AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ಬೆಂಗಳೂರು, ಕರಾವಳಿ ಸೇರಿ ಹಲವೆಡೆ ನಾಳೆಯಿಂದ ಭಾರೀ ಮಳೆ

Bengaluru Weather Today: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ನಾಳೆಯಿಂದ ಬೆಂಗಳೂರು, ಕರಾವಳಿ, ದಕ್ಷಿಣ ಒಳನಾಡಿನ ಅನೇಕ ಕಡೆ, ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆಯಿದೆ.

Karnataka Rain: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ಬೆಂಗಳೂರು, ಕರಾವಳಿ ಸೇರಿ ಹಲವೆಡೆ ನಾಳೆಯಿಂದ ಭಾರೀ ಮಳೆ
ಬೆಂಗಳೂರಿನಲ್ಲಿ ಮಳೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Nov 21, 2022 | 10:45 AM

Bangalore Rains: ಬೆಂಗಳೂರು: ಕರ್ನಾಟಕದಲ್ಲಿ (Rain in Karnataka) ಅಬ್ಬರಿಸಿದ ಮಳೆರಾಯ ಕಳೆದ 1 ವಾರದಿಂದ ಶಾಂತಗೊಂಡಿದ್ದ. ಮಳೆ ಕಡಿಮೆಯಾಗಿ, ವಿಪರೀತ ಚಳಿ ಶುರುವಾಗಿತ್ತು. ಬೆಂಗಳೂರಿನಲ್ಲಿ ಸುಮಾರು 10 ದಿನಗಳಿಂದ ಚಳಿ ಹೆಚ್ಚಳವಾಗಿತ್ತು. ಚಳಿಯ ನಡುವೆಯೇ ಬೆಂಗಳೂರಿನಲ್ಲಿ (Bengaluru Rain) ನಾಳೆಯಿಂದ (ನವೆಂಬರ್ 22) ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ನಾಳೆಯಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bangalore Weather)  ಮತ್ತೆ ಮಳೆಯಾಗುವ ಸಾಧ್ಯತೆಯಿದೆ.

ಕರ್ನಾಟಕದ ಕರಾವಳಿಯ ಬಹುತೇಕ ಕಡೆ, ದಕ್ಷಿಣ ಒಳನಾಡಿನ ಅನೇಕ ಕಡೆ, ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಮಂಗಳವಾರದಿಂದ ಮಳೆ ಸುರಿಯುವ ಸಾಧ್ಯತೆಯಿದೆ. ಹೀಗಾಗಿ, ಚಳಿ ಕೊಂಚ ಕಡಿಮೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ರಾಮನಗರ, ಮೈಸೂರು, ತುಮಕೂರು, ವಿಜಯಪುರ ಹಾಗೂ ಹಾವೇರಿ ಸೇರಿ ಇತರ ಜಿಲ್ಲೆಗಳಲ್ಲಿ ನಾಳೆಯಿಂದ ಮಳೆಯ ಮುನ್ಸೂಚನೆಯಿದೆ.

ಇದನ್ನೂ ಓದಿ: Chamarajanagar: ತುಂತುರು ಮಳೆಯ ನಡುವೆ ಬಿಳಿಗಿರಿ ರಂಗನಬೆಟ್ಟಕ್ಕೆ ಮುತ್ತಿಕ್ಕುತ್ತಿರುವ ಮೋಡಗಳು

ಈಗಾಗಲೇ ರಾಜ್ಯದಲ್ಲಿ ಚಳಿ ಕೂಡ ಏರಿಕೆಯಾಗಿದ್ದು, ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಕಡಿಮೆಯಾಗುವ ಬಗ್ಗೆಯೂ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಇದರ ಮಧ್ಯೆ ಈಗ ಮತ್ತೆ ಮಳೆಯ ಅಲರ್ಟ್ ನೀಡಲಾಗಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಮಂಜು ಕೂಡ ಸುರಿಯುತ್ತಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಷಿಯಸ್, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಷಿಯಸ್ ಇರಲಿದೆ.

ಇಂದು ಯಾವ ರಾಜ್ಯಗಳಲ್ಲಿ ಮಳೆ?: ಇಂದು ನೆರೆಯ ರಾಜ್ಯಗಳಾದ ಆಂಧ್ರಪ್ರದೇಶ, ತೆಲಂಗಾಣ, ಕೇರಳ ಮತ್ತು ತಮಿಳುನಾಡಿನಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಮೇಲೆ ಚದುರಿದ ತುಂತುರು ಮತ್ತು ಗುಡುಗು ಸಹಿತ ಮಳೆ ಬೀಳುವ ಸಾಧ್ಯತೆಯಿದೆ. ಒಡಿಶಾದಲ್ಲೂ ಮಳೆ ಹೆಚ್ಚಾಗಲಿದೆ.

ಇದನ್ನೂ ಓದಿ: Bengaluru Weather: ಕರ್ನಾಟಕದಲ್ಲಿ ತಗ್ಗಿದ ಮಳೆಯ ಅಬ್ಬರ; ಬೆಂಗಳೂರಿನಲ್ಲಿ ಇಂದು ವಿಪರೀತ ಚಳಿ ಸಾಧ್ಯತೆ

ನಾಳೆ ಆಂಧ್ರಪ್ರದೇಶ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಮೇಲೆ ಚದುರಿದ ತುಂತುರು ಮತ್ತು ಗುಡುಗು ಸಹಿತ ಕೆಲವು ಭಾರಿ ಬೀಳುವ ಸಾಧ್ಯತೆಯಿದೆ. ತಮಿಳುನಾಡು, ಕರ್ನಾಟಕ, ಕೇರಳ, ತೆಲಂಗಾಣ ಮತ್ತು ಒಡಿಶಾದಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ