Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಸರ್ಕಾರಕ್ಕೆ ಡೆಡ್​ಲೈನ್: ರಾಜ್ಯಾದ್ಯಂತ ಖಾಸಗಿ ಸಾರಿಗೆ ಒಕ್ಕೂಟ ಮುಷ್ಕರಕ್ಕೆ ಸಿದ್ದತೆ

ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟವು ತಮ್ಮ ಬೇಡಿಕೆಗಳನ್ನು ಈಡೇರಿಸಲು ಸರ್ಕಾರಕ್ಕೆ ಮಾರ್ಚ್ 22ರ ಗಡುವು ನೀಡಿದೆ. ಬೇಡಿಕೆ ಈಡೇರದಿದ್ದರೆ ರಾಜ್ಯಾದ್ಯಂತ ಖಾಸಗಿ ವಾಹನಗಳ ಸಾರಿಗೆ ಮುಷ್ಕರ ನಡೆಸುವುದಾಗಿ ಎಚ್ಚರಿಸಿದೆ. ಸೆಪ್ಟೆಂಬರ್‌ನಲ್ಲಿ ನಡೆದ ಬೆಂಗಳೂರು ಬಂದ್ ನಂತರ ಇದು ಮತ್ತೊಂದು ಪ್ರಮುಖ ಬೆಳವಣಿಗೆಯಾಗಿದೆ. ಸರ್ಕಾರದ ನಿರ್ಲಕ್ಷ್ಯದಿಂದಾಗಿ ಈ ಮುಷ್ಕರಕ್ಕೆ ಮುಂದಾಗುವುದಾಗಿ ಒಕ್ಕೂಟ ಹೇಳಿದೆ.

ಸಿದ್ದರಾಮಯ್ಯ ಸರ್ಕಾರಕ್ಕೆ ಡೆಡ್​ಲೈನ್: ರಾಜ್ಯಾದ್ಯಂತ ಖಾಸಗಿ ಸಾರಿಗೆ ಒಕ್ಕೂಟ ಮುಷ್ಕರಕ್ಕೆ ಸಿದ್ದತೆ
ಸಿದ್ದರಾಮಯ್ಯ ಸರ್ಕಾರಕ್ಕೆ ಡೆಡ್​ಲೈನ್: ರಾಜ್ಯಾದ್ಯಂತ ಖಾಸಗಿ ಸಾರಿಗೆ ಒಕ್ಕೂಟ ಮುಷ್ಕರಕ್ಕೆ ಸಿದ್ದತೆ
Follow us
Kiran Surya
| Updated By: ಗಂಗಾಧರ​ ಬ. ಸಾಬೋಜಿ

Updated on: Mar 06, 2025 | 6:24 PM

ಬೆಂಗಳೂರು, ಮಾರ್ಚ್​ 06: 2023ರ ಸೆಪ್ಟೆಂಬರ್​ 12ರಂದು ಖಾಸಗಿ ಸಾರಿಗೆ (private vehicle) ಸಂಘಟನೆಗಳ ಒಕ್ಕೂಟದಿಂದ ಬೆಂಗಳೂರಲ್ಲಿ ಖಾಸಗಿ ವಾಹನಗಳ ಸಾರಿಗೆ ಮುಷ್ಕರ (strike) ಮಾಡಲಾಗಿತ್ತು. ಈ ವೇಳೆ ವಿವಿಧ ಬೇಡಿಕೆಗಳನ್ನು ಸರ್ಕಾರದ ಮುಂದೆ ಇಡಲಾಗಿತ್ತು. ಆದರೆ ಅದರಲ್ಲಿ ಪ್ರಮುಖ ಬೇಡಿಕೆಗಳನ್ನು ಇಲ್ಲಿಯವರೆಗೆ ಈಡೇರಿಸಲು ಮುಂದಾಗಿಲ್ವಂತೆ. ಅದಕ್ಕೆ ಕರ್ನಾಟಕ ರಾಜ್ಯಾದ್ಯಂತ ಖಾಸಗಿ ಸಾರಿಗೆ ಮುಷ್ಕರ ಮಾಡಲು ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ.

ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟದದಿಂದ ಕರ್ನಾಟಕ ಬಂದ್​ ಎಚ್ಚರಿಕೆ!

2023 ಸೆಪ್ಟೆಂಬರ್- 11 ರಂದು ಸಿಲಿಕಾನ್ ಸಿಟಿ ಸಂಚಾರ ಸ್ತಬ್ಧ ಮಾಡಿದ್ದ ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟ, 23ರ ಸೆಪ್ಟೆಂಬರ್- 11 ರಂದು ಖಾಸಗಿ ಸಾರಿಗೆ ಸಂಚಾರ ಬಂದ್ ಮಾಡಿ ಹೋರಾಟ ಮಾಡಿದ ಸಂದರ್ಭದಲ್ಲಿ ಸರ್ಕಾರ ನಿಮ್ಮ ಎಲ್ಲಾ ಬೇಡಿಕೆಗಳನ್ನು ಈಡೇರಿಸಲು ಮುಂದಾಗುತ್ತೇವೆ ಎಂದು ಭರವಸೆ ನೀಡಿತ್ತು, ಆದರೆ 25 ಮಾರ್ಚ್ ಆದರೂ ಖಾಸಗಿ ಸಾರಿಗೆ ಸಂಘಟನೆಗಳ ಬೇಡಿಕೆಗಳನ್ನು ಈಡೇರಿಸಲು ಮುಂದಾಗಿಲ್ವಂತೆ. ಹಾಗಾಗಿ ನಿನ್ನೆ ಸುದ್ದಿಗೋಷ್ಠಿ ನಡೆಸಿದ ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟ, ಸಿಎಂ ಸಿದ್ದರಾಮಯ್ಯಗೆ ಮಾರ್ಚ್- 22 ರೊಳಗೆ ನಾಲ್ಕು ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕು ಇಲ್ಲಾಂದರೆ ಮಾ 24ಕ್ಕೆ ಮತ್ತೆ ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟದ ಸಭೆ ಕರೆದು ಕರ್ನಾಟಕ ಸಾರಿಗೆ ಮುಷ್ಕರಕ್ಕೆ ಕರೆ ನೀಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಬಜೆಟ್​ನಲ್ಲಿ ಬೇಡಿಕೆ ಈಡೇರಿಸುವಂತೆ 4 ಸಾರಿಗೆ ನಿಗಮಗಳು ಒತ್ತಾಯ: ಸರ್ಕಾರಕ್ಕೆ ಮಾರ್ಚ್​​​ 22ರ ಡೆಡ್​​ಲೈನ್​​

ಇದನ್ನೂ ಓದಿ
Image
ಬೆಂಗಳೂರಿನಲ್ಲಿ ಆಟೋ ಮೀಟರ್ ದರ ಏರಿಕೆಗೆ ಮುಹೂರ್ತ ಫಿಕ್ಸ್
Image
ವಾಹನ ಸವಾರರ ಗಮನಕ್ಕೆ: ಇಂದಿನಿಂದ ಬೆಂಗಳೂರಿನ ಈ ಫ್ಲೈ ಓವರ್ ಬಂದ್
Image
ಟಿಕೆಟ್ ದರ ಏರಿಕೆ ಪರಿಣಾಮ: 5 ಲಕ್ಷಕ್ಕಿಳಿದ ಮೆಟ್ರೋ ಪ್ರಯಾಣಿಕರ ಸಂಖ್ಯೆ
Image
ಜನಾಕ್ರೋಶ ಹಿನ್ನೆಲೆ ಪ್ರಯಾಣ ದರ ಸರಿಪಡಿಸಿದ ಮೆಟ್ರೋ: ಎಷ್ಟು ಕಡಿಮೆಯಾಯ್ತು?

ಇನ್ನೂ ಕಳೆದ ಬಾರಿ ಬೆಂಗಳೂರು ಬಂದ್ ಮಾಡಿದ್ದೇವು. ಈ ಬಾರಿ ಕರ್ನಾಟಕ ಬಂದ್ ಮಾಡಬೇಕಾಗುತ್ತೆ. 4 ಬೇಡಿಕೆ ಈಡೇರಿಸಲು ಮಾರ್ಚ್ 22ರ ವರೆಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಗಡುವು ನೀಡಲಾಗಿದೆ. ನಮ್ಮ ಬೇಡಿಕೆಗಳನ್ನು ಈಡೇರಿಸಲು ಮುಂದಾಗಿಲ್ಲ ಎಂದರೆ ಇಡೀ ಕರುನಾಡೇ ಸ್ತಬ್ಧ ಆಗಲಿದೆ. ಎಲ್ಲಾ ಸಾರಿಗೆ ವ್ಯವಸ್ಥೆ ಬಂದ್ ಆಗುತ್ತೆ ಆಟೋ, ಬಸ್, ಟ್ಯಾಕ್ಸಿ, ಸ್ಕೂಲ್ ಬಸ್ ಗೂಡ್ಸ್ ವಾಹನಗಳು ಬಂದ್ ಆಗುತ್ತೆ. 2023ರ ಬಂದ್​​ಗೆ 32 ಸಂಘಟನೆ ಬೆಂಬಲ ಕೊಟ್ಟಿತ್ತು. ಈ ಬಾರಿ 65 ರ ಸಂಘಟನೆ ಬೆಂಬಲ ಇದೆ. ನಮ್ಮ ಬೇಡಿಕೆ ಈಡೇರದಿದ್ದರೆ ಬಂದ್ ಮಾಡಿ ಖಾಸಗಿ ಒಕ್ಕೂಟದ ತಾಕತ್ತು ಏನೂ ಅನ್ನೋದನ್ನ ತೋರಿಸ್ತೇವೆ ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟ ಅಧ್ಯಕ್ಷ ನಟರಾಜ್ ಶರ್ಮ ಹೇಳಿದ್ದಾರೆ.

ಬಂದ್ ಬಗ್ಗೆ ಗೊಂದಲ ಮಾಡಿಕೊಳ್ಳಲ್ಲ. ಎಕ್ಸಾಂ ದಿನಗಳನ್ನ ನೋಡಿ ಕರ್ನಾಟಕ ಬಂದ್ ನಿರ್ಧಾರ ಮಾಡುತ್ತೇವೆ. ಸಿಎಂ ಬಜೆಟ್​ನಲ್ಲಿ ಬ್ಯೂಸಿ ಇದ್ದಾರೆ. ಸಿಎಂ ಸಮಯ ಕೊಟ್ಟರೆ ಹೋಗಿ ಭೇಟಿಯಾಗಿ ಮಾತುಕತೆ ಮಾಡುತ್ತೇವೆ ಎಂದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಆಟೋ ಮೀಟರ್ ದರ ಏರಿಕೆಗೆ ಮುಹೂರ್ತ ಫಿಕ್ಸ್ , ಎಷ್ಟು ಹೆಚ್ಚಳ?

ಒಟ್ಟಿನಲ್ಲಿ ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟ ಮಾರ್ಚ್ 22 ರೊಳಗೆ ಸಿಎಂ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಇಲ್ಲಾಂದ್ರೆ ಕರ್ನಾಟಕ ಸಾರಿಗೆ ಮುಷ್ಕರಕ್ಕೆ ಮುಂದಾಗ್ತಿವಿ ಅನ್ನೋ ಎಚ್ಚರಿಕೆ ನೀಡ್ತಿದೆ, ಆದರೆ ಸಿದ್ದರಾಮಯ್ಯ ಇವರ ಬೇಡಿಕೆಗಳನ್ನು ಈಡೇರಿಸಲು ಮುಂದಾಗುತ್ತಾರಾ ಎಂದು ಕಾದು ನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್​: 2 ತಿಂಗಳ ಹಣ ಒಂದೇ ಸಲಕ್ಕೆ ಜಮಾ...!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್​: 2 ತಿಂಗಳ ಹಣ ಒಂದೇ ಸಲಕ್ಕೆ ಜಮಾ...!
ಗಂಡನನ್ನು ರೂಂನಲ್ಲಿ ಕೂಡಿ ಕತ್ತು ಹಿಸುಕಿ ಥಳಿಸಿದ ಹೆಂಡತಿ; ವಿಡಿಯೋ ವೈರಲ್
ಗಂಡನನ್ನು ರೂಂನಲ್ಲಿ ಕೂಡಿ ಕತ್ತು ಹಿಸುಕಿ ಥಳಿಸಿದ ಹೆಂಡತಿ; ವಿಡಿಯೋ ವೈರಲ್
4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ