನ್ನು ಕಟ್ಟುನಿಟ್ಟಾಗಿಸುವ ಹಿನ್ನೆಲೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಕಳೆದ ತಿಂಗಳ 21ರಂದು ಖಾಸಗಿ ಬಸ್ ಮಾಲೀಕರು, ಕೋಚ್ ನಿರ್ಮಾಣ ಕಂಪನಿಗಳ ಪ್ರತಿನಿಧಿಗಳು ಹಾಗೂ ಸಾರಿಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಬಸ್ ಬಾಡಿ ನಿರ್ಮಾಣ ವಿಧಾನ, ತುರ್ತು ನಿರ್ಗಮನ ದ್ವಾರಗಳ ಸಂಖ್ಯೆ, ಅಗ್ನಿಶಾಮಕ ಸಾಧನಗಳ ಅಳವಡಿಕೆ, ಎಮರ್ಜೆನ್ಸಿ ಎಕ್ಸಿಟ್ ಬಳಿ ಸೂಕ್ತ ಆಸನ ವ್ಯವಸ್ಥೆ ಸೇರಿದಂತೆ 11 ನಿಯಮಗಳನ್ನು ಕಡ್ಡಾಯಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.

ಇನ್ನು ಎಸಿ ಬಸ್‌ಗಳಲ್ಲಿ ಬೆಂಕಿ ಕಾಣಿಸಿಕೊಂಡಲ್ಲಿ ನಂದಿಸುವ ವಿಧಾನಗಳ ಬಗ್ಗೆ ಸೂಚನೆ ನೀಡಬೇಕು, ಗ್ಲಾಸ್ ಒಡೆದು ಹೊರಬರಲು ಹ್ಯಾಮರ್‌ಗಳನ್ನು ಇರಿಸಬೇಕು, ಪ್ರಯಾಣಿಕರಿಗೆ ಎಚ್ಚರಿಕೆ ಅಲಾರಂ ವ್ಯವಸ್ಥೆ ಮಾಡಬೇಕು ಹಾಗೂ ಡೋರ್ ಜಂಪ್ ಮಾಡಲು ಮೆಟ್ಟಿಲುಗಳ ಸೌಲಭ್ಯ ಒದಗಿಸಬೇಕು ಎಂದು ಸಚಿವರು ಖಾಸಗಿ ಬಸ್ ಮಾಲೀಕರಿಗೆ ಮತ್ತು ಬಸ್ ಬಾಡಿ ಬಿಲ್ಡಿಂಗ್ ಮಾಡುವ ಕಂಪನಿಗಳಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ.

ಇದನ್ನೂ ಓದಿ ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್​​​​: ಏಕಾಏಕಿ ಬೆಂಕಿ ಹೊತ್ತಿಕೊಳ್ಳಲು ಕಾರಣ ಬಹಿರಂಗ

ಕಡ್ಡಾಯಗೊಳಿಸಿರುವ 11 ರೂಲ್ಸ್

  • ಸ್ಲೀಪರ್ ಬಸ್ಗಳಲ್ಲಿ ಚಾಲಕರ ಹಿಂಬದಿ ಡೋರ್ ತೆಗೆಯಬೇಕು.
  • ಸ್ಲೀಪರ್ ಬರ್ತ್ಗಳಲ್ಲಿ ಸ್ಲೈಡರ್ ತೆಗೆಯಬೇಕು.
  • ಫೈರ್ ಡಿಟೆಕ್ಷನ್  ತಿಂಗಳೊಳಗೆ ಅಳವಡಿಸಬೇಕು.
  • 10ಕೆಜಿ ತೂಕದ ಅಗ್ನಿ ಶಾಮಕ ಸಾಧನ ಅಳವಡಿಕೆ ಕಡ್ಡಾಯ.
  • ಚಾಸಿಸ್ ಅನಧಿಕೃತ ವಿಸ್ತರಣೆಗೆ ಬ್ರೇಕ್.
  • ಅನುಮೋದಿತ ಟೆಸ್ಟಿಂಗ್ ಏಜೆನ್ಸಿಯಿಂದ ಪ್ರಮಾಣ ಪತ್ರ ಕಡ್ಡಾಯ.
  • ಪ್ರಯಾಣಿಕರ ಸೇಫ್ಟಿ ಮಾನದಂಡ ಇದ್ದರೆ ಮಾತ್ರ ಎಫ್ ಸಿ ಮಾಡಬೇಕು.
  • ಬಸ್ ಕವಚ ನಿರ್ಮಾಣ ಸಂಸ್ಥೆ ಸಿಂಧುತ್ವ ಪರಿಶೀಲಿಸಿದ ನಂತರವೇ ನೋಂದಣಿ ಮಾಡಬೇಕು.
  • ಪ್ರತಿ ಬಸ್ಸಿನಲ್ಲೂ ಚಾವಣಿಯ ಹ್ಯಾಚ್ಗಳೊಂದಿಗೆ ರೇಖಾಚಿತ್ರವನ್ನು ಪ್ರಯಾಣಿಕರಿಗೆ ಓದಲು ಅನುಕೂಲವಾಗುವಂತೆ ಪ್ರದರ್ಶನ.
  • 12 ಮೀಟರ್ ಉದ್ದದ ಬಸ್ಸಿನಲ್ಲಿ ಕನಿಷ್ಠ 4 ತುರ್ತು ನಿರ್ಗಮನ ದ್ವಾರವಿರಬೇಕು, 12 ಮೀಟರಗಿಂತ ಹೆಚ್ಚಿದ್ದರೆ ಕನಿಷ್ಠ 5 ಡೋರ್ ಗಳಿರಬೇಕು.

ರಾಜ್ಯ ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ನಟರಾಜ್ ಶರ್ಮಾ ಮಾತನಾಡಿ, ಹೆಚ್ಚಿನ ಸೂಚನೆಗಳನ್ನು ಈಗಾಗಲೇ ಪಾಲಿಸಿದ್ದೇವೆ ಎಂದು ತಿಳಿಸಿದ್ದಾರೆ. ಗಡುವಿಗೆ ಇನ್ನೂ 16 ದಿನಗಳು ಮಾತ್ರ ಬಾಕಿಯಿರುವುದರಿಂದ ಎಲ್ಲಾ ಬಸ್‌ಗಳಲ್ಲಿ ನಿಯಮಗಳು ಸಂಪೂರ್ಣ ಜಾರಿಯಾಗುತ್ತವೆಯೇ ಎಂಬುದನ್ನು ಕಾದು ನೋಡಬೇಕಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:46 am, Fri, 13 February 26

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?