AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ಯಾಕ್ಸ್​ ಕಿರಿಕಿರಿಯಿಂದಾಗಿ ಸಿಡಿದೆದ್ದ ಕರ್ನಾಟಕ ಖಾಸಗಿ ಶಾಲಾ ಒಕ್ಕೂಟ

ಸರ್ಕಾರಕ್ಕೆ ಹಾಗೂ ಪಾಲಿಕೆ‌ ಅಧಿಕಾರಿಗಳಿಗೆ ಮನವಿ ಮಾಡುತ್ತಿದ್ದೇನೆ. ಖಾಸಗಿ ಶಾಲೆಗಳ ಮೇಲೆ ಹೇರಲಾಗಿರುವ ಹಲವು ನಿಯಮಗಳು ಸರಿ ಆಗಬೇಕು. ನಮ್ಮ‌ ಸಮ್ಯಸೆಗಳಿಗೆ ಅಧಿಕಾರಿಗಳು ಹಾಗೂ ಸರ್ಕಾರ ದನಿಯಾಗಬೇಕು. ಫೈರ್ ಸೆಫ್ಟಿ ,ಲ್ಯಾಂಡ್ ಕರ್ನವರ್ಶನ್ ,ಟ್ಯಾಕ್ಸ್ ,ಸೇರಿದಂತೆ ಹಲವು ವಿಚಾರದ ಸಮ್ಯಸೆ ಬಗ್ಗೆ ಚರ್ಚೆ ಮಾಡಬೇಕಾಗಿದೆ ಎಂದು ಕ್ಯಾಮ್ಸ್ ಕಾರ್ಯದರ್ಶಿ(KAMS General secretary) ಶಶಿಕುಮಾರ್ ಹೇಳಿದ್ದಾರೆ.

ಟ್ಯಾಕ್ಸ್​ ಕಿರಿಕಿರಿಯಿಂದಾಗಿ ಸಿಡಿದೆದ್ದ ಕರ್ನಾಟಕ ಖಾಸಗಿ ಶಾಲಾ ಒಕ್ಕೂಟ
ಕ್ಯಾಮ್ಸ್ ಕಾರ್ಯದರ್ಶಿ ಶಶಿಕುಮಾರ್
Vinayak Hanamant Gurav
| Updated By: ಕಿರಣ್ ಹನುಮಂತ್​ ಮಾದಾರ್|

Updated on:Feb 02, 2024 | 10:01 PM

Share

ಬೆಂಗಳೂರು, ಫೆ.02: ಫೈರ್ ಸೇಫ್ಟಿ ನವೀಕರಣ ವಿಚಾರದಲ್ಲಿ ಖಾಸಗಿ ಶಾಲೆಗಳಿಗೆ ಅನ್ಯಾಯವಾಗುತ್ತಿದೆ ಎಂದು ಕ್ಯಾಮ್ಸ್ ಕಾರ್ಯದರ್ಶಿ(KAMS General secretary) ಶಶಿಕುಮಾರ್ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು ‘ರಾಜ್ಯದಲ್ಲಿ 10 ಸಾವಿರ ಶಾಲೆಗಳಿಗೆ ತೊಂದರೆಯಾಗುತ್ತಿದೆ. 2020ರ ಕೋವಿಡ್ ಸಂಧರ್ಭದಲ್ಲಿ ಖಾಸಗಿ ಶಾಲೆ ಗಳ ಟ್ಯಾಕ್ಸ್​ನ್ನು 100% ರಷ್ಟು ಏರಿಕೆ ಮಾಡಿತು. ಆದಾದ ಬಳಿಕ ಕೋರ್ಟ್​ನಲ್ಲಿ ತಿರ್ಮಾನ ಆಗಿ ಅದನ್ನ 25% ಗೆ ಇಳಿಸಲಾಯ್ತು. ಜೊತೆಗೆ ಪಾಲಿಕೆಯಿಂದ ಕೋರ್ಟ್ ತೀರ್ಪನ್ನು ಉಲ್ಲಂಘಿಸಲಾಗಿದ್ದು, ಬಲವಂತವಾಗಿ ಕೋಟ್ಯಾಂತರ ರೂಪಾಯಿಯನ್ನು ಖಾಸಗಿ ಶಾಲೆಗಳಿಂದ ಲೂಟಿ ಮಾಡಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ನಮ್ಮ‌ ಸಮ್ಯಸೆಗಳಿಗೆ ಅಧಿಕಾರಿಗಳು ಹಾಗೂ ಸರ್ಕಾರ ಧನಿಯಾಗಬೇಕು

ಇದೇ ವೇಳೆ ‘ಸರ್ಕಾರಕ್ಕೆ ಹಾಗೂ ಪಾಲಿಕೆ‌ ಅಧಿಕಾರಿಗಳಿಗೆ ಮನವಿ ಮಾಡುತ್ತಿದ್ದೇನೆ. ನಮ್ಮ‌ ಸಮ್ಯಸೆಗಳಿಗೆ ಅಧಿಕಾರಿಗಳು ಹಾಗೂ ಸರ್ಕಾರ ಧನಿಯಾಗಬೇಕು. ಫೈರ್ ಸೆಫ್ಟಿ ,ಲ್ಯಾಂಡ್ ಕರ್ನವರ್ಶನ್ ,ಟ್ಯಾಕ್ಸ್ ,ಸೇರಿದಂತೆ ಹಲವು ವಿಚಾರದ ಸಮ್ಯಸೆ ಬಗ್ಗೆ ಚರ್ಚೆ ಮಾಡಬೇಕಾಗಿದೆ. ಪಾಲಿಕೆ‌ ಕೋರ್ಟ್ ಆದೇಶ ಉಲ್ಲಂಘನೆ ಮಾಡಲಾಗಿದ್ದು, ಖಾಸಗಿ ಶಾಲೆಗಳ ಮೇಲೆ ಹೇರಲಾಗಿರುವ ಹಲವು ನಿಯಮಗಳು ಸರಿ ಆಗಬೇಕು. ಈ ಹಿನ್ನಲೆ ಸಿಎಂ ಹಾಗೂ ಡಿಸಿಎಂ ಖಾಸಗಿ ಶಾಲೆಗಳ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲು ಅವಕಾಶ ನೀಡಬೇಕು. ಇನ್ನು ಖಾಸಗಿ ಶಾಲೆಗಳ ಸಮನ್ವಯ ಸಮಿತಿಗೆ ಅಧ್ಯಕ್ಷರಾಗಿ ಹಾಗೂ ಶಿಕ್ಷಕರ ಕ್ಷೇತ್ರ ಚುನಾವಣೆಗೆ ಪುಟ್ಟಣ್ಣರವನ್ನ ಸಮನ್ವಯ ಸಮಿತಿ ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ:ಯಾವುದೇ ಕಾರಣಕ್ಕೂ ಶಾಲಾ ಶುಲ್ಕವನ್ನು ಕಡಿಮೆ ಮಾಡಲ್ಲ; ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್

ಇನ್ನು ಕೋವಿಡ್ ಸಂಕಷ್ಟ ಪರಿಸ್ಥಿತಿಯಲ್ಲಿ ಆರ್‌ಟಿಇ ಮರುಪಾವತಿ ಹಣ ಬಳಕೆ ಮಾಡಿರುವುದರ ಕುರಿತು ಅಂದೇ ಸರ್ಕಾರದ ವಿರುದ್ದ ಕಿಡಿಕಾರಿದ್ದರು. ಮರುಪಾವತಿಗೆ ನಿಗದಿ ಮಾಡಿದ್ದ 700 ಕೋಟಿಯಲ್ಲಿ ಪರಿಹಾರದ ಹಣ ಕೊಡುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು. ಜೊತೆಗೆ ಬಿಇಒ ಕಚೇರಿ ಅತ್ಯಂತ ಭ್ರಷ್ಟಾಚಾರದಲ್ಲಿ ತೊಡಗಿದೆ. ಶಾಲೆಯಲ್ಲಿ ಆಗುವ ಖರ್ಚನ್ನು ಪರಿಗಣಿಸುತ್ತಿಲ್ಲ. ಬದಲಿಗೆ ತಿರಸ್ಕೃತ ಮಾಡಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಇದೀಗ ಖಾಸಗಿ ಶಾಲೆಗಳ ಸಮಸ್ಯೆಗೆ ಕುರಿತು ಚರ್ಚೆ ನಡೆಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:57 pm, Fri, 2 February 24

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್