Karnataka Rain: ಅಸಾನಿ ಚಂಡಮಾರುತ ಎಫೆಕ್ಟ್: ಇನ್ನೆರಡು ದಿನ ಸಿಲಿಕಾನ್ ಸಿಟಿ ಫುಲ್ ಕೂಲ್ ಕೂಲ್

ಬೆಂಗಳೂರು ಮತ್ತು ಬೆಂ. ಗ್ರಾಮಾಂತರ, ರಾಮನಗರ ಜಿಲ್ಲೆಗಳಲ್ಲಿ ದಿನವಿಡೀ ಮೋಡ ಮುಸುಕಿದ ವಾತಾವರಣವಿರಲಿದೆ. ಥಂಡಿ, ಗಾಳಿ ಜತೆಗೆ ಬಿಟ್ಟು ಬಿಟ್ಟು ಚಿಟಿಜಿಟಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವಿಜ್ಞಾನ ಪ್ರಸಾದ್ ಹೇಳಿಕೆ ನೀಡಿದ್ದಾರೆ. 

Karnataka Rain: ಅಸಾನಿ ಚಂಡಮಾರುತ ಎಫೆಕ್ಟ್: ಇನ್ನೆರಡು ದಿನ ಸಿಲಿಕಾನ್ ಸಿಟಿ ಫುಲ್ ಕೂಲ್ ಕೂಲ್
ಪ್ರಾತಿನಿಧಿಕ ಚಿತ್ರ
Image Credit source: vijaykarnataka.com
Edited By:

Updated on: May 13, 2022 | 8:33 AM

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾದ ಅಸಾನಿ (Cyclone Asani) ಚಂಡಮಾರುತ ಎಫೆಕ್ಟ್​ನಿಂದಾಗಿ ಇನ್ನೆರಡು ದಿನ ಸಿಲಿಕಾನ್ ಸಿಟಿ ಫುಲ್ ಕೂಲ್ ಕೂಲ್ ಆಗಿರಲಿದೆ. ತುಂತುರು ಮಳೆ ಜತೆಗೆ ಮೋಡ ಕವಿದ ವಾತಾವರಣವಿದ್ದು, ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಹವಾಮಾನ ಹೀಗೆ ಇರಲಿದೆ. ಇನ್ನೂ 2 ದಿನಗಳ ಕಾಲ ಮುಂದುವರೆಯಲಿರೋ ಸಾಧ್ಯತೆಯಿದ್ದು, ದಕ್ಷಿಣ ಕನ್ನಡ, ಉಡುಪಿ, ತುಮಕೂರು, ಬಳ್ಳಾರಿ, ಚಿತ್ರದುರ್ಗ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಸೇರಿದಂತೆ ರಾಜ್ಯದ 8 ಜಿಲ್ಲೆಗಳಲ್ಲಿ ತುಂತುರು ಮಳೆಯಾಗಲಿದೆ. ಗಾಳಿ ಸಹಿತ ಮಳೆ ಆರ್ಭಟದ ಮುನ್ಸೂಚನೆ ಇದೆ. ಬೆಂಗಳೂರು ಮತ್ತು ಬೆಂ. ಗ್ರಾಮಾಂತರ, ರಾಮನಗರ ಜಿಲ್ಲೆಗಳಲ್ಲಿ ದಿನವಿಡೀ ಮೋಡ ಮುಸುಕಿದ ವಾತಾವರಣವಿರಲಿದೆ. ಥಂಡಿ, ಗಾಳಿ ಜತೆಗೆ ಬಿಟ್ಟು ಬಿಟ್ಟು ಚಿಟಿಜಿಟಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವಿಜ್ಞಾನ ಪ್ರಸಾದ್ ಹೇಳಿಕೆ ನೀಡಿದ್ದಾರೆ.

ಕರ್ನಾಟಕದ ನಾನಾ ಭಾಗಗಳಲ್ಲಿ ಇಂದು ಕೂಡ ಮಳೆ ಸಾಧ್ಯತೆ

ಕರ್ನಾಟಕದ ನಾನಾ ಭಾಗಗಳಲ್ಲಿ ಈಗಾಗಲೇ ಮಳೆ ಅಬ್ಬರ ಶುರುವಾಗಿದ್ದು, ಇಂದು ಕೂಡ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಈ ಬಗ್ಗೆ ರಾಜ್ಯ ನೈಸರ್ಗಿಕ ವಿಕೋಪ‌ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು, ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆಗಳಿದ್ದು, ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ನೈಸರ್ಗಿಕ ವಿಕೋಪ‌ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಾದ್ಯಂತ ಅಲ್ಲಲ್ಲಿ ಮಿಂಚಿನೊಂದಿಗೆ ಗುಡುಗು ಸಂಭವಿಸುವ ಸಾಧ್ಯತೆ ಬಗ್ಗೆ ಮುನ್ಸೂಚನೆ ನೀಡಿದ್ದು, ಸುಮಾರು 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ 15 ರಿಂದ 65 ಮಿ.ಮೀ ಮಳೆಯ ಬಗ್ಗೆ ಮುನ್ಸೂಚನೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಕಳೆದ 22 ವರ್ಷಗಳಲ್ಲಿ ಮೇ ತಿಂಗಳಲ್ಲಿ ಮೊದಲ ಬಾರಿಗೆ ಅತ್ಯಂತ ಚಳಿಯ ವಾತಾವರಣ ದಾಖಲಾಗಿದೆ. ನಿನ್ನೆ ಅಸಾನಿ ಚಂಡಮಾರುತದ ಪ್ರಭಾವದಿಂದ ಬೆಂಗಳೂರಿನಲ್ಲಿ 2000ರಿಂದ ಮೇ ತಿಂಗಳಲ್ಲಿ ಇಂದು ಅತ್ಯಂತ ಚಳಿಯ ದಿನ ದಾಖಲಾಗಿದೆ. ಬೆಂಗಳೂರಿನಲ್ಲಿ ಇಂದು 3.5 ಮಿಮೀ ಮಳೆ, ಬಲವಾದ ಗಾಳಿ ಮತ್ತು ಮೋಡ ಕವಿದ ಆಕಾಶವಿತ್ತು. ಇಲ್ಲಿನ ಕನಿಷ್ಠ ತಾಪಮಾನವು 21.9 ಡಿಗ್ರಿ ಸೆಲ್ಸಿಯಸ್‌ನಿಂದ 20.2 ಡಿಗ್ರಿ ಸೆಲ್ಸಿಯಸ್‌ಗೆ ಇಳಿದಿದೆ. ಕಲಬುರ್ಗಿಯಲ್ಲಿ ರಾಜ್ಯದಲ್ಲಿಯೇ ಗರಿಷ್ಠ ಉಷ್ಣಾಂಶ 42.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.