Karnataka Rains: ಮುಂದಿನ ಎರಡು ದಿನ ರಾತ್ರಿ ವೇಳೆ ಬಿರುಗಾಳಿ ಮಳೆ: ಹವಾಮಾನ ಮುನ್ಸೂಚನೆ

Karnataka weather: ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಂಜೆ ಅಥವಾ ರಾತ್ರಿ ವೇಳೆ ಬಿರುಗಾಳಿ ಜೊತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rains: ಮುಂದಿನ ಎರಡು ದಿನ ರಾತ್ರಿ ವೇಳೆ ಬಿರುಗಾಳಿ ಮಳೆ: ಹವಾಮಾನ ಮುನ್ಸೂಚನೆ
ಬೆಂಗಳೂರು ಸೇರಿದಂತೆ ಕರ್ನಾಟಕ ವಿವಿಧ ಜಿಲ್ಲೆಗಳಲ್ಲಿ ಮುಂದಿನ 2 ದಿನ ಬಿರುಗಾಳಿ ಮಳೆ
Follow us
Rakesh Nayak Manchi
|

Updated on:May 26, 2023 | 2:13 PM

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು (Bangalore rain) ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸಂಜೆ ಅಥವಾ ರಾತ್ರಿ ವೇಳೆ ಬಿರುಗಾಳಿ ಜೊತೆ ಸಾಧಾರಣ ಮಳೆಯಾಗುವ (Karnataka Rains) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 24 ಗಂಟೆಗಳಲ್ಲಿ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ, ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಕರಾವಳಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಮುಂದಿನ 24 ಗಂಟೆಗಳಲ್ಲಿ ಒಳನಾಡಿನ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚು ಆಗುವ ಸಾಧ್ಯತೆ ಇದೆ. ಗಾಳಿಯ ವೇಗವು ಒಳನಾಡಿನಲ್ಲಿ ಗಂಟೆಗೆ 30 ರಿಂದ 40 ಕಿ.ಮೀ. ಇರುವ ಸಾಧ್ಯತೆ ಇದೆ. ಕರಾವಳಿಯ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚು ಆಗುವ ಸಾಧ್ಯತೆ ಇದೆ. ಅದೇ ರೀತಿ, ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚು ಆಗುವ ಸಾಧ್ಯತೆ ಇದೆ.

ಇದನ್ನೂ ಓದಿ: Rains damage crops: ವಿಜಯಪುರದಲ್ಲಿ ಜೋರು ಗಾಳಿ ಮತ್ತು ಮಳೆಗೆ ದಾಳಿಂಬೆ ಮತ್ತು ನಿಂಬೆ ಬೆಳೆ ನಾಶ, ರೈತರು ಕಂಗಾಲು

ಬೆಂಗಳೂರಿನಲ್ಲಿ ಎರಡು ದಿನ ಗುಡುಗು ಮಳೆ (Bengaluru rain)

ಮುಂದಿನ 24 ಗಂಟೆಗಳ ಕಾಲ ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾರವಣ ಇರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಒಂದೆರಡು ಸಲ ಬಿರುಗಾಳಿ ಸಹಿತ ಹಗುರದಿಂದ ಗುಡುಗು ಮಳೆಯಾಗುವ ಸಾಧ್ಯತೆ ಇದೆ. ಗಾಳಿಯ ವೇಗವು ಗಂಟೆಗೆ 30 ರಿಂದ 40 ಕಿ.ಮೀ. ವೇಗದಲ್ಲಿ ಇರುವ ಸಾಧ್ಯತೆ ಇದೆ. ಮುಂದಿನ 48 ಗಂಟೆಗಳಲ್ಲಿಯೂ ಇದು ಮುಂದುವರಿಯುವ ಸಾಧ್ಯತೆ ಇದೆ.

ಕರ್ನಾಟಕ ಮತ್ತು ಬೆಂಗಳೂರು ತಾಪಮಾನ

ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ. ಅದಾಗ್ಯೂ, ಗರಿಷ್ಠ ಉಷ್ಣಾಂಶವು ಕರಾವಳಿಯ ಕೆಲವು ಕಡೆಗಳಲ್ಲಿ ಹಾಗೂ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಹಾಗೂ ಕನಿಷ್ಠ ಉಷ್ಣಾಂಶವು 22 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.

ಚಿಕ್ಕಮಗಳೂರಿನಲ್ಲಿ ಹೈ ಅಲರ್ಟ್​

ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆ ಜಿಲ್ಲಾಡಳಿತದಿಂದ ಹೈ ಅಲರ್ಟ್ನ ಘೋಷಣೆ ಮಾಡಲಾಗಿದೆ. ಮಳೆ ಹಾನಿ, ಪ್ರವಾಹ ಎದುರಿಸಲು ಸಿದ್ಧವಾಗುವಂತೆ ಸರ್ಕಾರ ಸೂಚನೆ ನೀಡಿದ ಹಿನ್ನೆಲೆ ಎಚ್ಚೆತ್ತ ಜಿಲ್ಲಾಡಳಿತ, ಜಿಲ್ಲೆಯಲ್ಲಿ 47 ಗ್ರಾಮ ಪಂಚಾಯಿತಿ ವ್ಯಾಪ್ತಿಯ 77 ಗ್ರಾಮ ಸೇರಿದಂತೆ ಒಟ್ಟು 108 ಪ್ರದೇಶಗಳನ್ನು ಸೂಕ್ಷ್ಮ ಪ್ರದೇಶವಾಗಿ ಘೋಷಣೆ ಮಾಡಿದೆ. ಮಳೆಯನ್ನು ಎದುರಿಸಲು 34 ಅಧಿಕಾರಿಗಳ ತಂಡ, 290 ಹೋಂ ಗಾರ್ಡ್, 70 ಈಜು ತಜ್ಞರು ಸೇರಿ 40 ಸ್ವಯಂ ಸೇವಕ ತಂಡಗಳ ನಿಯೋಜನೆ ಮಾಡಲಾಗಿದೆ. ಈ ತಂಡಗಳನ್ನು ನದಿ ತೀರ, ಜಲಪಾತಗಳ ಬಳಿ ಸಿಬ್ಬಂದಿ ನಿಯೋಜನೆಗೆ ಸೂಚನೆ ನೀಡಲಾಗಿದೆ ಎಂದು ಟಿವಿ9ಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್‌.ರಮೇಶ್ ಮಾಹಿತಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:41 pm, Thu, 25 May 23

ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ