Weather Forecast: ಇಂದಿನಿಂದ 4 ದಿನ ರಾಜ್ಯದ ಈ ಭಾಗಗಳಲ್ಲಿ ಭಾರಿ ಮಳೆ: ಆಲಿಕಲ್ಲು ಮಳೆ , ಬಿರುಗಾಳಿಯ ಮುನ್ನೆಚ್ಚರಿಕೆ!

ಭಾರತೀಯ ಹವಾಮಾನ ಇಲಾಖೆ (IMD) ರಾಜ್ಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿಗೆ ಎಲ್ಲೋ ಅಲರ್ಟ್ ಹಾಗೂ ಉತ್ತರ ಒಳನಾಡಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಬಿರುಗಾಳಿ, ಸಿಡಿಲು, ಆಲಿಕಲ್ಲು ಮಳೆಯ ಸಾಧ್ಯತೆ ಇದ್ದು, ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಲು ಮತ್ತು ರೈತರು ಬೆಳೆಗಳನ್ನು ರಕ್ಷಿಸಿಕೊಳ್ಳಲು ಇಲಾಖೆ ಸೂಚಿಸಿದೆ. ಮುಂದಿನ ಕೆಲವು ದಿನಗಳಲ್ಲಿ ಹವಾಮಾನದಲ್ಲಿ ಏರುಪೇರಾಗಲಿದೆ.

Weather Forecast: ಇಂದಿನಿಂದ 4 ದಿನ ರಾಜ್ಯದ ಈ ಭಾಗಗಳಲ್ಲಿ ಭಾರಿ ಮಳೆ: ಆಲಿಕಲ್ಲು ಮಳೆ , ಬಿರುಗಾಳಿಯ ಮುನ್ನೆಚ್ಚರಿಕೆ!
ಸಾಂದರ್ಭಿಕ ಚಿತ್ರ

Updated on: May 16, 2026 | 5:18 PM

ಬೆಂಗಳೂರುಮ, ಮೇ,16: ರಾಜ್ಯದಲ್ಲಿ ಬಿಸಿಲಿನ ಬೇಗೆಯ ನಡುವೆಯೇ ವರುಣನ ಆರ್ಭಟ ಆರಂಭವಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ. ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಮುನ್ನೆಚ್ಚರಿಕೆಗಳನ್ನು ಘೋಷಣೆ ಮಾಡಿದೆ.

ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮೇ 16 ರಿಂದ ಮೇ 19 ರವರೆಗೆ ಹವಾಮಾನದಲ್ಲಿ ಭಾರಿ ಏರುಪೇರಾಗಲಿದೆ. ಈ ಅವಧಿಯಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ 64.5mm ನಿಂದ 115.5mm ವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಯೆಲ್ಲೋಅಲರ್ಟ್ (Yellow Alert) ಘೋಷಿಸಿದೆ.

ಇಲ್ಲಿದೆ ನೋಡಿ ಸ್ಟೋರಿ:

ಇನ್ನೊಂದೆಡೆ, ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರಿ ಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಗುಡುಗು, ಮಿಂಚು ಮಾತ್ರವಲ್ಲದೆ ಗಂಟೆಗೆ 40-50 ಕಿಮೀ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಕೆಲವು ಕಡೆಗಳಲ್ಲಿ ಆಲಿಕಲ್ಲು ಮಳೆ (Hailstorm) ಸಂಭವಿಸುವ ಸಾಧ್ಯತೆಯಿದೆ. ಹೀಗಾಗಿ ಉತ್ತರ ಒಳನಾಡಿನ ಭಾಗಕ್ಕೆ ಆರೆಂಜ್ಅಲರ್ಟ್ ನೀಡಲಾಗಿದೆ.

ಇದನ್ನೂ ಓದಿ: ನೆಲಮಂಗಲ ಬಳಿ ಭೀಕರ ಅಪಘಾತ: ಮಳೆಯ ನಡುವೆ ಕ್ಯಾಂಟರ್ ವಾಹನಕ್ಕೆ ಇವಿ ಬೈಕ್ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು!

ಬಿರುಗಾಳಿ ಮತ್ತು ಸಿಡಿಲಿನ ಮುನ್ಸೂಚನೆ ಇರುವುದರಿಂದ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಲು ಕೋರಲಾಗಿದೆ. ಮರದ ಕೆಳಗೆ ಅಥವಾ ವಿದ್ಯುತ್ ಕಂಬಗಳ ಬಳಿ ನಿಲ್ಲದಂತೆ ಹಾಗೂ ಆಲಿಕಲ್ಲು ಮಳೆಯಿಂದ ಬೆಳೆಗಳನ್ನು ರಕ್ಷಿಸಿಕೊಳ್ಳಲು ರೈತರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಇಲಾಖೆ ಸೂಚಿಸಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:14 pm, Sat, 16 May 26

Follow Us