ರಾಜ್ಯದಲ್ಲಿ ವ್ಯಾಪಕ ಮಳೆ ಹಾನಿ: ಪರಿಹಾರ ಕಾಮಗಾರಿಗಳಿಗೆ 500 ಕೋಟಿ ಬಿಡುಗಡೆ; ಸಿಎಂ ಬೊಮ್ಮಾಯಿ ಆದೇಶ

| Updated By: ವಿವೇಕ ಬಿರಾದಾರ

Updated on: Jul 15, 2022 | 4:51 PM

ರಾಜ್ಯದಲ್ಲಿ ಮಳೆಯಿಂದ ಮನೆ, ಬೆಳೆ ಹಾನಿಯಾಗಿದ್ದು, ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಖಾಸಗಿ ರೆಸಾರ್ಟ್​ನಲ್ಲಿ ಜಿಲ್ಲಾಡಳಿತಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿ, ಮೂಲಸೌಕರ್ಯ ಮರು ಸ್ಥಾಪಿಸಲು ಕಾಮಗಾರಿಗಳಿಗೆ 500 ಕೋಟಿ ರೂಪಾಯಿ ಬಿಡುಗಡೆಗೆ ಮಾಡುವಂತೆ ಹಣಕಾಸು ಇಲಾಖೆಗೆ ಅವರು ಆದೇಶಿಸಿದ್ದಾರೆ. 

ರಾಜ್ಯದಲ್ಲಿ ವ್ಯಾಪಕ ಮಳೆ ಹಾನಿ: ಪರಿಹಾರ ಕಾಮಗಾರಿಗಳಿಗೆ 500 ಕೋಟಿ ಬಿಡುಗಡೆ; ಸಿಎಂ ಬೊಮ್ಮಾಯಿ ಆದೇಶ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರಕಾರಕ್ಕೆ ಒಂದು ವರ್ಷ
Follow us on

ಬೆಂಗಳೂರು: ರಾಜ್ಯದಲ್ಲಿ ಮಳೆಯಿಂದ ಮನೆ, ಬೆಳೆ ಹಾನಿಯಾಗಿದ್ದು, ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಖಾಸಗಿ ರೆಸಾರ್ಟ್​ನಲ್ಲಿ ಜಿಲ್ಲಾಡಳಿತಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿ, ಮೂಲಸೌಕರ್ಯ ಮರು ಸ್ಥಾಪಿಸಲು ಕಾಮಗಾರಿಗಳಿಗೆ 500 ಕೋಟಿ ರೂಪಾಯಿ ಬಿಡುಗಡೆಗೆ ಮಾಡುವಂತೆ ಹಣಕಾಸು ಇಲಾಖೆಗೆ ಅವರು ಆದೇಶಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯಿಂದ 250 ಕಿ.ಮೀ. ರಸ್ತೆ ಹಾನಿಯಾಗಿದೆ. ತುಂಗಾ, ಭದ್ರಾ ನದಿಯಲ್ಲಿ ಒಳಹರಿವು ಪ್ರಮಾಣ ಹೆಚ್ಚಳವಾಗುತ್ತಿದೆ. ಭದ್ರಾವತಿಯಲ್ಲಿ 4 ಕಡೆ ಮನೆಗಳಿಗೆ ನೀರು ನುಗ್ಗಿದೆ ಎಂದು ಮಾಹಿತಿ ಬಂದಿದೆ.  ಭದ್ರಾವತಿ ಸಮಸ್ಯೆ ಕೇವಲ ಸ್ಥಳೀಯ ಆಡಳಿತದ ಮೇಲೆ ಬಿಡಬೇಡಿ. ಕಂದಾಯ, ಪೊಲೀಸ್​ ಇಲಾಖೆ ಒಟ್ಟಾಗಿ ಕಾರ್ಯ ನಿರ್ವಹಿಸಬೇಕು ಎಂದು ವಿಡಿಯೋ ಕಾನ್ಫರೆನ್ಸ್​ನಲ್ಲಿ ಶಿವಮೊಗ್ಗ ಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ.

ಮುಖ್ಯಮಂತ್ರಿಗಳ ವಿಡಿಯೋ ವರ್ಚುವಲ್  ಸಭೆಯಲ್ಲಿ ಮಳೆ ಹಾನಿ ಸಂಬಂಧಿಸಿದ ಇಲಾಖೆಗಳ ಸಚಿವರು, ಉಸ್ತುವಾರಿ ಕಾರ್ಯದರ್ಶಿಗಳು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಚಿಕ್ಕಬಳ್ಳಾಪುರ, ಹಾಸನ, ಬೀದರ್, ಬೆಳಗಾವಿ, ಕಲಬುರಗಿ, ಮೈಸೂರು, ಹಾವೇರಿ, ಧಾರವಾಡ, ದಾವಣಗೆರೆ, ಯಾದಗಿರಿ, ಬಾಗಲಕೋಟೆ, ವಿಜಯಪುರ, ರಾಯಚೂರು, ವಿಜಯನಗರ, ಚಾಮರಾಜನಗರ, ಮಂಡ್ಯ, ಬಳ್ಳಾರಿ ಜಿಲ್ಲಾಡಳಿತ ಭಾಗಿಯಾಗಿದ್ದವರು.

ವೀಡಿಯೋ ಕಾನ್ಫರೆನ್ಸ್ ನಲ್ಲಿ ರಾಜ್ಯದ ಜಲಾಶಯಗಳಲ್ಲಿನ ನೀರಿನ ಸಂಗ್ರಹ ಮಟ್ಟ ಹಾಗೂ ಕಳೆದ ಹದಿನೈದು ದಿನಗಳಲ್ಲಿನ‌ ಪರಿಸ್ಥಿತಿಯ ಬಗ್ಗೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮನೋಜ್ ರಾಜನ್ ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದ್ದಾರೆ.

Published On - 3:43 pm, Fri, 15 July 22