Karnataka Rain: ಭಾರೀ ಮಳೆಯಿಂದ ಈ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್​ ಘೋಷಣೆ; ಬೆಂಗಳೂರಿಗೆ ಹಳದಿ ಅಲರ್ಟ್​

Bengaluru Rains: ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಧಾರವಾಡ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಯಾದಗಿರಿ, ಬೀದರ್, ಕಲಬುರಗಿ, ರಾಯಚೂರು, ಕೊಪ್ಪಳ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.

Karnataka Rain: ಭಾರೀ ಮಳೆಯಿಂದ ಈ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್​ ಘೋಷಣೆ; ಬೆಂಗಳೂರಿಗೆ ಹಳದಿ ಅಲರ್ಟ್​
ಮಳೆImage Credit source: PTI
Follow us
TV9 Web
| Updated By: ಸುಷ್ಮಾ ಚಕ್ರೆ

Updated on: May 20, 2022 | 5:44 AM

Bangalore Rains: ಬೆಂಗಳೂರಿನಲ್ಲಿ ವ್ಯಾಪಕ ಮಳೆ ಮುಂದುವರೆದಿದ್ದು, ಈಗಾಗಲೇ ಇಬ್ಬರು ಸಾವನ್ನಪ್ಪಿದ್ದಾರೆ. ಭಾರೀ ಮಳೆಗೆ 3 ಸಾವಿರಕ್ಕೂ ಹೆಚ್ಚು ಮನೆಗಳೊಳಗೆ ನೀರು ನುಗ್ಗಿದೆ. ಕರ್ನಾಟಕದಲ್ಲಿ ಭಾರೀ ಮಳೆಗೆ (Karnataka Rains) ಇಲ್ಲಿಯವರೆಗೆ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. ಇಂದು ಭಾರತೀಯ ಹವಾಮಾನ ಇಲಾಖೆಯು (IMD) ಕರ್ನಾಟಕದ 7 ಜಿಲ್ಲೆಗಳಿಗೆ ರೆಡ್ ಅಲರ್ಟ್ (Red Alert) ಘೋಷಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಕೂಡ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಯಾವುದೇ ಪ್ರಾಣಹಾನಿ ಮತ್ತು ಆಸ್ತಿಪಾಸ್ತಿಗೆ ಹಾನಿಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗಿದೆ.

ದಕ್ಷಿಣ ಕನ್ನಡ, ಮೈಸೂರು, ಶಿವಮೊಗ್ಗದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ನಿನ್ನೆ ಶಾಲೆಗಳಿಗೆ ರಜೆ ಘೋಷಿಸಿತ್ತು. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಧಾರವಾಡ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಯಾದಗಿರಿ, ಬೀದರ್, ಕಲಬುರಗಿ, ರಾಯಚೂರು, ಕೊಪ್ಪಳ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಇಂದಿನಿಂದ (ಮೇ 20) ಮಳೆಯ ಪ್ರಮಾಣದಲ್ಲಿ ಕೊಂಚ ಇಳಿಕೆಯಾಗಲಿದ್ದು, ಕೆಲವು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ (Yellow Alert) ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: Kerala Rain: ಕೇರಳದಲ್ಲಿ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; 12 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್​ ಘೋಷಣೆ

ಇದನ್ನೂ ಓದಿ
Image
Kerala Rain: ಕೇರಳದಲ್ಲಿ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; 12 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್​ ಘೋಷಣೆ
Image
Karnataka Rain: ಬೆಂಗಳೂರಿನಲ್ಲಿ ನಿಲ್ಲದ ಮಳೆಯ ಅಬ್ಬರ; ಕರಾವಳಿಯಲ್ಲಿ ಇಂದು ಆರೆಂಜ್ ಅಲರ್ಟ್​ ಘೋಷಣೆ
Image
Rain Updates: ಅಸ್ಸಾಂನಲ್ಲಿ ಭಾರೀ ಮಳೆಯಿಂದ 8 ಜನ ಸಾವು; ದಕ್ಷಿಣ ಭಾರತದಲ್ಲಿ ರೆಡ್ ಅಲರ್ಟ್​ ಘೋಷಣೆ

ಇಂದು ಕರ್ನಾಟಕದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಇಂದು ತಿಳಿಸಿದೆ. ಉತ್ತರ ಕರ್ನಾಟಕದಲ್ಲಿ ಇಂದು ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ ಮತ್ತು ನಾಳೆಯಿಂದ ಸಾಕಷ್ಟು ವ್ಯಾಪಕ ಮಳೆಯಾಗುತ್ತದೆ. 4 ಮತ್ತು 5ನೇ ದಿನದಂದು ಅಲ್ಲಲ್ಲಿ ಮಳೆಯಾಗುವ ನಿರೀಕ್ಷೆ ಇದೆ ಎಂದಿದ್ದಾರೆ.

ದಕ್ಷಿಣ ಒಳನಾಡಿನಲ್ಲಿ ಇಂದು ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿ ಕರ್ನಾಟಕದಲ್ಲಿ ಕೂಡ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಇಂದು ಕೇರಳ-ಮಾಹೆ, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದು ಕೇರಳ-ಮಾಹೆ, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುತ್ತದೆ. ಇಂದು ಕರಾವಳಿ ಕರ್ನಾಟಕದಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಮೇ 22ರವರೆಗೆ ಸಾಕಷ್ಟು ವ್ಯಾಪಕ ಮಳೆಯಾಗುತ್ತದೆ ಎಂದು ಐಎಂಡಿ ತಿಳಿಸಿದೆ.

ಕರ್ನಾಟಕದ ಉತ್ತರ ಒಳನಾಡಿನಲ್ಲಿ ಮಳೆಯಾಗುತ್ತಿದ್ದು, ಶನಿವಾರ ಮತ್ತು ಭಾನುವಾರ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಹೊರತಾಗಿ ದೇಶದ ವಿವಿಧ ಭಾಗಗಳಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ. ಈಶಾನ್ಯ ಪ್ರದೇಶದಲ್ಲಿ ಮುಂದಿನ 2 ದಿನಗಳಲ್ಲಿ ಅಸ್ಸಾಂ, ಮೇಘಾಲಯ ಮತ್ತು ಸಿಕ್ಕಿಂನಲ್ಲಿ ಮಧ್ಯಮದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: ಇಂದು ಭಾರಿ ಮಳೆ ಸಾಧ್ಯತೆ; ದಕ್ಷಿಣ ಕನ್ನಡ, ಮಂಡ್ಯ, ಮೈಸೂರು ಶಾಲೆಗಳಿಗೆ ರಜೆ ಘೋಷಣೆ

ಇಂದು ಕೇರಳ-ಮಾಹೆ, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕರ್ನಾಟಕದಲ್ಲಿ ಮಳೆಯಾಗಲಿದೆ. ಕರ್ನಾಟಕದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಹಗುರ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕ ಬಳ್ಳಾಪುರ, ಚಿಕ್ಕಮಂಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರಿನಲ್ಲಿ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಉಡುಪಿ, ಹಾವೇರಿ, ಗದಗ, ರಾಯಚೂರು, ಬಾಗಲಕೋಟೆ, ಕೊಪ್ಪಳ, ದಾವಣಗೆರೆ, ಬಳ್ಳಾರಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಸಾಧಾರಣ ಮಳೆ ಹಾಗೂ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನ ಕಮಲನಗರ, ಶಂಕರಮಠ, ಲಗ್ಗೆರೆ ಮತ್ತು ನಾಗಾವರ ಪ್ರದೇಶಗಳಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿದರು. ನೈಋತ್ಯ ಅರೇಬಿನ್ ಸಮುದ್ರದಲ್ಲಿ ಚಂಡಮಾರುತ ಎದ್ದಿರುವ ಹಿನ್ನೆಲೆಯಲ್ಲಿ ಇಂದು ಕರ್ನಾಟಕದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ತಜ್ಞ, ಧಾರವಾಡ ಕೃಷಿ ವಿವಿ ಹವಾಮಾನ ವಿಭಾಗ ಮುಖ್ಯಸ್ಥ ಡಾ. ಆರ್.ಎಚ್. ಪಾಟೀಲ್ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ಮಳೆಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್