Karnataka Rains: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇನ್ನೂ 3 ದಿನ ಮಳೆ, ಹೆಲ್ಪ್ ಲೈನ್ ನಂಬರ್ ಬಿಡುಗಡೆ ಮಾಡಿದ ಬಿಬಿಎಂಪಿ
ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು: ಕಳೆದ ಮೂರ್ನಾಲ್ಕು ದಿನದಿಂದ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದೆ(Karnataka Rains). ಮಳೆಗೆ ಮರ-ವಿದ್ಯುತ್ ಕಂಬಗಳು ಧರೆಗುರುಳುತ್ತಿವೆ. ಮಳೆ ನೀರು ಮನೆಗಳಿಗೆ ನುಗ್ಗಿ ಅಪಾರ ಪ್ರಮಾಣದ ಹಾನಿಯಾಗುತ್ತಿದೆ. ಹೊಲ-ಗದ್ದೆ ಕೆರೆಯಂತಾಗಿದೆ. ರಸ್ತೆಗಳಲ್ಲಿ ನೀರು ನಿಂತು ಅವಘಡಗಳು ಸಂಭವಿಸುತ್ತಿವೆ. ಇದರ ನಡುವೆ ರಾಜ್ಯದಲ್ಲಿ ಇನ್ನೂ 3 ದಿನ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ(Meteorological Department) ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಇನ್ನೂ 3 ದಿನ ಮಳೆ ಮುಂದುವರಿಯುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ಇನ್ನೂ 2 ದಿನ ಮಳೆಯಾಗುವ ಸಾಧ್ಯತೆ ಇದ್ದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಾಗಲಿದೆ. ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಬೆಂಗಳೂರಲ್ಲಿ ಹವಾಮಾನ ಇಲಾಖೆ ನಿರ್ದೇಶಕ ಪ್ರಸಾದ್ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಬೆಂಗಳೂರಿನ ಹಲವೆಡೆ ಮತ್ತೆ ಮಳೆ: ಅಂಡರ್ ಪಾಸ್ಗಳಲ್ಲಿ ತುಂಬಿದ ಮಳೆ ನೀರು
ತುರ್ತು ಸಂದರ್ಭದಲ್ಲಿ ಸಂಪರ್ಕಿಸಲು ಬಿಬಿಎಂಪಿ ಹೆಲ್ಪ್ ಲೈನ್ ನಂಬರ್
Intense rains over #Bengaluru ⚠️⚠️⚠️
If you are in any emergency situation, please contact the below given BBMP helpline numbers immediately
Stay safe ?#KarnatakaRains #BengaluruRains #BangaloreRains #Bangalore https://t.co/sbFeDy5Lns
— Karnataka Weather (@Bnglrweatherman) May 23, 2023
ರಾಜ್ಯದ ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ರಾಮನಗರ, ಮಂಡ್ಯ, ಮೈಸೂರು, ಬೆಂಗಳೂರು ಜಿಲ್ಲೆಗಳಲ್ಲಿ ಹಾಗೂ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೆ ಗಾಳಿಯ ವೇಗ ಕೂಡ ಹೆಚ್ಚಾಗಿರಲಿದ್ದು, ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ