Karnataka Rain: ರಾಜ್ಯ ರಾಜಧಾನಿಯಲ್ಲಿ 5 ದಿನ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಮಧ್ಯಪ್ರದೇಶದಿಂದ ತಮಿಳುನಾಡಿನಲ್ಲಿ 9 ಮೀಟರ್ ಗಾಳಿಯ ದಿಕ್ಕಿನ ಬದಲಾವಣೆ ಹಿನ್ನೆಲೆ ರಾಜ್ಯ ರಾಜಾಧಾನಿಯಲ್ಲಿ 5 ದಿನ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Karnataka Rain: ರಾಜ್ಯ ರಾಜಧಾನಿಯಲ್ಲಿ 5 ದಿನ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ
ಪ್ರಾತಿನಿಧಿಕ ಚಿತ್ರ Image Credit source: indianexpress.com
Follow us
ಗಂಗಾಧರ​ ಬ. ಸಾಬೋಜಿ
|

Updated on:Mar 29, 2023 | 5:23 PM

ಬೆಂಗಳೂರು: ಮಧ್ಯಪ್ರದೇಶದಿಂದ ತಮಿಳುನಾಡಿನಲ್ಲಿ 9 ಮೀಟರ್ ಗಾಳಿಯ ದಿಕ್ಕಿನ ಬದಲಾವಣೆ ಹಿನ್ನೆಲೆ ರಾಜ್ಯ ರಾಜಧಾನಿಯಲ್ಲಿ 5 ದಿನ ಮಳೆಯಾಗುವ (Karnataka Rain) ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿಗೆ ಇಂದಿನಿಂದ ಐದು ದಿನಕಾಲ ಮಳೆ ಇರಲಿದ್ದು, ಮಂಡ್ಯ, ಮೈಸೂರು, ಕೋಲಾರ, ಹಾಸನ, ಕೊಡಗು, ಚಾಮರಾಜನಗರ, ಸೇರಿದಂತೆ ಹಲವೆಡೆ ಮಳೆಯಾಗಲಿದೆ. ಅದೇ ರೀತಿಯಾಗಿ ಉತ್ತರ ಒಳನಾಡಿನಲ್ಲಿ ಇಂದಿನಿಂದ ಮೂರು ದಿನ ಮಳೆಯಾಗುವ ಸಾಧ್ಯಾತೆ ಇದೆ. ಇನ್ನು ಕರಾವಳಿಯಲ್ಲಿ ಒಣಹವೆ ಮುಂದುವರಿಯಲಿದ್ದು, ಬೆಂಗಳೂರಿನಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಇಂದು ಮೋಡ ಕವಿದ ವಾತಾವರಣ ಹಾಗೂ ಗಾಳಿಯ ಪ್ರಮಾಣ ಹೆಚ್ಚಾಗಿರಲಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯಾತೆ ಇದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ

ಬೆಂಗಳೂರಿನ ಎಚ್​ಎಎಲ್​ನಲ್ಲಿ 33.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 34.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 33.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇದನ್ನೂ ಓದಿ: India Weather Updates: ಕರ್ನಾಟಕದಲ್ಲಿ ಒಣಹವೆ, ಅರುಣಾಚಲ, ಅಸ್ಸಾಂ, ಮೇಘಾಲಯದಲ್ಲಿ ಮಳೆ ಸಾಧ್ಯತೆ

ಕೊಡಗು, ಬೀದರ್, ಕಲಬುರಗಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ 2 ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕಲಬುರಗಿಯಲ್ಲಿ 38.2 ಡಿಗ್ರಿ ಸೆಲ್ಸಿಯಸ್ ಅತಿ​ ಗರಿಷ್ಠ ಉಷ್ಣಾಂಶ, ಬೆಳಗಾವಿ ಏರ್​ಪೋರ್ಟ್​ನಲ್ಲಿ 12.2 ಡಿಗ್ರಿ ಸೆಲ್ಸಿಯಸ್​ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:16 pm, Wed, 29 March 23

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್