Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ 5 ದಿನ ಭಾರಿ ಮಳೆ ಸಾಧ್ಯತೆ
Karnataka Rain Updates: ತಮಿಳುನಾಡಿನಲ್ಲಿ ಟ್ರಫ್ ಉಂಟಾಗಿರುವ ಹಿನ್ನೆಲೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ 5 ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು: ತಮಿಳುನಾಡಿನಲ್ಲಿ ಟ್ರಫ್ ಉಂಟಾಗಿರುವ ಹಿನ್ನೆಲೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ 5 ದಿನ ಭಾರಿ ಮಳೆಯಾಗುವ (Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರದಲ್ಲಿ 3 ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಹಾಗೂ ಉತ್ತರ ಒಳನಾಡು, ಕರಾವಳಿಯಲ್ಲಿ ಮಳೆ ಆಗಲಿದೆ. ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಐದು ದಿನ ಮಳೆ ಸಾಧ್ಯತೆಯಿದ್ದು, ಕೊಡಗು, ಚಾಮರಾಜನಗರ, ಮೈಸೂರು, ರಾಮನಗರ, ಮಂಡ್ಯ ವಿಜಯನಗರ, ಶಿವಮೊಗ್ಗ, ಹಾಸನ ತುಮಕೂರು, ಚಿಕ್ಕಮಗಳೂರು, ದಾವಣಗೆರೆ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ,ಕೋಲಾರ, ಚಿಕ್ಕಬಳ್ಳಾಪು ಸೇರಿದಂತೆ 15 ಜಿಲ್ಲೆಗಳಿಗೆ ಮಳೆಯ ಅಲರ್ಟ್ ಘೋಷಿಸಿದೆ. ಉತ್ತರ ಒಳನಾಡಿನ 8 ಜಿಲ್ಲೆಗಳಲ್ಲಿ 3 ದಿನ ಮಳೆಯಾಗುವ ಸಂಭವವಿದೆ. ಮತ್ತು ಕರಾವಳಿ ಜಿಲ್ಲೆಗಳಲ್ಲಿ 2 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳಿಂದ ಮುನ್ಸೂಚನೆ ನೀಡಿಲಾಗಿದೆ.
ಉತ್ತರ ಒಳನಾಡಿಗೆ ಇಂದಿನಿಂದ ಮೂರು ದಿನ ಮಳೆ ಸಾಧ್ಯತೆಯಿದ್ದು, ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಕಲ್ಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳಿಗೆ ಮಳೆಯ ಬಗ್ಗೆ ಎಚ್ಚರಿಕೆ ನೀಡಲಾಗಿದೆ. ಕರಾವಾಳಿಗೆ ಇಂದಿನಿಂದ ಎರಡು ದಿನ ಮಳೆ ಇರಲಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
Thunderstorm pop ups towards North of #Bengaluru
OMR in full action#KarnatakaRains pic.twitter.com/zCMwFSAFjD
— Karnataka Weather (@Bnglrweatherman) April 21, 2023
ಇನ್ನು ಬೆಂಗಳೂರಿಗೆ ಇಂದಿಂದ ಮೂರು ದಿನ ಮಳೆಯಾಗುವ ಸಾಧ್ಯಾತೆ ಇದ್ದು, ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆಯಿಂದ ಮಾಹಿತಿ ನೀಡಲಾಗಿದೆ.
ಇದನ್ನೂ ಓದಿ: Karnataka Weather: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ
ಗುಡುಗು ಸಹಿತ ಭಾರೀ ಮಳೆ
ಕರ್ನಾಟಕದಲ್ಲಿ ಮುಂದಿನ 48 ಗಂಟೆಗಳಲ್ಲಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಂತೆ ಇಂದು ಬೆಳಗಾವಿಯಲ್ಲಿ ಗಾಳಿ ಸಹಿತ ಮಳೆಯಾಗಿದ್ದು, ನಿರಂತರ ಒಂದು ಗಂಟೆಗಳ ಕಾಲ ಮಳೆಯಾಗಿದೆ. ಇತ್ತ ಹಾಸನ ಜಿಲ್ಲೆಯಲ್ಲೂ ಭಾರೀ ಮಳೆಯಾಗಿದ್ದು, ರೋಡ್ ಶೋ ನಡೆಸುತ್ತಿದ್ದ ಜೆಡಿಎಸ್ ಕಾರ್ಯಕರ್ತರು ಮಳೆಯಲ್ಲಿ ಮಿಂದೆದ್ದರು. ಇನ್ನೊಂದೆಡೆ, ಗದಗ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದೆ. ಒಟ್ಟಾರೆಯಾಗಿ ಸುಡು ಬಿಸಿಲಿಗೆ ಬೆಂದಿದ್ದ ಈ ಮೂರು ಜಿಲ್ಲೆಗಳಲ್ಲಿನ ಜನರು ಮತ್ತು ಪರಿಸರವನ್ನು ವರುಣ ದೇವ ತಂಪರೆದಿದ್ದಾನೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 4:54 pm, Fri, 21 April 23